بِسۡمِ ٱللَّهِ ٱلرَّحۡمَٰنِ ٱلرَّحِيمِ
ٱقۡرَأۡ بِٱسۡمِ رَبِّكَ ٱلَّذِي خَلَقَ ١ಓದಿರಿ, (ವಿಶ್ವವನ್ನು) ಸೃಷ್ಟಿಸಿದ ನಿಮ್ಮೊಡೆಯನ ಹೆಸರಿಂದ خَلَقَ ٱلۡإِنسَٰنَ مِنۡ عَلَقٍ ٢ಅವನು ಮನುಷ್ಯನನ್ನು ಹೆಪ್ಪು ಗಟ್ಟಿದ ರಕ್ತದಿಂದ ಸೃಷ್ಟಿಸಿರುವನು ٱقۡرَأۡ وَرَبُّكَ ٱلۡأَكۡرَمُ ٣ಓದಿರಿ. ಮಹಾ ಉದಾರಿಯಾದ ನಿಮ್ಮೊಡೆಯನ ಹೆಸರಿಂದ ٱلَّذِي عَلَّمَ بِٱلۡقَلَمِ ٤ಅವನು ಲೇಖನಿಯ ಮೂಲಕ ಕಲಿಸಿದನು عَلَّمَ ٱلۡإِنسَٰنَ مَا لَمۡ يَعۡلَمۡ ٥ಮತ್ತು ಮಾನವನಿಗೆ ತಿಳಿದಿಲ್ಲದ್ದನ್ನು ಕಲಿಸಿದನು كـَلَّآ إِنَّ ٱلۡإِنسَٰنَ لَيَطۡغَىٰٓ ٦ಆದರೆ ಮನುಷ್ಯನು ಮಾತ್ರ ವಿದ್ರೋಹವೆಸಗುತ್ತಾನೆ أَن رَّءَاهُ ٱسۡتَغۡنَىٰٓ ٧ಅವನು ತನ್ನನ್ನು ತೀರಾ ಸ್ವತಂತ್ರನಾಗಿ ಕಾಣುತ್ತಾನೆ إِنَّ إِلَىٰ رَبِّكَ ٱلرُّجۡعَىٰٓ ٨ಖಂಡಿತ (ಎಲ್ಲರೂ) ನಿಮ್ಮ ಒಡೆಯನ ಕಡೆಗೇ ಮರಳ ಬೇಕಾಗಿದೆ أَرَءَيۡتَ ٱلَّذِي يَنۡهَىٰ ٩ನೀವು ನೋಡಿದಿರಾ, ತಡೆಯುವವನನ್ನು عَبۡدًا إِذَا صَلَّىٰٓ ١٠(ನಮ್ಮ) ದಾಸನು ನಮಾಝ್ ಸಲ್ಲಿಸುವಾಗ (ತಡೆಯುವವನನ್ನು) أَرَءَيۡتَ إِن كَانَ عَلَى ٱلۡهُدَىٰٓ ١١ನೀವು ನೋಡಿದಿರಾ? ಒಂದು ವೇಳೆ ಅವನು ಸರಿದಾರಿಯಲ್ಲಿದ್ದರೆ أَوۡ أَمَرَ بِٱلتَّقۡوَىٰٓ ١٢ಅಥವಾ ಅವನು ಸತ್ಯನಿಷ್ಠೆಯನ್ನು ಬೋಧಿಸಿದ್ದರೆ (ಅವನನ್ನು ತಡೆದವನ ಗತಿ ಏನಾದೀತು) أَرَءَيۡتَ إِن كَذَّبَ وَتَوَلَّىٰٓ ١٣ನೀವು ನೋಡಿದಿರಾ? ಅವನು (ತಡೆಯುವವನು, ಸತ್ಯವನ್ನು) ತಿರಸ್ಕರಿಸುವವನು ಹಾಗೂ ಕಡೆಗಣಿಸುವವನಾಗಿದ್ದರೆ (ಅವನ ಗತಿ ಏನಾದೀತು) أَلَمۡ يَعۡلَم بِأَنَّ ٱللَّهَ يَرَىٰ ١٤ಅಲ್ಲಾಹನು ನೋಡುತ್ತಿರುವನೆಂದು ಅವನಿಗೆ ತಿಳಿಯದೇ كـَلَّا لَئِن لَّمۡ يَنتَهِ لَنَسۡفَعَۢا بِٱلنَّاصِيَةِ ١٥ಒಂದು ವೇಳೆ ಅವನು ತನ್ನನ್ನು ತಡೆಯದಿದ್ದರೆ, ನಾವು ಅವನ ತಲೆಯ ಜುಟ್ಟನ್ನು ಹಿಡಿದು ಎಳೆದೊಯ್ಯುವೆವು نَاصِيَةٍ كَٰذِبَةٍ خَاطِئَةٍ ١٦ಸುಳ್ಳುಗಾರ, ಪಾಪಿ ಹಣೆ ಅದು فَلۡيَدۡعُ نَادِيَهُۥ ١٧ಅವನೀಗ ತನ್ನ ಕೂಟವನ್ನು ಕರೆಯಲಿ سَنَدۡعُ ٱلزَّبَانِيَةَ ١٨ನಾವು ನಮ್ಮ ಪಡೆಯನ್ನು ಕರೆಯುವೆವು كـَلَّا لَا تُطِعۡهُ وَٱسۡجُدۡۤ وَٱقۡتَرِب ۩ ١٩(ದೂತರೇ,) ಬೇಡ. ನೀವು ಅವನ ಆದೇಶವನ್ನು ಪಾಲಿಸಬೇಡಿ. ನೀವು ಸಾಷ್ಟಾಂಗವೆರಗಿರಿ ಮತ್ತು (ನಮಗೆ) ನಿಕಟರಾಗಿರಿ