Millat al-Islam

Chapter 79 · 46 verses · Abdussalam Puthige

Surah An-Naziat in Kannada

Arabic with tafsir Listen to Surah An-Naziat (1339 reciters)

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلنَّٰزِعَٰتِ غَرۡقًا ١ಮೃದುವಾಗಿ ಬಿಡಿಸುವವರ ಆಣೆ وَٱلنَّٰشِطَٰتِ نَشۡطًا ٢ತೇಲುತ್ತಾ ಚಲಿಸುವವರ ಆಣೆ وَٱلسَّٰبِحَٰتِ سَبۡحًا ٣ಹುರುಪಿನಿಂದ ಮುನ್ನುಗ್ಗುವವರಾಣೆ فَٱلسَّٰبِقَٰتِ سَبۡقًا ٤(ಜಗತ್ತಿನ)ವ್ಯವಹಾರಗಳನ್ನು ನೋಡಿ ಕೊಳ್ಳುವವರಾಣೆ فَٱلۡمُدَبِّرَٰتِ أَمۡرًا ٥ಭೂಮಿಯು ಅಲ್ಲೋಲ ಕಲ್ಲೋಲವಾಗುವ ದಿನ يَوۡمَ تَرۡجُفُ ٱلرَّاجِفَةُ ٦ಅದರ ಬೆನ್ನಿಗೇ ಮತ್ತೆ ಅಲ್ಲೋಲ ಕಲ್ಲೋಲವಾಗುವುದು تَتۡبَعُهَا ٱلرَّادِفَةُ ٧ಅಂದು ಮನಸ್ಸುಗಳು ಭಯ ಭೀತವಾಗಿರುವವು قُلُوبٌ يَوۡمَئِذٍ وَاجِفَةٌ ٨ದೃಷ್ಟಿಗಳು ಭಯದಿಂದ ತಗ್ಗಿರುವವು أَبۡصَٰرُهَا خَٰشِعَةٌ ٩(ಧಿಕ್ಕಾರಿಗಳು) ಕೇಳುತ್ತಾರೆ ನಾವು ಮರಳಿ ಮತ್ತೆ ಬರಲಿಕ್ಕುಂಟೇ يَقُولُونَ أَءِنَّا لَمَرۡدُودُونَ فِي ٱلۡحَافِرَةِ ١٠ನಾವು ಟೊಳ್ಳು ಮೂಳೆಗಳಾದ ಬಳಿಕ (ಮರಳಿ ಬರುವುದೇ) أَءِذَا كُنَّا عِظَٰمًا نَّخِرَةً ١١ಆ ಮರಳಿಕೆಯು ತೀರಾ ನಷ್ಟದ ವ್ಯವಹಾರವಾಗಿದೆ ಎಂದು ಅವರು ಹೇಳುತ್ತಾರೆ قَالُواْ تِلۡكَ إِذًا كَرَّةٌ خَاسِرَةٌ ١٢ಅದೊಂದು ಭೀಕರ ಶಬ್ದವಾಗಿರುವುದು فَإِنَّمَا هِيَ زَجۡرَةٌ وَٰحِدَةٌ ١٣ಅದರ ಬೆನ್ನಿಗೇ ಅವರೆಲ್ಲಾ ಒಂದು ಬಯಲಲ್ಲಿ ಸೇರುವರು فَإِذَا هُم بِٱلسَّاهِرَةِ ١٤ನಿಮಗೆ ಮೂಸಾರ ವೃತ್ತಾಂತವು ತಲುಪಿದೆಯೇ هَلۡ أَتَىٰكَ حَدِيثُ مُوسَىٰٓ ١٥ಅವರ ಒಡೆಯನು ಅವರನ್ನು ಪವಿತ್ರ ‘‘ತುವಾ’’ ಬೆಟ್ಟದಿಂದ ಕರೆದು (ಹೇಳಿದನು) إِذۡ نَادَىٰهُ رَبُّهُۥ بِٱلۡوَادِ ٱلۡمُقَدَّسِ طُوًى ١٦ಹೋಗಿರಿ ಫಿರ್‌ಔನ್‌ನೆಡೆಗೆ, ಅವನು ವಿದ್ರೋಹಿಯಾಗಿದ್ದಾನೆ ٱذۡهَبۡ إِلَىٰ فِرۡعَوۡنَ إِنَّهُۥ طَغَىٰ ١٧ಮತ್ತು ಅವನೊಡನೆ ಹೇಳಿರಿ – ನೀನು ನಿರ್ಮಲನಾಗ ಬಯಸುವೆಯಾ فَقُلۡ هَل لَّكَ إِلَىٰٓ أَن تَزَكَّىٰ ١٨ನಾನು ನಿನಗೆ ನಿನ್ನೊಡೆಯನ ಕಡೆಗಿರುವ ದಾರಿಯನ್ನು ತೋರಬಲ್ಲೆನು – ನೀನು ಭಯಭಕ್ತಿ ಉಳ್ಳವನಾಗಬೇಕೆಂದು وَأَهۡدِيَكَ إِلَىٰ رَبِّكَ فَتَخۡشَىٰ ١٩ಅವರು ಅವನಿಗೆ ದೊಡ್ಡ ಪುರಾವೆಯನ್ನು ತೋರಿಸಿದರು فَأَرَىٰهُ ٱلۡأٓيَةَ ٱلۡكُبۡرَىٰ ٢٠ಆದರೆ ಅವನು ತಿರಸ್ಕರಿಸಿದನು ಮತ್ತು ಅವರ ಆದೇಶವನ್ನು ಮೀರಿದನು فَكَذَّبَ وَعَصَىٰ ٢١ಆ ಬಳಿಕ ಅವನು ಮರಳಿ ಸಂಚು ಹೂಡ ತೊಡಗಿದನು ثُمَّ أَدۡبَرَ يَسۡعَىٰ ٢٢ಮತ್ತು ಜನರನ್ನು ಸೇರಿಸಿ ಕರೆ ಕೊಟ್ಟನು فَحَشَرَ فَنَادَىٰ ٢٣ಮತ್ತು ನಾನೇ ನಿಮ್ಮ ಅತಿ ದೊಡ್ಡ ಒಡೆಯನು ಎಂದು ಘೋಷಿಸಿದನು فَقَالَ أَنَا۠ رَبُّكُمُ ٱلۡأَعۡلَىٰ ٢٤ಕೊನೆಗೆ ಅಲ್ಲಾಹನು ಅವನನ್ನು ಹಿಡಿದು ಪರಲೋಕದ ಮತ್ತು ಇಹಲೋಕದ ಶಿಕ್ಷೆಗೆ ಗುರಿಪಡಿಸಿದನು فَأَخَذَهُ ٱللَّهُ نَكَالَ ٱلۡأٓخِرَةِ وَٱلۡأُولَىٰٓ ٢٥ಭಯಭಕ್ತಿ ಉಳ್ಳವನಿಗೆ ಇದರಲ್ಲಿ ಖಂಡಿತ ಪಾಠವಿದೆ إِنَّ فِي ذَٰلِكَ لَعِبۡرَةً لِّمَن يَخۡشَىٰٓ ٢٦ನಿಮ್ಮನ್ನು ಸೃಷ್ಟಿಸುವುದು ಕಷ್ಟವೋ ಅಥವಾ ಅಕಾಶಗಳನ್ನೋ? ಅವನು ಅವುಗಳನ್ನು ರಚಿಸಿರುವನು ءَأَنتُمۡ أَشَدُّ خَلۡقًا أَمِ ٱلسَّمَآءُۚ بَنَىٰهَا ٢٧ಅವನು ಅವುಗಳನ್ನು ಎತ್ತರಕ್ಕೇರಿಸಿರುವನು ಹಾಗೂ ಅವುಗಳಿಗೆ ರೂಪ ಕೊಟ್ಟಿರುವನು رَفَعَ سَمۡكَهَا فَسَوَّىٰهَا ٢٨ಅವನು ಇರುಳನ್ನು ಕತ್ತಲಾಗಿಸಿರುವನು ಮತ್ತು ಬಿಸಿಲನ್ನು ಹೊರಡಿಸಿರುವನು وَأَغۡطَشَ لَيۡلَهَا وَأَخۡرَجَ ضُحَىٰهَا ٢٩ತರುವಾಯ ಭೂಮಿಯನ್ನು ಹರಡಿರುವನು وَٱلۡأَرۡضَ بَعۡدَ ذَٰلِكَ دَحَىٰهَآ ٣٠ಅವನು ಅದರಿಂದ ನೀರನ್ನು ಹೊರಡಿಸಿ ಮೇವನ್ನು ಬೆಳೆಸಿರುವನು أَخۡرَجَ مِنۡهَا مَآءَهَا وَمَرۡعَىٰهَا ٣١ಮತ್ತು ಅದರ ಮೇಲೆ ಪರ್ವತಗಳನ್ನು ಹೊರಿಸಿರುವನು وَٱلۡجِبَالَ أَرۡسَىٰهَا ٣٢ಇದೆಲ್ಲಾ ನಿಮ್ಮ ಲಾಭಕ್ಕಾಗಿ ಹಾಗೂ ನಿಮ್ಮ ಜಾನುವಾರುಗಳಿಗಾಗಿ مَتَٰعًا لَّكُمۡ وَلِأَنۡعَٰمِكُمۡ ٣٣ಆ ಮಹಾ ವಿಪತ್ತು ಬಂದು ಬಿಟ್ಟಾಗ فَإِذَا جَآءَتِ ٱلطَّآمَّةُ ٱلۡكُبۡرَىٰ ٣٤ಅಂದು ಮನುಷ್ಯನು ತಾನು ಮಾಡಿದ್ದೆಲ್ಲವನ್ನೂ ಸ್ಮರಿಸಿ ಕೊಳ್ಳುವನು يَوۡمَ يَتَذَكَّرُ ٱلۡإِنسَٰنُ مَا سَعَىٰ ٣٥ಮತ್ತು ನೋಡುವವರ ಮುಂದೆ ನರಕವನ್ನು ತಂದಿಡಲಾಗುವುದು وَبُرِّزَتِ ٱلۡجَحِيمُ لِمَن يَرَىٰ ٣٦ವಿದ್ರೋಹ ವೆಸಗಿದವನು فَأَمَّا مَن طَغَىٰ ٣٧ಮತ್ತು ಇಹಲೋಕ ಬದುಕಿಗೆ ಪ್ರಾಶಸ್ತ್ಯ ಕೊಟ್ಟವನು – وَءَاثَرَ ٱلۡحَيَوٰةَ ٱلدُّنۡيَا ٣٨– ನರಕವೇ ಅವನ ನೆಲೆಯಾಗಿರುವುದು فَإِنَّ ٱلۡجَحِيمَ هِيَ ٱلۡمَأۡوَىٰ ٣٩ಇನ್ನು ತನ್ನ ಒಡೆಯನ ಮುಂದೆ ನಿಲ್ಲಲಿಕ್ಕಿದೆ ಎಂದು ಅಂಜುತ್ತಿದ್ದವನು ಮತ್ತು ತನ್ನ ಸ್ವೇಚ್ಛೆಯನ್ನು ನಿಯಂತ್ರಿಸುತ್ತಿದ್ದವನು – وَأَمَّا مَنۡ خَافَ مَقَامَ رَبِّهِۦ وَنَهَى ٱلنَّفۡسَ عَنِ ٱلۡهَوَىٰ ٤٠– ಸ್ವರ್ಗವೇ ಅವನ ನೆಲೆಯಾಗಿರುವುದು فَإِنَّ ٱلۡجَنَّةَ هِيَ ٱلۡمَأۡوَىٰ ٤١(ಪುನರುತ್ಥಾನದ) ಆ ಘಳಿಗೆಯು ಎಂದು ಬರುವುದು? ಎಂದು ಅವರು ಪ್ರಶ್ನಿಸುತ್ತಾರೆ يَسۡـَٔلُونَكَ عَنِ ٱلسَّاعَةِ أَيَّانَ مُرۡسَىٰهَا ٤٢ಅದನ್ನು ಪ್ರಸ್ತಾಪಿಸಿ ನಿಮಗೆ ಏನಾಗಬೇಕಾಗಿದೆ فِيمَ أَنتَ مِن ذِكۡرَىٰهَآ ٤٣ಆ ಕುರಿತು ಅಂತಿಮ ಜ್ಞಾನವು ನಿಮ್ಮೊಡೆಯನ ಬಳಿ ಇದೆ إِلَىٰ رَبِّكَ مُنتَهَىٰهَآ ٤٤(ದೂತರೇ,) ನೀವಂತು ಭಯ ಭಕ್ತಿ ಉಳ್ಳವರನ್ನು ಎಚ್ಚರಿಸುವವರು ಮಾತ್ರ إِنَّمَآ أَنتَ مُنذِرُ مَن يَخۡشَىٰهَا ٤٥ಅವರು ಅದನ್ನು (ಪರಲೋಕವನ್ನು) ಕಣ್ಣಾರೆ ಕಂಡಾಗ, ತಾವು (ಇಹಲೋಕದಲ್ಲಿ) ಕಳೆದುದು ಕೇವಲ ಒಂದು ಸಂಜೆ ಅಥವಾ ಒಂದು ಮುಂಜಾನೆ ಮಾತ್ರ ಎಂದು ಕೊಳ್ಳುವರು كَأَنَّهُمۡ يَوۡمَ يَرَوۡنَهَا لَمۡ يَلۡبَثُوٓاْ إِلَّا عَشِيَّةً أَوۡ ضُحَىٰهَا ٤٦ಅವರು (ದೂತರು) ಅತೃಪ್ತರಾದರು ಮತ್ತು ಮುಖ ತಿರುಗಿಸಿಕೊಂಡರು –

Translation: Abdussalam Puthige.