بِسۡمِ ٱللَّهِ ٱلرَّحۡمَٰنِ ٱلرَّحِيمِ ١ಅಲ್ಲಾಹನ ಹೆಸರಿಂದ – ಅವನು ಅಪಾರ ದಯಾಳು, ಕರುಣಾಮಯಿ ٱلۡحَمۡدُ لِلَّهِ رَبِّ ٱلۡعَٰلَمِينَ ٢ಪ್ರಶಂಸೆಗಳೆಲ್ಲಾ ಎಲ್ಲ ಲೋಕಗಳ ಒಡೆಯನಾದ ಅಲ್ಲಾಹನಿಗೆ ٱلرَّحۡمَٰنِ ٱلرَّحِيمِ ٣ಅವನು ಅಪಾರ ದಯಾಳು, ಕರುಣಾಮಯಿ مَٰلِكِ يَوۡمِ ٱلدِّينِ ٤ಪ್ರತಿಫಲದ ದಿನದ ಮಾಲಕ إِيَّاكَ نَعۡبُدُ وَإِيَّاكَ نَسۡتَعِينُ ٥(ಓ ಅಲ್ಲಾಹ್) ನಾವು ನಿನ್ನನ್ನು ಮಾತ್ರ ಪೂಜಿಸುತ್ತೇವೆ ಮತ್ತು ನಿನ್ನಿಂದ ಮಾತ್ರ ನೆರವನ್ನು ಬೇಡುತ್ತೇವೆ ٱهۡدِنَا ٱلصِّرَٰطَ ٱلۡمُسۡتَقِيمَ ٦ನಮ್ಮನ್ನು ನೇರ ಮಾರ್ಗದಲ್ಲಿ ನಡೆಸು صِرَٰطَ ٱلَّذِينَ أَنۡعَمۡتَ عَلَيۡهِمۡ غَيۡرِ ٱلۡمَغۡضُوبِ عَلَيۡهِمۡ وَلَا ٱلضَّآلِّينَ ٧ನೀನು ಬಹುಮಾನಿಸಿದವರ ಮಾರ್ಗದಲ್ಲಿ (ನಡೆಸು); ನಿನ್ನ ಕೋಪಕ್ಕೆ ತುತ್ತಾದವರ ಮತ್ತು ದಾರಿ ತಪ್ಪಿದವರ ಮಾರ್ಗದಲ್ಲಿ ಅಲ್ಲ
Chapter 1 · 7 verses · Abdussalam Puthige
Surah Al-Fatihah in Kannada
Tap a verse number for its tafsir
Translation: Abdussalam Puthige.