ملة الإسلام

السورة 84 · 25 آية · Abdussalam Puthige

سورة الانشقاق باللغة الكانادية

السورة بالعربية مع التفسير استمع إلى سورة الانشقاق (1,276 قارئاً)
مكيةسورة الانشقاق٢٥ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

إِذَا ٱلسَّمَآءُ ٱنشَقَّتۡ ١ಆಕಾಶವು ಸ್ಫೋಟಿಸುವಾಗ وَأَذِنَتۡ لِرَبِّهَا وَحُقَّتۡ ٢ಅದು ತನ್ನ ಒಡೆಯನ ಆದೇಶವನ್ನು ಪಾಲಿಸುವುದು ಮತ್ತು ಅದು ಅದರ ಕರ್ತವ್ಯವಾಗಿರುವುದು وَإِذَا ٱلۡأَرۡضُ مُدَّتۡ ٣ಭೂಮಿಯನ್ನು ಸಮ ತಟ್ಟಾಗಿಸಲಾಗುವುದು وَأَلۡقَتۡ مَا فِيهَا وَتَخَلَّتۡ ٤ಅದು ತನ್ನೊಳಗಿರುವ ಎಲ್ಲವನ್ನೂ ಹೊರ ಹಾಕಿ ಖಾಲಿಯಾಗಿ ಬಿಡುವುದು وَأَذِنَتۡ لِرَبِّهَا وَحُقَّتۡ ٥ಅದು ತನ್ನ ಒಡೆಯನ ಆದೇಶವನ್ನು ಪಾಲಿಸುವುದು ಮತ್ತು ಅದು ಅದರ ಕರ್ತವ್ಯವಾಗಿರುವುದು يَٰٓأَيُّهَا ٱلۡإِنسَٰنُ إِنَّكَ كَادِحٌ إِلَىٰ رَبِّكَ كَدۡحًا فَمُلَٰقِيهِ ٦ಮಾನವನೇ, ನೀನು ಕ್ರಮೇಣ ನಿನ್ನೊಡೆಯನ ಕಡೆಗೇ ಹೋಗುತ್ತಿರುವೆ, ನೀನು ಖಂಡಿತ ಅವನನ್ನು ಭೇಟಿಯಾಗುವೆ فَأَمَّا مَنۡ أُوتِيَ كِتَٰبَهُۥ بِيَمِينِهِۦ ٧ಯಾರ ಕರ್ಮ ಪತ್ರವನ್ನು ಅವನ ಬಲಗೈಯಲ್ಲಿ ನೀಡಲಾಯಿತೋ – فَسَوۡفَ يُحَاسَبُ حِسَابًا يَسِيرًا ٨ಅವನ ವಿಚಾರಣೆಯು ಸುಲಭವಾಗಿ ನಡೆಯುವುದು وَيَنقَلِبُ إِلَىٰٓ أَهۡلِهِۦ مَسۡرُورًا ٩ಮತ್ತು ಅವನು ತನ್ನ ಮನೆಯವರ ಜೊತೆ ಸಂತುಷ್ಟನಾಗಿರುವನು وَأَمَّا مَنۡ أُوتِيَ كِتَٰبَهُۥ وَرَآءَ ظَهۡرِهِۦ ١٠ಯಾರಿಗೆ ಅವನ ಗ್ರಂಥವನ್ನು ಅವನ ಬೆನ್ನ ಹಿಂದಿನಿಂದ ನೀಡಲಾಯಿತೋ فَسَوۡفَ يَدۡعُواْ ثُبُورًا ١١ಅವನು ಮರಣಕ್ಕಾಗಿ ಪ್ರಾರ್ಥಿಸುವನು وَيَصۡلَىٰ سَعِيرًا ١٢ಮತ್ತು ಅವನು ನರಕವನ್ನು ಪ್ರವೇಶಿಸುವನು إِنَّهُۥ كَانَ فِيٓ أَهۡلِهِۦ مَسۡرُورًا ١٣(ಇಹಲೋಕದಲ್ಲಿ) ಅವನು ತನ್ನ ಮನೆಯವರ ಜೊತೆ ಮೈ ಮರೆತಿದ್ದನು إِنَّهُۥ ظَنَّ أَن لَّن يَحُورَ ١٤ತಾನೆಂದೂ (ತನ್ನ ಒಡೆಯನ ಬಳಿಗೆ) ಹೋಗಲಿಕ್ಕೇ ಇಲ್ಲವೆಂದು ಭಾವಿಸಿದ್ದನು بَلَىٰٓۚ إِنَّ رَبَّهُۥ كَانَ بِهِۦ بَصِيرًا ١٥ಯಾಕಿಲ್ಲ; ಅವನ ಒಡೆಯನಂತೂ ಅವನನ್ನು ನೋಡುತ್ತಲೇ ಇದ್ದನು فَلَآ أُقۡسِمُ بِٱلشَّفَقِ ١٦ಅಲ್ಲ; ನಾನು ಸಂಜೆಯ ಕೆಂಬಣ್ಣದ ಆಣೆ ಹಾಕುತ್ತೇನೆ وَٱلَّيۡلِ وَمَا وَسَقَ ١٧ಮತ್ತು ಇರುಳಿನ ಹಾಗೂ ಅದು ಏನನ್ನೆಲ್ಲಾ ಆವರಿಸುತ್ತದೋ ಅವುಗಳ ಆಣೆ وَٱلۡقَمَرِ إِذَا ٱتَّسَقَ ١٨ಮತ್ತು ಚಂದ್ರನ ಹಾಗೂ ಅದು ಪೂರ್ಣವಾಗುವಾಗಿನಾಣೆ لَتَرۡكَبُنَّ طَبَقًا عَن طَبَقٍ ١٩ನೀವು ಹಂತ ಹಂತವಾಗಿ ಮೇಲೇರುವಿರಿ فَمَا لَهُمۡ لَا يُؤۡمِنُونَ ٢٠ಜನರಿಗೇನಾಗಿದೆ, ಅವರೇಕೆ ನಂಬುವುದಿಲ್ಲ وَإِذَا قُرِئَ عَلَيۡهِمُ ٱلۡقُرۡءَانُ لَا يَسۡجُدُونَۤ ۩ ٢١ಅವರ ಮುಂದೆ ಕುರ್‌ಆನನ್ನು ಓದಲಾದಾಗ ಅವರೇಕೆ ಸಾಷ್ಟಾಂಗ ವೆರಗುವುದಿಲ್ಲ بَلِ ٱلَّذِينَ كَفَرُواْ يُكَذِّبُونَ ٢٢ನಿಜವಾಗಿ, ಧಿಕ್ಕಾರಿಗಳು ಇದನ್ನು ಸುಳ್ಳೆನ್ನುತ್ತಾರೆ وَٱللَّهُ أَعۡلَمُ بِمَا يُوعُونَ ٢٣ಅವರು ತಮ್ಮ ಮನಸ್ಸುಗಳಲ್ಲಿ ಅಡಗಿಸಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು فَبَشِّرۡهُم بِعَذَابٍ أَلِيمٍ ٢٤ಅವರಿಗೆ ಒಂದು ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ لَهُمۡ أَجۡرٌ غَيۡرُ مَمۡنُونِۭ ٢٥ವಿಶ್ವಾಸವಿಟ್ಟು ಸತ್ಕರ್ಮ ಮಾಡಿದವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ

الترجمة: Abdussalam Puthige.