ملة الإسلام

السورة 89 · 30 آية · Abdussalam Puthige

سورة الفجر باللغة الكانادية

السورة بالعربية مع التفسير استمع إلى سورة الفجر (1,345 قارئاً)
مكيةسورة الفجر٣٠ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلۡفَجۡرِ ١ಮುಂಜಾವಿನಾಣೆ وَلَيَالٍ عَشۡرٍ ٢ಮತ್ತು ಹತ್ತು ರಾತ್ರಿಗಳಾಣೆ وَٱلشَّفۡعِ وَٱلۡوَتۡرِ ٣ಮತ್ತು ಸಮ ಹಾಗೂ ಬೆಸ ಸಂಖ್ಯೆಗಳಾಣೆ وَٱلَّيۡلِ إِذَا يَسۡرِ ٤ಮತ್ತು ರಾತ್ರಿಯು ತೆರಳುವಾಗಿನಾಣೆ هَلۡ فِي ذَٰلِكَ قَسَمٌ لِّذِي حِجۡرٍ ٥ಬುದ್ಧಿಜೀವಿಗಳಿಗೆ ಈ ಪ್ರಮಾಣಗಳು ಸಾಕೇ أَلَمۡ تَرَ كَيۡفَ فَعَلَ رَبُّكَ بِعَادٍ ٦ನೀವು ನೋಡಿದಿರಾ, ನಿಮ್ಮ ಒಡೆಯನು ಆದ್ ಜನಾಂಗದವರಿಗೆ ಏನು ಮಾಡಿದನೆಂಬುದನ್ನು إِرَمَ ذَاتِ ٱلۡعِمَادِ ٧ಇರಮ್‌ನ ಸ್ತಂಭದವರನ್ನು ٱلَّتِي لَمۡ يُخۡلَقۡ مِثۡلُهَا فِي ٱلۡبِلَٰدِ ٨ನಾಡುಗಳ ಪೈಕಿ ಅಂತಹ ಇನ್ನೊಂದು ನಾಡು ಸೃಷ್ಟಿಯಾಗಿಲ್ಲ وَثَمُودَ ٱلَّذِينَ جَابُواْ ٱلصَّخۡرَ بِٱلۡوَادِ ٩ಬಯಲುಗಳಲ್ಲಿ ಕಠೋರ ಕಲ್ಲುಗಳನ್ನು ಕೆತ್ತಿದ್ದ ಸಮೂದರು – وَفِرۡعَوۡنَ ذِي ٱلۡأَوۡتَادِ ١٠ಮತ್ತು ಬೃಹತ್ ಮೊಳೆಗಳ ಫಿರ್‌ಔನ್ ٱلَّذِينَ طَغَوۡاْ فِي ٱلۡبِلَٰدِ ١١ಅವರೆಲ್ಲಾ (ತಮ್ಮ) ನಾಡುಗಳಲ್ಲಿ ಬಂಡಾಯವೆದ್ದಿದ್ದರು فَأَكۡثَرُواْ فِيهَا ٱلۡفَسَادَ ١٢ಮತ್ತು ಅವರು ಅಲ್ಲಿ ಅಶಾಂತಿಯನ್ನು ಮೆರೆದಿದ್ದರು فَصَبَّ عَلَيۡهِمۡ رَبُّكَ سَوۡطَ عَذَابٍ ١٣ಕೊನೆಗೆ ನಿಮ್ಮೊಡೆಯನು ಅವರ ಮೇಲೆ ಶಿಕ್ಷೆಯ ಚಾಟಿಯನ್ನು ಬೀಸಿದನು إِنَّ رَبَّكَ لَبِٱلۡمِرۡصَادِ ١٤ನಿಮ್ಮ ಒಡೆಯನಂತು ಹೊಂಚಿನಲ್ಲಿದ್ದಾನೆ فَأَمَّا ٱلۡإِنسَٰنُ إِذَا مَا ٱبۡتَلَىٰهُ رَبُّهُۥ فَأَكۡرَمَهُۥ وَنَعَّمَهُۥ فَيَقُولُ رَبِّيٓ أَكۡرَمَنِ ١٥ಮನುಷ್ಯನನ್ನು ಅವನ ಒಡೆಯನು ಪರೀಕ್ಷೆಗೊಳಪಡಿಸಿ ಅವನಿಗೆ ಗೌರವವನ್ನೂ. ಅನುಗ್ರಹವನ್ನೂ ದಯಪಾಲಿಸಿದಾಗ ಅವನು, ನನ್ನೊಡೆಯನು ನನ್ನನ್ನು ಗೌರವಾನ್ವಿತನಾಗಿಸಿದ್ದಾನೆ ಎನ್ನುತ್ತಾನೆ وَأَمَّآ إِذَا مَا ٱبۡتَلَىٰهُ فَقَدَرَ عَلَيۡهِ رِزۡقَهُۥ فَيَقُولُ رَبِّيٓ أَهَٰنَنِ ١٦ಇನ್ನು ಅವನು ಆತನನ್ನು ಪರೀಕ್ಷೆಗೊಳಪಡಿಸಿ ಅವನ ಆದಾಯವನ್ನು ಸೀಮಿತ ಗೊಳಿಸಿದಾಗ ಅವನು ನನ್ನೊಡೆಯನು ನನ್ನನ್ನು ನೀಚನಾಗಿಸಿದ್ದಾನೆ ಎನ್ನುತ್ತಾನೆ كـَلَّاۖ بَل لَّا تُكۡرِمُونَ ٱلۡيَتِيمَ ١٧ಹಾಗಲ್ಲ, ನಿಜವಾಗಿ ನೀವು ಅನಾಥನನ್ನು ಗೌರವಿಸುವುದಿಲ್ಲ وَلَا تَحَٰٓضُّونَ عَلَىٰ طَعَامِ ٱلۡمِسۡكِينِ ١٨ಬಡವನಿಗೆ ಉಣಿಸುವಂತೆ (ಪರಸ್ಪರ) ಪ್ರೋತ್ಸಾಹಿಸುವುದಿಲ್ಲ وَتَأۡكُلُونَ ٱلتُّرَاثَ أَكۡلًا لَّمًّا ١٩ಮತ್ತು ನೀವು ವಾರೀಸು ಸೊತ್ತನ್ನು (ಅಕ್ರಮವಾಗಿ) ಕಬಳಿಸುತ್ತೀರಿ وَتُحِبُّونَ ٱلۡمَالَ حُبًّا جَمًّا ٢٠ನೀವು ಸಂಪತ್ತನ್ನು ಅಪಾರವಾಗಿ ಪ್ರೀತಿಸುತ್ತೀರಿ كـَلَّآۖ إِذَا دُكَّتِ ٱلۡأَرۡضُ دَكًّا دَكًّا ٢١ಹಾಗಲ್ಲ, ಭೂಮಿಯನ್ನು ಕುಟ್ಟಿ ಕುಟ್ಟಿ ತಗ್ಗಿಸಲಾದಾಗ وَجَآءَ رَبُّكَ وَٱلۡمَلَكُ صَفًّا صَفًّا ٢٢ನಿಮ್ಮೊಡೆಯನು ಬಂದಾಗ, ಹಾಗೂ ಮಲಕ್‌ಗಳು ಸಾಲುಗಟ್ಟಿದಾಗ وَجِاْيٓءَ يَوۡمَئِذِۭ بِجَهَنَّمَۚ يَوۡمَئِذٍ يَتَذَكَّرُ ٱلۡإِنسَٰنُ وَأَنَّىٰ لَهُ ٱلذِّكۡرَىٰ ٢٣ಅಂದು ನರಕವನ್ನು ಮುಂದೆ ತರಲಾಗುವುದು. ಅಂದು ಮನುಷ್ಯನಿಗೆ ವಿಷಯವು ಅರ್ಥವಾಗುವುದು. ಆದರೆ ಅಂದು ಅರ್ಥವಾದರೆ ಅವನಿಗೇನು ಲಾಭ يَقُولُ يَٰلَيۡتَنِي قَدَّمۡتُ لِحَيَاتِي ٢٤ಅವನು ಹೇಳುವನು; ಅಯ್ಯೋ, ನಾನು ಈ ಬದುಕಿಗೆ ಪೂರ್ವ ಸಿದ್ಧತೆ ನಡೆಸಬೇಕಿತ್ತು فَيَوۡمَئِذٍ لَّا يُعَذِّبُ عَذَابَهُۥٓ أَحَدٌ ٢٥ಅಂದು ಅವನು (ಅಲ್ಲಾಹನು) ನೀಡುವಂತಹ ಶಿಕ್ಷೆಯನ್ನು ಬೇರೆ ಯಾರೂ ನೀಡಲಾರರು وَلَا يُوثِقُ وَثَاقَهُۥٓ أَحَدٌ ٢٦ಮತ್ತು ಅವನು ಕಟ್ಟಿಡುವ ರೀತಿಯಲ್ಲಿ ಬೇರೆ ಯಾರೂ ಕಟ್ಟಿಡಲಾರನು يَٰٓأَيَّتُهَا ٱلنَّفۡسُ ٱلۡمُطۡمَئِنَّةُ ٢٧(ಸಜ್ಜನರೊಡನೆ ಹೇಳಲಾಗುವುದು;) ಸಂತೃಪ್ತ ಚಿತ್ತವೇ ٱرۡجِعِيٓ إِلَىٰ رَبِّكِ رَاضِيَةً مَّرۡضِيَّةً ٢٨ಸಂತೃಪ್ತನಾಗಿ ಮರಳು ನಿನ್ನ ಒಡೆಯನೆಡೆಗೆ – ಅವನೂ ನಿನ್ನಿಂದ ಸಂತೃಪ್ತ ನಾಗಿರುವನು فَٱدۡخُلِي فِي عِبَٰدِي ٢٩ನನ್ನ ದಾಸರ ಜೊತೆ ಪ್ರವೇಶಿಸು وَٱدۡخُلِي جَنَّتِي ٣٠ನನ್ನ ಸ್ವರ್ಗವನ್ನೂ ಪ್ರವೇಶಿಸು

الترجمة: Abdussalam Puthige.