ملة الإسلام

السورة 74 · 56 آية · Abdussalam Puthige

سورة المدثر باللغة الكانادية

السورة بالعربية مع التفسير استمع إلى سورة المدثر (1,220 قارئاً)
مكيةسورة المدثر٥٦ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

يَٰٓأَيُّهَا ٱلۡمُدَّثِّرُ ١ಹೊದ್ದುಕೊಂಡಿರುವವರೇ قُمۡ فَأَنذِرۡ ٢ಎದ್ದೇಳಿರಿ ಮತ್ತು ಎಚ್ಚರಿಸಿರಿ وَرَبَّكَ فَكَبِّرۡ ٣ನಿಮ್ಮ ಒಡೆಯನ ಹಿರಿಮೆಯನ್ನು ಕೊಂಡಾಡಿರಿ وَثِيَابَكَ فَطَهِّرۡ ٤ನಿಮ್ಮ ವಸ್ತ್ರಗಳನ್ನು ಶುಚಿಯಾಗಿಡಿ وَٱلرُّجۡزَ فَٱهۡجُرۡ ٥ಮಾಲಿನ್ಯಗಳಿಂದ ದೂರ ಉಳಿಯಿರಿ وَلَا تَمۡنُن تَسۡتَكۡثِرُ ٦(ಉಪಕೃತನಿಂದ) ಹೆಚ್ಚಿನದನ್ನು ಪಡೆಯಲಿಕ್ಕಾಗಿ ಉಪಕಾರ ಮಾಡಬೇಡಿರಿ وَلِرَبِّكَ فَٱصۡبِرۡ ٧ನಿಮ್ಮೊಡೆಯನಿಗಾಗಿ ಸಹನಶೀಲರಾಗಿರಿ فَإِذَا نُقِرَ فِي ٱلنَّاقُورِ ٨(ಲೋಕಾಂತ್ಯದ) ಕಹಳೆಯನ್ನು ಊದಲಾದಾಗ فَذَٰلِكَ يَوۡمَئِذٍ يَوۡمٌ عَسِيرٌ ٩ಆ ದಿನವು ಬಹಳ ಕಠಿಣ ದಿನವಾಗಿರುವುದು عَلَى ٱلۡكَٰفِرِينَ غَيۡرُ يَسِيرٍ ١٠ಧಿಕ್ಕಾರಿಗಳ ಪಾಲಿಗೆ ಅದು ಸುಲಭವಾಗಿರಲಾರದು ذَرۡنِي وَمَنۡ خَلَقۡتُ وَحِيدًا ١١ಬಿಟ್ಟು ಬಿಡಿರಿ, ನನ್ನನ್ನು ಮತ್ತು ನಾನು ಸೃಷ್ಟಿಸುವಾಗ ಒಂಟಿಯಾಗಿದ್ದಾತನನ್ನು وَجَعَلۡتُ لَهُۥ مَالًا مَّمۡدُودًا ١٢(ಮುಂದೆ) ನಾನು ಅವನಿಗೆ ಧಾರಾಳ ಸಂಪತ್ತನ್ನು ನೀಡಿದೆನು وَبَنِينَ شُهُودًا ١٣ಮತ್ತು ಸದಾ ಅವನ ಜೊತೆಗಿರುವ ಪುತ್ರರನ್ನು ನೀಡಿದೆನು وَمَهَّدتُّ لَهُۥ تَمۡهِيدًا ١٤ಮತ್ತು ಅವನಿಗೆ ಎಲ್ಲ ಬಗೆಯ ಸಾಧನಗಳನ್ನು ಒದಗಿಸಿದೆನು ثُمَّ يَطۡمَعُ أَنۡ أَزِيدَ ١٥ಆದರೆ ಅವನು, ನಾನು ಮತ್ತಷ್ಟು ನೀಡಬೇಕೆಂದು ಆಸೆ ಪಡುತ್ತಿದ್ದಾನೆ كـَلَّآۖ إِنَّهُۥ كَانَ لِأٓيَٰتِنَا عَنِيدًا ١٦ಹಾಗಾಗದು; ಅವನು ನಮ್ಮ ವಚನಗಳ ಶತ್ರುವಾಗಿರುವನು سَأُرۡهِقُهُۥ صَعُودًا ١٧ನಾನು ಅವನನ್ನು (ನರಕದ) ದುರ್ಗಮ ಬೆಟ್ಟವನ್ನು ಹತ್ತಿಸಲಿರುವೆನು إِنَّهُۥ فَكَّرَ وَقَدَّرَ ١٨ಅವನು ಯೋಚಿಸಿದನು ಮತ್ತು ನಿರ್ಧರಿಸಿಕೊಂಡನು فَقُتِلَ كَيۡفَ قَدَّرَ ١٩ನಾಶವಾಗಲಿ ಅವನು, ಎಂತಹ ನಿರ್ಧಾರ ಅವನದು ثُمَّ قُتِلَ كَيۡفَ قَدَّرَ ٢٠ಮತ್ತೆ, ನಾಶವಾಗಲಿ ಅವನು, ಎಂತಹ ನಿರ್ಧಾರ ಅವನದು ثُمَّ نَظَرَ ٢١ಮತ್ತೆ ಅವನು ನೋಡಿದನು ثُمَّ عَبَسَ وَبَسَرَ ٢٢ಮತ್ತೆ ಅವನು ಹುಬ್ಬೇರಿಸಿ ಮುಖ ತಿರುಚಿಕೊಂಡನು ثُمَّ أَدۡبَرَ وَٱسۡتَكۡبَرَ ٢٣ಮತ್ತೆ ಅವನು ತಿರುಗಿ ನಿಂತನು ಮತ್ತು ಅಹಂಕಾರ ತೋರಿದನು فَقَالَ إِنۡ هَٰذَآ إِلَّا سِحۡرٌ يُؤۡثَرُ ٢٤ಮತ್ತೆ ಅವನು ಹೇಳಿದನು; ‘‘ಇದು ಪರಂಪರಾಗತ ಮಾಟಗಾರಿಕೆಯೇ ಹೊರತು ಬೇರೇನಲ್ಲ’’ إِنۡ هَٰذَآ إِلَّا قَوۡلُ ٱلۡبَشَرِ ٢٥‘‘ಇದು ಕೇವಲ ಮನುಷ್ಯನ ಮಾತೇ ಹೊರತು ಬೇರೇನಲ್ಲ’’ سَأُصۡلِيهِ سَقَرَ ٢٦ನಾವು ಅವನನ್ನು ‘ಸಕರ್’ಗೆ (ನರಕಕ್ಕೆ) ಎಸಯಲಿರುವೆವು وَمَآ أَدۡرَىٰكَ مَا سَقَرُ ٢٧ಸಕರ್ ಏನೆಂದು ನಿಮಗೇನು ಗೊತ್ತು لَا تُبۡقِي وَلَا تَذَرُ ٢٨ಅದು ಉಳಿಯಲೂ ಬಿಡದು ಅಳಿಯಲೂ ಬಿಡದು لَوَّاحَةٌ لِّلۡبَشَرِ ٢٩ಅದು ಮನುಷ್ಯನನ್ನು ಸುಟ್ಟು ಕರ್ರಗಾಗಿಸುವುದು عَلَيۡهَا تِسۡعَةَ عَشَرَ ٣٠ಅದರ ಮೇಲೆ ಹತ್ತೊಂಭತ್ತು ಮಂದಿ (ಕಾವಲುಗಾರರು) ಇರುವರು وَمَا جَعَلۡنَآ أَصۡحَٰبَ ٱلنَّارِ إِلَّا مَلَٰٓئِكَةًۖ وَمَا جَعَلۡنَا عِدَّتَهُمۡ إِلَّا فِتۡنَةً لِّلَّذِينَ كَفَرُواْ لِيَسۡتَيۡقِنَ ٱلَّذِينَ أُوتُواْ ٱلۡكِتَٰبَ وَيَزۡدَادَ ٱلَّذِينَ ءَامَنُوٓاْ إِيمَٰنًا وَلَا يَرۡتَابَ ٱلَّذِينَ أُوتُواْ ٱلۡكِتَٰبَ وَٱلۡمُؤۡمِنُونَ وَلِيَقُولَ ٱلَّذِينَ فِي قُلُوبِهِم مَّرَضٌ وَٱلۡكَٰفِرُونَ مَاذَآ أَرَادَ ٱللَّهُ بِهَٰذَا مَثَلًاۚ كَذَٰلِكَ يُضِلُّ ٱللَّهُ مَن يَشَآءُ وَيَهۡدِي مَن يَشَآءُۚ وَمَا يَعۡلَمُ جُنُودَ رَبِّكَ إِلَّا هُوَۚ وَمَا هِيَ إِلَّا ذِكۡرَىٰ لِلۡبَشَرِ ٣١ನಾವು ಮಲಕ್‌ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ كـَلَّا وَٱلۡقَمَرِ ٣٢ಹಾಗೇನೂ ಅಲ್ಲ, ಚಂದ್ರನಾಣೆ وَٱلَّيۡلِ إِذۡ أَدۡبَرَ ٣٣ಮತ್ತು ಇರುಳು ಮರಳುವಾಗಿನ ಆಣೆ وَٱلصُّبۡحِ إِذَآ أَسۡفَرَ ٣٤ಮತ್ತು ಮುಂಜಾವು ಬೆಳಗುವಾಗಿನಾಣೆ إِنَّهَا لَإِحۡدَى ٱلۡكُبَرِ ٣٥ಅದು (ನರಕವು) ಒಂದು ಮಹಾ ವಿಪತ್ತಾಗಿದೆ نَذِيرًا لِّلۡبَشَرِ ٣٦ಜನರು ಅಂಜ ಬೇಕಾದ ವಸ್ತುವಾಗಿದೆ لِمَن شَآءَ مِنكُمۡ أَن يَتَقَدَّمَ أَوۡ يَتَأَخَّرَ ٣٧ನಿಮ್ಮ ಪೈಕಿ ಇಷ್ಟ ಉಳ್ಳವನು ಮುಂದೆ ಹೋಗಲಿ ಅಥವಾ ಹಿಂದೆ ಉಳಿಯಲಿ كُلُّ نَفۡسِۭ بِمَا كَسَبَتۡ رَهِينَةٌ ٣٨ಪ್ರತಿಯೊಬ್ಬನೂ ತನ್ನ ಕರ್ಮಗಳ ಬದಲಿಗೆ ಒತ್ತೆಯಾಳಾಗಿರುವನು إِلَّآ أَصۡحَٰبَ ٱلۡيَمِينِ ٣٩ಬಲಭಾಗದವರ ಹೊರತು فِي جَنَّٰتٍ يَتَسَآءَلُونَ ٤٠ಅವರು ಸ್ವರ್ಗ ತೋಟಗಳಲ್ಲಿ ಇರುವರು ಮತ್ತು ಪ್ರಶ್ನಿಸುವರು عَنِ ٱلۡمُجۡرِمِينَ ٤١ಅಪರಾಧಿಗಳೊಡನೆ مَا سَلَكَكُمۡ فِي سَقَرَ ٤٢‘‘ನೀವೇಕೆ ನರಕಕ್ಕೆ ಹೋದಿರಿ?’’ قَالُواْ لَمۡ نَكُ مِنَ ٱلۡمُصَلِّينَ ٤٣ಅವರು ಹೇಳುವರು; ‘‘ನಾವು ನಮಾಝ್ ಸಲ್ಲಿಸುವವರಾಗಿರಲಿಲ್ಲ’’ وَلَمۡ نَكُ نُطۡعِمُ ٱلۡمِسۡكِينَ ٤٤‘‘ಮತ್ತು ನಾವು ಬಡವರಿಗೆ ಉಣಿಸುತ್ತಿರಲಿಲ್ಲ’’ وَكُنَّا نَخُوضُ مَعَ ٱلۡخَآئِضِينَ ٤٥‘‘ನಿರರ್ಥಕ ಮಾತುಗಳನ್ನಾಡುವವರ ಜೊತೆಗಿದ್ದು ನಾವೂ ನಿರರ್ಥಕ ಮಾತುಗಳನ್ನಾಡುತ್ತಿದ್ದೆವು’’ وَكُنَّا نُكَذِّبُ بِيَوۡمِ ٱلدِّينِ ٤٦‘‘ಮತ್ತು ನಾವು ಅಂತಿಮ ವಿಚಾರಣೆಯ ದಿನವನ್ನು ಅಲ್ಲಗಳೆಯುತ್ತಿದ್ದೆವು’’ حَتَّىٰٓ أَتَىٰنَا ٱلۡيَقِينُ ٤٧‘‘ಕೊನೆಗೆ ಖಚಿತವಾದ ಆ ಸಂಭವವು (ಮರಣ) ನಮ್ಮ ಬಳಿಗೆ ಬಂದು ಬಿಟ್ಟಿತು’’ فَمَا تَنفَعُهُمۡ شَفَٰعَةُ ٱلشَّٰفِعِينَ ٤٨ಶಿಫಾರಸುದಾರರ ಶಿಫಾರಸಿನಿಂದ ಅವರಿಗೆ ಯಾವ ಲಾಭವೂ ಆಗದು فَمَا لَهُمۡ عَنِ ٱلتَّذۡكِرَةِ مُعۡرِضِينَ ٤٩ಅವರಿಗೇನಾಗಿದೆ? ಉಪದೇಶವನ್ನು ಅವರೇಕೆ ಕಡೆಗಣಿಸುತ್ತಿದ್ದಾರೆ كَأَنَّهُمۡ حُمُرٌ مُّسۡتَنفِرَةٌ ٥٠ಅವರು (ಸತ್ಯದ ಮುಂದೆ) ಕತ್ತೆಗಳಂತೆ ಬೆಚ್ಚಿ ಬೀಳುತ್ತಿದ್ದಾರೆ فَرَّتۡ مِن قَسۡوَرَةِۭ ٥١ಸಿಂಹಕ್ಕೆ ಅಂಜಿ ಓಡುತ್ತಿರುವ (ಕತ್ತೆಗಳಂತೆ) بَلۡ يُرِيدُ كُلُّ ٱمۡرِيٍٕ مِّنۡهُمۡ أَن يُؤۡتَىٰ صُحُفًا مُّنَشَّرَةً ٥٢ನಿಜವಾಗಿ ಅವರ ಪೈಕಿ ಪ್ರತಿಯೊಬ್ಬರೂ, ತಮ್ಮ ಬಳಿಗೆ ತೆರೆದ ಗ್ರಂಥವೊಂದು (ಆಕಾಶದಿಂದ ಇಳಿದು) ಬರಬೇಕೆಂದು ಅಪೇಕ್ಷಿಸುತ್ತಿದ್ದಾರೆ كـَلَّاۖ بَل لَّا يَخَافُونَ ٱلۡأٓخِرَةَ ٥٣ಹಾಗೇನೂ ಅಲ್ಲ. ನಿಜವಾಗಿ ಅವರಿಗೆ ಪರಲೋಕದ ಭಯವಿಲ್ಲ كـَلَّآ إِنَّهُۥ تَذۡكِرَةٌ ٥٤ಹಾಗೇನೂ ಅಲ್ಲ. ಇದು ಖಂಡಿತ ಒಂದು ಉಪದೇಶವಾಗಿದೆ فَمَن شَآءَ ذَكَرَهُۥ ٥٥ಇಷ್ಟವುಳ್ಳವನು ಇದನ್ನು ನೆನಪಿಡಲಿ وَمَا يَذۡكُرُونَ إِلَّآ أَن يَشَآءَ ٱللَّهُۚ هُوَ أَهۡلُ ٱلتَّقۡوَىٰ وَأَهۡلُ ٱلۡمَغۡفِرَةِ ٥٦ಅಲ್ಲಾಹನು ಇಚ್ಛಿಸುವವನು ಮಾತ್ರ ಇದನ್ನು ನೆನಪಿಡುವನು. ಅವನು (ಅಲ್ಲಾಹನು) ಭಕ್ತಿಗೆ ಅರ್ಹನು ಹಾಗೂ ಕ್ಷಮಿಸುವವನಾಗಿದ್ದಾನೆ

الترجمة: Abdussalam Puthige.