Millat al-Islam

Chapter 51 · 60 verses · Abdussalam Puthige

Surah Adh-Dhariyat in Kannada

Arabic with tafsir Listen to Surah Adh-Dhariyat (1246 reciters)

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلذَّٰرِيَٰتِ ذَرۡوًا ١ಅವರು ಹೇಳುತ್ತಿರುವುದನ್ನೆಲ್ಲಾ ನಾವು ಚೆನ್ನಾಗಿ ಬಲ್ಲೆವು. ನೀವು ಅವರನ್ನು ಬಲವಂತ ಪಡಿಸುವವರಲ್ಲ. ನನ್ನ ಮುನ್ನೆಚ್ಚರಿಕೆಯನ್ನು ಅಂಜುವವರಿಗೆ ನೀವು ಕುರ್‌ಆನಿನ ಮೂಲಕ ಉಪದೇಶಿಸಿರಿ فَٱلۡحَٰمِلَٰتِ وِقۡرًا ٢ಧೂಳೆಬ್ಬಿಸುವ ಸುಳಿಗಾಳಿಗಳಾಣೆ فَٱلۡجَٰرِيَٰتِ يُسۡرًا ٣ಅವು (ಮೋಡಗಳ) ಹೊರೆಯನ್ನು ಹೊತ್ತಿರುತ್ತವೆ فَٱلۡمُقَسِّمَٰتِ أَمۡرًا ٤ತರುವಾಯ ಅವು, ಸೌಮ್ಯವಾಗಿ ಚಲಿಸತೊಡಗುತ್ತವೆ إِنَّمَا تُوعَدُونَ لَصَادِقٌ ٥ಮತ್ತು ಆದೇಶಾನುಸಾರ (ಮಳೆಯನ್ನು) ವಿತರಿಸುತ್ತವೆ وَإِنَّ ٱلدِّينَ لَوَٰقِعٌ ٦ನಿಮಗೆ ನೀಡಲಾಗಿರುವ ವಾಗ್ದಾನವು ಖಂಡಿತ ಸತ್ಯವಾಗಿದೆ وَٱلسَّمَآءِ ذَاتِ ٱلۡحُبُكِ ٧ಪ್ರತಿಫಲದ ದಿನವು ಖಂಡಿತ ಬರಲಿದೆ إِنَّكُمۡ لَفِي قَوۡلٍ مُّخۡتَلِفٍ ٨ದಾರಿಗಳಿರುವ ಆಕಾಶದಾಣೆ يُؤۡفَكُ عَنۡهُ مَنۡ أُفِكَ ٩ನೀವು ವಿವಿಧ ವಾದಗಳಲ್ಲಿ ತಲ್ಲೀನರಾಗಿರುವಿರಿ قُتِلَ ٱلۡخَرَّٰصُونَ ١٠ದೂರಗೊಳಿಸಲ್ಪಟ್ಟವನು ಮಾತ್ರ ಇದರಿಂದ (ಸತ್ಯದಿಂದ) ದೂರವಾಗುತ್ತಾನೆ ٱلَّذِينَ هُمۡ فِي غَمۡرَةٍ سَاهُونَ ١١ನಾಶವಾದರು, ಊಹಾಪೋಹಗಳನ್ನು ನೆಚ್ಚಿ ಕೊಂಡವರು يَسۡـَٔلُونَ أَيَّانَ يَوۡمُ ٱلدِّينِ ١٢ಅವರು ಎಚ್ಚರವಿಲ್ಲದೆ, ಮೈ ಮರೆತ ಸ್ಥಿತಿಯಲ್ಲಿದ್ದಾರೆ يَوۡمَ هُمۡ عَلَى ٱلنَّارِ يُفۡتَنُونَ ١٣ಪ್ರತಿಫಲದ ದಿನ ಯಾವಾಗ ಬಂದೀತೆಂದು ಅವರು ಕೇಳುತ್ತಾರೆ ذُوقُواْ فِتۡنَتَكُمۡ هَٰذَا ٱلَّذِي كُنتُم بِهِۦ تَسۡتَعۡجِلُونَ ١٤ಅಂದು ಅವರು ಬೆಂಕಿಯ ಮೇಲೆ ಹೊರಳಾಡಿಸಲ್ಪಡುವರು إِنَّ ٱلۡمُتَّقِينَ فِي جَنَّٰتٍ وَعُيُونٍ ١٥(ಅವರೊಡನೆ ಹೇಳಲಾಗುವುದು;) ಸವಿಯಿರಿ ನಿಮ್ಮ ಕಿಡಿಗೇಡಿತನವನ್ನು, ನೀವು ಆತುರ ಪಡುತ್ತಿದ್ದ ವಸ್ತು ಇದುವೇ ءَاخِذِينَ مَآ ءَاتَىٰهُمۡ رَبُّهُمۡۚ إِنَّهُمۡ كَانُواْ قَبۡلَ ذَٰلِكَ مُحۡسِنِينَ ١٦ಖಂಡಿತ (ಸ್ವರ್ಗದ) ತೋಟಗಳಲ್ಲಿ ಹಾಗೂ ಚಿಲುಮೆಗಳಲ್ಲಿರುವರು كَانُواْ قَلِيلًا مِّنَ ٱلَّيۡلِ مَا يَهۡجَعُونَ ١٧ತಮ್ಮ ಒಡೆಯನು ನೀಡಿದ್ದನ್ನು ಸ್ವೀಕರಿಸುತ್ತಿರುವರು. ಈ ಹಿಂದೆ (ಇಹಲೋಕದಲ್ಲಿ) ಅವರು ಸತ್ಕರ್ಮಿಗಳಾಗಿದ್ದರು وَبِٱلۡأَسۡحَارِ هُمۡ يَسۡتَغۡفِرُونَ ١٨ಅವರು ರಾತ್ರಿಯಲ್ಲಿ ತುಸು ಹೊತ್ತು ಮಾತ್ರ ನಿದ್ರಿಸುತ್ತಿದ್ದರು وَفِيٓ أَمۡوَٰلِهِمۡ حَقٌّ لِّلسَّآئِلِ وَٱلۡمَحۡرُومِ ١٩ಮುಂಜಾವಿನಲ್ಲಿ ಅವರು (ಅಲ್ಲಾಹನೊಡನೆ) ಕ್ಷಮೆಯಾಚಿಸುತ್ತಿದ್ದರು وَفِي ٱلۡأَرۡضِ ءَايَٰتٌ لِّلۡمُوقِنِينَ ٢٠ಅವರ ಸಂಪತ್ತಿನಲ್ಲಿ, ಬೇಡುವವರಿಗೆ ಹಾಗೂ ವಂಚಿತರಿಗೆ ಹಕ್ಕಿತ್ತು وَفِيٓ أَنفُسِكُمۡۚ أَفَلَا تُبۡصِرُونَ ٢١ಅಚಲ ನಂಬಿಕೆ ಉಳ್ಳವರಿಗೆ ಭೂಮಿಯಲ್ಲಿ (ಪಾಠದಾಯಕ) ಪುರಾವೆಗಳಿವೆ وَفِي ٱلسَّمَآءِ رِزۡقُكُمۡ وَمَا تُوعَدُونَ ٢٢ಮತ್ತು ನೀವೇನು ಸ್ವತಃ ನಿಮ್ಮನ್ನೇ ನೋಡುವುದಿಲ್ಲವೇ فَوَرَبِّ ٱلسَّمَآءِ وَٱلۡأَرۡضِ إِنَّهُۥ لَحَقٌّ مِّثۡلَ مَآ أَنَّكُمۡ تَنطِقُونَ ٢٣ಮತ್ತು ಆಕಾಶದಲ್ಲಿ ನಿಮ್ಮ ಆಹಾರವಿದೆ ಮತ್ತು ನಿಮಗೆ ವಾಗ್ದಾನ ಮಾಡಲಾಗಿರುವ ವಸ್ತುವೂ ಇದೆ هَلۡ أَتَىٰكَ حَدِيثُ ضَيۡفِ إِبۡرَٰهِيمَ ٱلۡمُكۡرَمِينَ ٢٤ಆಕಾಶ ಮತ್ತು ಭೂಮಿಯ ಒಡೆಯನಾಣೆ, ಅದು (ಪರಲೋಕ) ಸತ್ಯ. ನೀವು ಮಾತನಾಡಬಲ್ಲಿರೆಂಬುದು ಸತ್ಯವಾಗಿರುವಂತೆ إِذۡ دَخَلُواْ عَلَيۡهِ فَقَالُواْ سَلَٰمًاۖ قَالَ سَلَٰمٌ قَوۡمٌ مُّنكَرُونَ ٢٥ಇಬ್ರಾಹೀಮರ ಆದರಣೀಯ ಅತಿಥಿಗಳ ಸಮಾಚಾರ ನಿಮಗೆ ತಲುಪಿದೆಯೇ فَرَاغَ إِلَىٰٓ أَهۡلِهِۦ فَجَآءَ بِعِجۡلٍ سَمِينٍ ٢٦ಅವರು, ಅವರ (ಇಬ್ರಾಹೀಮರ) ಬಳಿಗೆ ಬಂದು ‘ಸಲಾಮ್’ ಎಂದರು. ಅವರು, ‘‘ಸಲಾಮ್, ಅಪರಿಚಿತರೇ’’ ಎಂದರು فَقَرَّبَهُۥٓ إِلَيۡهِمۡ قَالَ أَلَا تَأۡكُلُونَ ٢٧ಆ ಬಳಿಕ ಅವರು, ತಮ್ಮ ಮನೆಯವರ ಬಳಿಗೆ ಹೋಗಿ ಒಂದು ದಷ್ಟಪುಷ್ಟವಾದ (ಹುರಿದ) ಕರುವನ್ನು ತಂದರು فَأَوۡجَسَ مِنۡهُمۡ خِيفَةًۖ قَالُواْ لَا تَخَفۡۖ وَبَشَّرُوهُ بِغُلَٰمٍ عَلِيمٍ ٢٨ಅವರು (ಇಬ್ರಾಹೀಮರು), ಅವರ (ಅತಿಥಿಗಳ) ಬಳಿಗೆ ಹೋಗಿ, ನೀವು ಉಣ್ಣುವುದಿಲ್ಲವೇ? ಎಂದರು فَأَقۡبَلَتِ ٱمۡرَأَتُهُۥ فِي صَرَّةٍ فَصَكَّتۡ وَجۡهَهَا وَقَالَتۡ عَجُوزٌ عَقِيمٌ ٢٩ಅವರಿಗೆ (ಇಬ್ರಾಹೀಮರಿಗೆ) ಅವರ ಕುರಿತು ಭಯವಾಯಿತು. ಅವರು (ಅತಿಥಿಗಳು), ‘‘ನೀವು ಅಂಜಬೇಡಿ’’ ಎಂದರು ಮತ್ತು ಅವರಿಗೆ ಒಬ್ಬ ಜ್ಞಾನವಂತ ಪುತ್ರನ ಶುಭವಾರ್ತೆ ನೀಡಿದರು قَالُواْ كَذَٰلِكِ قَالَ رَبُّكِۖ إِنَّهُۥ هُوَ ٱلۡحَكِيمُ ٱلۡعَلِيمُ ٣٠ಅವರ ಪತ್ನಿಯು ಮುಂದೆ ಬಂದು ಅಚ್ಚರಿಯಿಂದ ತನ್ನ ಮುಖಕ್ಕೆ ಕೈ ಇಟ್ಟು, ‘‘ಬಂಜೆಯಾಗಿರುವ ವೃದ್ಧೆಗೆ (ಮಗುವಾಗುವುದೇ)?’’ ಎಂದರು

Juz 27

۞ قَالَ فَمَا خَطۡبُكُمۡ أَيُّهَا ٱلۡمُرۡسَلُونَ ٣١ಅವರು (ಅತಿಥಿಗಳು) ಹೇಳಿದರು; ‘‘ಹಾಗೆಯೇ ಆಗುವುದು. (ಹಾಗೆಂದು) ನಿಮ್ಮ ಒಡೆಯನು ಹೇಳಿರುವನು. ಅವನು ಖಂಡಿತ ಯುಕ್ತಿವಂತನೂ ಜ್ಞಾನಿಯೂ ಆಗಿರುವನು’’ قَالُوٓاْ إِنَّآ أُرۡسِلۡنَآ إِلَىٰ قَوۡمٍ مُّجۡرِمِينَ ٣٢ಅವರು (ಇಬ್ರಾಹೀಮ್) ಕೇಳಿದರು; ದೂತರೇ, ನಿಮ್ಮ ಗುರಿ ಏನು لِنُرۡسِلَ عَلَيۡهِمۡ حِجَارَةً مِّن طِينٍ ٣٣ಅವರು (ಮಲಕ್‌ಗಳು) ಹೇಳಿದರು; ‘‘ಒಂದು ಅಪರಾಧಿ ಜನಾಂಗದೆಡೆಗೆ ನಮ್ಮನ್ನು ಕಳಿಸಲಾಗಿದೆ’’ مُّسَوَّمَةً عِندَ رَبِّكَ لِلۡمُسۡرِفِينَ ٣٤‘‘ಅವರ ಮೇಲೆ ಮಣ್ಣಿನ ಕಲ್ಲುಗಳನ್ನು ಸುರಿಸಬೇಕೆಂದು ನಮಗೆ ಆದೇಶಿಸಲಾಗಿದೆ’’ فَأَخۡرَجۡنَا مَن كَانَ فِيهَا مِنَ ٱلۡمُؤۡمِنِينَ ٣٥‘‘ನಿಮ್ಮ ಒಡೆಯನ ಬಳಿ ಅವುಗಳನ್ನು (ಆ ಕಲ್ಲುಗಳನ್ನು), ಅತಿರೇಕ ಎಸಗುವವರಿಗೆಂದೇ ಗುರುತಿಸಿಡಲಾಗಿದೆ’’ فَمَا وَجَدۡنَا فِيهَا غَيۡرَ بَيۡتٍ مِّنَ ٱلۡمُسۡلِمِينَ ٣٦ಕೊನೆಗೆ ನಾವು, ಅಲ್ಲಿದ್ದ ವಿಶ್ವಾಸಿಗಳನ್ನು ಹೊರತೆಗೆದೆವು وَتَرَكۡنَا فِيهَآ ءَايَةً لِّلَّذِينَ يَخَافُونَ ٱلۡعَذَابَ ٱلۡأَلِيمَ ٣٧ಅಲ್ಲಿ (ಆ ನಾಡಿನಲ್ಲಿ) ನಾವು ಮುಸ್ಲಿಮರ ಒಂದು ಮನೆಯನ್ನು ಮಾತ್ರ ಕಂಡೆವು وَفِي مُوسَىٰٓ إِذۡ أَرۡسَلۡنَٰهُ إِلَىٰ فِرۡعَوۡنَ بِسُلۡطَٰنٍ مُّبِينٍ ٣٨ಮತ್ತು ಕಠಿಣ ಶಿಕ್ಷೆಯನ್ನು ಅಂಜುವವರಿಗಾಗಿ ಅಲ್ಲಿ ನಾವು ಒಂದು ಪಾಠದಾಯಕ ಸೂಚನೆಯನ್ನು ಬಿಟ್ಟಿರುವೆವು فَتَوَلَّىٰ بِرُكۡنِهِۦ وَقَالَ سَٰحِرٌ أَوۡ مَجۡنُونٌ ٣٩ಮತ್ತು ಮೂಸಾರಲ್ಲೂ (ಪಾಠವಿದೆ). ಅವರನ್ನು ನಾವು ಸ್ಪಷ್ಟವಾದ ಆಧಾರದೊಂದಿಗೆ ಫಿರ್‌ಔನನ ಕಡೆಗೆ ಕಳಿಸಿದಾಗ فَأَخَذۡنَٰهُ وَجُنُودَهُۥ فَنَبَذۡنَٰهُمۡ فِي ٱلۡيَمِّ وَهُوَ مُلِيمٌ ٤٠ಅವನು (ಫಿರ್‌ಔನನು) ತನ್ನ ಶಕ್ತಿಯ ಗುಂಗಿನಲ್ಲಿ ಬಂಡಾಯವೆದ್ದನು ಮತ್ತು (ಮೂಸಾರನ್ನು) ಜಾದೂಗಾರ ಹಾಗೂ ಹುಚ್ಚನೆಂದು ಕರೆದನು وَفِي عَادٍ إِذۡ أَرۡسَلۡنَا عَلَيۡهِمُ ٱلرِّيحَ ٱلۡعَقِيمَ ٤١ನಾವು ಅವನನ್ನೂ ಅವನ ಪಡೆಗಳನ್ನೂ ಹಿಡಿದೆವು ಹಾಗೂ ಅವರನ್ನು ಕಡಲಿಗೆ ಎಸೆದು ಬಿಟ್ಟೆವು. ಅವನು ನಿಂದನೆಗೆ ಅರ್ಹನಾಗಿದ್ದನು مَا تَذَرُ مِن شَيۡءٍ أَتَتۡ عَلَيۡهِ إِلَّا جَعَلَتۡهُ كَٱلرَّمِيمِ ٤٢ಮತ್ತು ಆದ್ ಜನಾಂಗದಲ್ಲೂ (ಪಾಠವಿದೆ). ನಾವು ಅವರ ಮೇಲೆ ಒಂದು ಮಾರಕ ಚಂಡಮಾರುತವನ್ನು ಹೇರಿದೆವು وَفِي ثَمُودَ إِذۡ قِيلَ لَهُمۡ تَمَتَّعُواْ حَتَّىٰ حِينٍ ٤٣ಅದು ತನ್ನೆದುರು ಬಂದ ಪ್ರತಿಯೊಂದು ವಸ್ತುವನ್ನೂ ಕೊಳೆತ ಮೂಳೆಯಂತಾಗಿಸಿ ಬಿಡುತ್ತಿತ್ತು فَعَتَوۡاْ عَنۡ أَمۡرِ رَبِّهِمۡ فَأَخَذَتۡهُمُ ٱلصَّٰعِقَةُ وَهُمۡ يَنظُرُونَ ٤٤ಮತ್ತು ಸಮೂದ್ ಜನಾಂಗದಲ್ಲೂ (ಪಾಠವಿದೆ). ಒಂದು ನಿರ್ದಿಷ್ಟ ಅವಧಿಯ ತನಕ ಸುಖ ಅನುಭವಿಸಿರಿ ಎಂದು ಅವರೊಡನೆ ಹೇಳಲಾದಾಗ فَمَا ٱسۡتَطَٰعُواْ مِن قِيَامٍ وَمَا كَانُواْ مُنتَصِرِينَ ٤٥ಅವರು ತಮ್ಮ ಒಡೆಯನ ಆದೇಶದೆದುರು ಬಂಡಾಯವೆದ್ದರು. ಕೊನೆಗೆ, ಅವರು ನೋಡುತ್ತಿದ್ದಂತೆಯೇ ಸಿಡಿಲೊಂದು ಅವರ ಮೇಲೆರಗಿತು وَقَوۡمَ نُوحٍ مِّن قَبۡلُۖ إِنَّهُمۡ كَانُواْ قَوۡمًا فَٰسِقِينَ ٤٦ಕೊನೆಗೆ ಅವರು ಎದ್ದು ನಿಲ್ಲಲಿಕ್ಕೂ ಅಶಕ್ತರಾದರು ಮತ್ತು ಪ್ರತೀಕಾರವೆಸಗಲಿಕ್ಕೂ ಅಸಮರ್ಥರಾದರು وَٱلسَّمَآءَ بَنَيۡنَٰهَا بِأَيۡيْدٍ وَإِنَّا لَمُوسِعُونَ ٤٧ಅವರಿಗಿಂತ ಹಿಂದಿನ ನೂಹರ ಜನಾಂಗದಲ್ಲೂ (ಪಾಠವಿದೆ). ಅವರು ಅವಿಧೇಯರಾಗಿದ್ದರು وَٱلۡأَرۡضَ فَرَشۡنَٰهَا فَنِعۡمَ ٱلۡمَٰهِدُونَ ٤٨ನಾವು ಆಕಾಶವನ್ನು ಕೈಯಾರೆ ನಿರ್ಮಿಸಿರುವೆವು. ನಾವು ಖಂಡಿತ ವಿಶಾಲ ಸಾಮರ್ಥ್ಯ ಉಳ್ಳವರಾಗಿರುವೆವು وَمِن كُلِّ شَيۡءٍ خَلَقۡنَا زَوۡجَيۡنِ لَعَلَّكُمۡ تَذَكَّرُونَ ٤٩ಮತ್ತು ಭೂಮಿಯನ್ನು ನಾವು ಹಾಸಿನಂತಾಗಿಸಿರುವೆವು. ನಾವಂತೂ ಅತ್ಯುತ್ತಮವಾಗಿ ಹಾಸುವವರಾಗಿರುವೆವು فَفِرُّوٓاْ إِلَى ٱللَّهِۖ إِنِّي لَكُم مِّنۡهُ نَذِيرٌ مُّبِينٌ ٥٠ನಾವು ಪ್ರತಿಯೊಂದು ವಸ್ತುವಿನಿಂದಲೂ ಎರಡು ಬಗೆಗಳನ್ನು (ಜೊತೆಗಳನ್ನು ) ಸೃಷ್ಟಿಸಿರುವೆವು. ನೀವು ಪಾಠ ಕಲಿಯಬೇಕೆಂದು وَلَا تَجۡعَلُواْ مَعَ ٱللَّهِ إِلَٰهًا ءَاخَرَۖ إِنِّي لَكُم مِّنۡهُ نَذِيرٌ مُّبِينٌ ٥١ನೀವು ಅಲ್ಲಾಹನೆಡೆಗೆ ಧಾವಿಸಿರಿ. ನಾನು ಅವನ ಕಡೆಯಿಂದ ನಿಮ್ಮನ್ನು ಸ್ಪಷ್ಟವಾಗಿ ಎಚ್ಚರಿಸುವವನಾಗಿದ್ದೇನೆ كَذَٰلِكَ مَآ أَتَى ٱلَّذِينَ مِن قَبۡلِهِم مِّن رَّسُولٍ إِلَّا قَالُواْ سَاحِرٌ أَوۡ مَجۡنُونٌ ٥٢ಮತ್ತು ನೀವು ಅಲ್ಲಾಹನ ಜೊತೆ ಬೇರೊಬ್ಬರನ್ನು ದೇವರಾಗಿಸಿಕೊಳ್ಳಬೇಡಿ. ನಾನು ಅವನ ಕಡೆಯಿಂದ ನಿಮ್ಮನ್ನು ಸ್ಪಷ್ಟವಾಗಿ ಎಚ್ಚರಿಸುವವನಾಗಿದ್ದೇನೆ أَتَوَاصَوۡاْ بِهِۦۚ بَلۡ هُمۡ قَوۡمٌ طَاغُونَ ٥٣ಇದೇ ರೀತಿ, ಅವರಿಗಿಂತ ಹಿಂದಿನವರು ತಮ್ಮ ಬಳಿಗೆ ಬಂದಿದ್ದ ಯಾವ ದೂತರನ್ನೂ ಜಾದೂಗಾರ ಅಥವಾ ಹುಚ್ಚ ಎಂದು ಕರೆಯದೆ ಬಿಟ್ಟಿರಲಿಲ್ಲ فَتَوَلَّ عَنۡهُمۡ فَمَآ أَنتَ بِمَلُومٍ ٥٤ಅವರೇನು ಪರಸ್ಪರರಿಗೆ ಇದನ್ನೇ ಬೋಧಿಸಿರುವರೇ? ನಿಜವಾಗಿ ಅವರು ವಿದ್ರೋಹಿಗಳಾಗಿದ್ದಾರೆ وَذَكِّرۡ فَإِنَّ ٱلذِّكۡرَىٰ تَنفَعُ ٱلۡمُؤۡمِنِينَ ٥٥ನೀವು ಅವರನ್ನು ಕಡೆಗಣಿಸಿರಿ. ನಿಮ್ಮ ಮೇಲೆ ಯಾವ ದೋಷವೂ ಇಲ್ಲ وَمَا خَلَقۡتُ ٱلۡجِنَّ وَٱلۡإِنسَ إِلَّا لِيَعۡبُدُونِ ٥٦ನೀವು ಉಪದೇಶಿಸಿರಿ. ಖಂಡಿತವಾಗಿಯೂ ಉಪದೇಶವು ವಿಶ್ವಾಸಿಗಳ ಪಾಲಿಗೆ ಲಾಭದಾಯಕವಾಗಿರುತ್ತದೆ مَآ أُرِيدُ مِنۡهُم مِّن رِّزۡقٍ وَمَآ أُرِيدُ أَن يُطۡعِمُونِ ٥٧ನಾನು ಜಿನ್ನ್‌ಗಳನ್ನು ಹಾಗೂ ಮಾನವರನ್ನು ನನ್ನ ಆರಾಧನೆಗೆಂದೇ ಸೃಷ್ಟಿಸಿರುವೆನು إِنَّ ٱللَّهَ هُوَ ٱلرَّزَّاقُ ذُو ٱلۡقُوَّةِ ٱلۡمَتِينُ ٥٨ನಾನು ಅವರಿಂದ ಯಾವುದೇ ಆಹಾರವನ್ನು ಬಯಸುವುದಿಲ್ಲ ಮತ್ತು ಅವರು ನನಗೆ ಉಣಿಸಬೇಕೆಂದೂ ನಾನು ಅಪೇಕ್ಷಿಸುವುದಿಲ್ಲ فَإِنَّ لِلَّذِينَ ظَلَمُواْ ذَنُوبًا مِّثۡلَ ذَنُوبِ أَصۡحَٰبِهِمۡ فَلَا يَسۡتَعۡجِلُونِ ٥٩ಖಂಡಿತವಾಗಿಯೂ ಅಲ್ಲಾಹನೇ ಎಲ್ಲರ ಅನ್ನದಾತನೂ ಭಾರೀ ಶಕ್ತಿ ಶಾಲಿಯೂ ಪರಮ ಸಮರ್ಥನೂ ಆಗಿದ್ದಾನೆ فَوَيۡلٌ لِّلَّذِينَ كَفَرُواْ مِن يَوۡمِهِمُ ٱلَّذِي يُوعَدُونَ ٦٠ಅಕ್ರಮವೆಸಗಿದವರಿಗಾಗಿ (ಅವರ ಶಿಕ್ಷೆಗಾಗಿ), ಅವರ ಸಂಗಾತಿಗಳಿಗೆ ನಿಶ್ಚಿತವಾಗಿದ್ದಂತಹದೇ ಕಾಲವೊಂದು ನಿಶ್ಚಿತವಾಗಿದೆ. ಆದ್ದರಿಂದ ಅವರು ಆತುರ ಪಡದಿರಲಿ

Translation: Abdussalam Puthige.