Millat al-Islam

Chapter 87 · 19 verses · Abdussalam Puthige

Surah Al-Ala in Kannada

Arabic with tafsir Listen to Surah Al-Ala (1421 reciters)
Meccanسورة الأعلى19 verses

بِسۡمِ ٱللَّهِ ٱلرَّحۡمَٰنِ ٱلرَّحِيمِ

سَبِّحِ ٱسۡمَ رَبِّكَ ٱلۡأَعۡلَى ١(ದೂತರೇ,) ಉನ್ನತನಾಗಿರುವ ನಿಮ್ಮ ಒಡೆಯನ ಪಾವಿತ್ರವನ್ನು ಜಪಿಸಿರಿ ٱلَّذِي خَلَقَ فَسَوَّىٰ ٢(ಅವನು) ನಿಮ್ಮನ್ನು ಸೃಷ್ಟಿಸಿದವನು ಮತ್ತು ರೂಪಿಸಿದವನು وَٱلَّذِي قَدَّرَ فَهَدَىٰ ٣ವಿಧಿಯನ್ನು ನಿರ್ಣಯಿಸಿದವನು, ಸರಿದಾರಿಯನ್ನು ತೋರಿದವನು وَٱلَّذِيٓ أَخۡرَجَ ٱلۡمَرۡعَىٰ ٤ಮೇವನ್ನು ಬೆಳೆಸಿದವನು فَجَعَلَهُۥ غُثَآءً أَحۡوَىٰ ٥ಕೊನೆಗೆ ಅವನು ಅದನ್ನು ಕಪ್ಪಗಿನ ಕಸವಾಗಿಸಿದನು سَنُقۡرِئُكَ فَلَا تَنسَىٰٓ ٦ನಾವು ನಿಮಗೆ ಓದಿಸುವೆವು ಮತ್ತೆ ನೀವು ಮರೆಯಲಾರಿರಿ إِلَّا مَا شَآءَ ٱللَّهُۚ إِنَّهُۥ يَعۡلَمُ ٱلۡجَهۡرَ وَمَا يَخۡفَىٰ ٧ಅಲ್ಲಾಹನು ಇಚ್ಛಿಸಿದ್ದರ ಹೊರತು. ಅವನು ಬಹಿರಂಗವಾದುದನ್ನು ಮತ್ತು ಗುಪ್ತವಾದುದನ್ನು ಖಂಡಿತ ಬಲ್ಲನು وَنُيَسِّرُكَ لِلۡيُسۡرَىٰ ٨ನಾವು ನಿಮ್ಮ ಪಾಲಿಗೆ ಸುಲಭದ ಹಾದಿಯನ್ನು ಸುಗಮ ಗೊಳಿಸುವೆವು فَذَكِّرۡ إِن نَّفَعَتِ ٱلذِّكۡرَىٰ ٩ಉಪದೇಶದಿಂದ ಲಾಭವಿದ್ದಲ್ಲಿ ನೀವು ಉಪದೇಶಿಸಿ سَيَذَّكَّرُ مَن يَخۡشَىٰ ١٠(ದೇವರ) ಭಯ ಉಳ್ಳವನು ಉಪದೇಶ ಸ್ವೀಕರಿಸುವನು وَيَتَجَنَّبُهَا ٱلۡأَشۡقَى ١١ದುಷ್ಟನು ಅದರಿಂದ ದೂರ ಉಳಿಯುವನು ٱلَّذِي يَصۡلَى ٱلنَّارَ ٱلۡكُبۡرَىٰ ١٢ಅವನು (ಪರಲೋಕದಲ್ಲಿ) ಮಹಾ ಅಗ್ನಿ ಕುಂಡವನ್ನು ಸೇರುವನು ثُمَّ لَا يَمُوتُ فِيهَا وَلَا يَحۡيَىٰ ١٣ಅದರಲ್ಲಿ ಅವನಿಗೆ ಸಾಯಲಿಕ್ಕೂ ಆಗದು ಬದುಕಲಿಕ್ಕೂ ಆಗದು قَدۡ أَفۡلَحَ مَن تَزَكَّىٰ ١٤ಖಂಡಿತ ವಿಜಯಿಯಾದನು – ಶುದ್ಧನಾದವನು وَذَكَرَ ٱسۡمَ رَبِّهِۦ فَصَلَّىٰ ١٥ಮತ್ತು ತನ್ನೊಡೆಯನ ಹೆಸರನ್ನು ಸ್ಮರಿಸಿದವನು ಮತ್ತು ನಮಾಝನ್ನು ಸಲ್ಲಿಸಿದವನು بَلۡ تُؤۡثِرُونَ ٱلۡحَيَوٰةَ ٱلدُّنۡيَا ١٦ಆದರೆ ನೀವು ಇಹಲೋಕದ ಜೀವನಕ್ಕೆ ಪ್ರಾಶಸ್ತ್ಯ ನೀಡುತ್ತೀರಿ وَٱلۡأٓخِرَةُ خَيۡرٌ وَأَبۡقَىٰٓ ١٧ನಿಜವಾಗಿ ಪರಲೋಕವು ಉತ್ತಮವಾಗಿದೆ – ಮತ್ತು ಅದು ಸದಾ ಉಳಿದಿರುತ್ತದೆ إِنَّ هَٰذَا لَفِي ٱلصُّحُفِ ٱلۡأُولَىٰ ١٨ಗತಕಾಲದ ಗ್ರಂಥಗಳಲ್ಲಿ ಇದನ್ನೇ ಹೇಳಲಾಗಿದೆ – صُحُفِ إِبۡرَٰهِيمَ وَمُوسَىٰ ١٩– ಇಬ್ರಾಹೀಮ್ ಮತ್ತು ಮೂಸಾರ ಗ್ರಂಥಗಳಲ್ಲಿ

Translation: Abdussalam Puthige.