بِسۡمِ ٱللَّهِ ٱلرَّحۡمَٰنِ ٱلرَّحِيمِ
وَٱلۡمُرۡسَلَٰتِ عُرۡفًا ١ಮೃದುವಾಗಿ ಚಲಿಸುವ ವಸ್ತುವಿನ (ವಾಯುವಿನ) ಆಣೆ فَٱلۡعَٰصِفَٰتِ عَصۡفًا ٢ಕ್ರಮೇಣ ಅದು ಬಿರುಸಾಗಿ ಬಿಡುತ್ತದೆ وَٱلنَّٰشِرَٰتِ نَشۡرًا ٣(ಮೋಡಗಳನ್ನು) ವಿವಿಧೆಡೆಗಳಿಗೆ ತಲುಪಿಸುತ್ತದೆ فَٱلۡفَٰرِقَٰتِ فَرۡقًا ٤ಕೊನೆಗೆ ಅವುಗಳನ್ನು ಚದುರಿಸಿ ಬಿಡುತ್ತದೆ فَٱلۡمُلۡقِيَٰتِ ذِكۡرًا ٥ದಿವ್ಯ ಉಪದೇಶವನ್ನು ತಲುಪಿಸುವವರ (ಮಲಕ್ಗಳ) ಆಣೆ عُذۡرًا أَوۡ نُذۡرًا ٦ಪುರಾವೆಯ ರೂಪದಲ್ಲಾಗಲೀ ಎಚ್ಚರಿಕೆಯ ರೂಪದಲ್ಲಾಗಲೀ إِنَّمَا تُوعَدُونَ لَوَٰقِعٌ ٧ನಿಮಗೇನನ್ನು ವಾಗ್ದಾನ ಮಾಡಲಾಗಿದೆಯೋ ಅದು ಖಂಡಿತ ಸಂಭವಿಸಲಿದೆ فَإِذَا ٱلنُّجُومُ طُمِسَتۡ ٨ನಕ್ಷತ್ರಗಳು ನಿಸ್ತೇಜವಾದಾಗ وَإِذَا ٱلسَّمَآءُ فُرِجَتۡ ٩ಆಕಾಶವು ಬಿರಿದು ಬಿಟ್ಟಾಗ وَإِذَا ٱلۡجِبَالُ نُسِفَتۡ ١٠ಪರ್ವತಗಳು (ಚೂರು ಚೂರಾಗಿ) ಹಾರಾಡುತ್ತಿರುವಾಗ وَإِذَا ٱلرُّسُلُ أُقِّتَتۡ ١١ದೇವ ದೂತರುಗಳನ್ನು ಒಟ್ಟು ಸೇರಿಸಲಾದಾಗ لِأَيِّ يَوۡمٍ أُجِّلَتۡ ١٢(ಅವರ ವಿಚಾರಣೆಯನ್ನು) ಯಾವ ದಿನಕ್ಕಾಗಿ ಮುಂದೂಡಲಾಗಿದೆ لِيَوۡمِ ٱلۡفَصۡلِ ١٣(ಅಂತಿಮ) ತೀರ್ಪಿನ ದಿನಕ್ಕಾಗಿ وَمَآ أَدۡرَىٰكَ مَا يَوۡمُ ٱلۡفَصۡلِ ١٤ಆ ತೀರ್ಪಿನ ದಿನ ಏನೆಂಬುದು ನಿಮಗೇನು ಗೊತ್ತು وَيۡلٌ يَوۡمَئِذٍ لِّلۡمُكَذِّبِينَ ١٥ಅಂದು ಧಿಕ್ಕಾರಿಗಳಿಗೆ ವಿನಾಶವಿದೆ أَلَمۡ نُهۡلِكِ ٱلۡأَوَّلِينَ ١٦ನಾವೇನು ಹಿಂದಿನವರನ್ನು ನಾಶ ಮಾಡಿಲ್ಲವೇ ثُمَّ نُتۡبِعُهُمُ ٱلۡأٓخِرِينَ ١٧ಆ ಬಳಿಕ ನಾವು ಮುಂದಿನವರನ್ನು ಅವರ ಹಿಂದೆ ನಡೆಸಿದೆವು كَذَٰلِكَ نَفۡعَلُ بِٱلۡمُجۡرِمِينَ ١٨ನಾವು ಅಪರಾಧಿಗಳಿಗೆ ಹೀಗೆಯೇ ಮಾಡುತ್ತೇವೆ وَيۡلٌ يَوۡمَئِذٍ لِّلۡمُكَذِّبِينَ ١٩ಅಂದು ಧಿಕ್ಕಾರಿಗಳಿಗೆ ವಿನಾಶವಿದೆ أَلَمۡ نَخۡلُقكُّم مِّن مَّآءٍ مَّهِينٍ ٢٠ನಾವೇನು ನಿಮ್ಮನ್ನು ತುಚ್ಛವಾದ ನೀರಿನಿಂದ ಸೃಷ್ಟಿಸಿಲ್ಲವೇ فَجَعَلۡنَٰهُ فِي قَرَارٍ مَّكِينٍ ٢١ತರುವಾಯ ನಾವು ಅದನ್ನು ಒಂದು ಸುರಕ್ಷಿತ ಸ್ಥಳದಲ್ಲಿಟ್ಟೆವು إِلَىٰ قَدَرٍ مَّعۡلُومٍ ٢٢ಒಂದು ನಿರ್ದಿಷ್ಟ ಕಾಲದವರೆಗೆ فَقَدَرۡنَا فَنِعۡمَ ٱلۡقَٰدِرُونَ ٢٣ತರುವಾಯ ನಾವು (ಅದರ) ಪ್ರಮಾಣವನ್ನು ನಿಶ್ಚಯಿಸಿದೆವು. ನಾವು ಅತ್ಯುತ್ತಮವಾಗಿ ಪ್ರಮಾಣವನ್ನು ನಿಶ್ಚಯಿಸುತ್ತೇವೆ وَيۡلٌ يَوۡمَئِذٍ لِّلۡمُكَذِّبِينَ ٢٤ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ أَلَمۡ نَجۡعَلِ ٱلۡأَرۡضَ كِفَاتًا ٢٥ನಾವು ಭೂಮಿಯನ್ನು ಬಾಚುವ ವಸ್ತುವಾಗಿಸಿಲ್ಲವೇ – أَحۡيَآءً وَأَمۡوَٰتًا ٢٦– ಜೀವಿಸಿರುವವರನ್ನೂ ಸತ್ತವರನ್ನೂ وَجَعَلۡنَا فِيهَا رَوَٰسِيَ شَٰمِخَٰتٍ وَأَسۡقَيۡنَٰكُم مَّآءً فُرَاتًا ٢٧ನಾವು ಅದರೊಳಗೆ ಎತ್ತರದ ಪರ್ವತಗಳನ್ನಿಟ್ಟಿರುವೆವು ಮತ್ತು ನಿಮಗೆ ಸಿಹಿ ನೀರನ್ನು ಕುಡಿಸಿರುವೆವು وَيۡلٌ يَوۡمَئِذٍ لِّلۡمُكَذِّبِينَ ٢٨ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ ٱنطَلِقُوٓاْ إِلَىٰ مَا كُنتُم بِهِۦ تُكَذِّبُونَ ٢٩ಇದೀಗ, ನೀವು ಯಾವುದನ್ನು ತಿರಸ್ಕರಿಸುತ್ತಲಿದ್ದಿರೋ ಅದರೆಡೆಗೆ ನಡೆಯಿರಿ ٱنطَلِقُوٓاْ إِلَىٰ ظِلٍّ ذِي ثَلَٰثِ شُعَبٍ ٣٠ನಡೆಯಿರಿ, ಮೂರು ಮಜಲುಗಳಿರುವ ಕತ್ತಲೆಯೆಡೆಗೆ لَّا ظَلِيلٍ وَلَا يُغۡنِي مِنَ ٱللَّهَبِ ٣١ಅಲ್ಲಿ ನೆರಳು ಇರದು ಮತ್ತು ಅಗ್ನಿಯ ಆಲಿಂಗನದಿಂದ ರಕ್ಷೆಯೂ ಇರದು إِنَّهَا تَرۡمِي بِشَرَرٍ كَٱلۡقَصۡرِ ٣٢ಅದು ಕೋಟೆಗಳ ಗಾತ್ರದ ಬೆಂಕಿಯ ಕಿಡಿಗಳನ್ನು ಸುರಿಸುತ್ತಿರುವುದು كَأَنَّهُۥ جِمَٰلَتٌ صُفۡرٌ ٣٣ಅವು ಹಳದಿ ಒಂಟೆಗಳಂತಿರುವವು وَيۡلٌ يَوۡمَئِذٍ لِّلۡمُكَذِّبِينَ ٣٤ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ هَٰذَا يَوۡمُ لَا يَنطِقُونَ ٣٥ಅದು ಅವರಿಗೆ ಮಾತನಾಡಲಾಗದ ದಿನವಾಗಿರುವುದು وَلَا يُؤۡذَنُ لَهُمۡ فَيَعۡتَذِرُونَ ٣٦ನೆಪಗಳನ್ನೊಡ್ಡಲು, ಅಂದು ಅವರಿಗೆ ಅನುಮತಿ ಸಿಗದು وَيۡلٌ يَوۡمَئِذٍ لِّلۡمُكَذِّبِينَ ٣٧ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ هَٰذَا يَوۡمُ ٱلۡفَصۡلِۖ جَمَعۡنَٰكُمۡ وَٱلۡأَوَّلِينَ ٣٨ಇದು ಅಂತಿಮ ತೀರ್ಪಿನ ದಿನ. (ಇಂದು) ನಾವು ನಿಮ್ಮನ್ನೂ ನಿಮ್ಮ ಹಿಂದಿನವರನ್ನೂ ಒಟ್ಟು ಸೇರಿಸಿರುವೆವು فَإِن كَانَ لَكُمۡ كَيۡدٌ فَكِيدُونِ ٣٩ನಿಮ್ಮ ಬಳಿ ಏನಾದರೂ ಸಂಚು ಇದ್ದರೆ ಹೂಡಿ ನೋಡಿರಿ وَيۡلٌ يَوۡمَئِذٍ لِّلۡمُكَذِّبِينَ ٤٠ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ إِنَّ ٱلۡمُتَّقِينَ فِي ظِلَٰلٍ وَعُيُونٍ ٤١(ಅಂದು) ಧರ್ಮನಿಷ್ಠರು ನೆರಳುಗಳಲ್ಲಿರುವರು ಮತ್ತು (ಅವರ ಬಳಿ) ಚಿಲುಮೆಗಳಿರುವವು وَفَوَٰكِهَ مِمَّا يَشۡتَهُونَ ٤٢ಹಾಗೂ ಅವರು ಮೆಚ್ಚುವ ಹಣ್ಣು ಹಂಪಲುಗಳಿರುವವು كُلُواْ وَٱشۡرَبُواْ هَنِيٓـَٔۢا بِمَا كُنتُمۡ تَعۡمَلُونَ ٤٣‘‘ನೀವು ಮಾಡಿದ್ದ ಕರ್ಮಗಳ ಫಲವಾಗಿ, ಧಾರಾಳವಾಗಿ ತಿನ್ನಿರಿ ಮತ್ತು ಕುಡಿಯಿರಿ’’ (ಎಂದು ಅವರೊಡನೆ ಹೇಳಲಾಗುವುದು) إِنَّا كَذَٰلِكَ نَجۡزِي ٱلۡمُحۡسِنِينَ ٤٤ಸಜ್ಜನರನ್ನು ನಾವು ಇದೇ ರೀತಿ ಪುರಸ್ಕರಿಸುತ್ತೇವೆ وَيۡلٌ يَوۡمَئِذٍ لِّلۡمُكَذِّبِينَ ٤٥ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ كُلُواْ وَتَمَتَّعُواْ قَلِيلًا إِنَّكُم مُّجۡرِمُونَ ٤٦(ಧಿಕ್ಕಾರಿಗಳೇ, ಇಹಲೋಕದಲ್ಲಿ) ಅಲ್ಪಾವಧಿಗಾಗಿ ತಿನ್ನಿರಿ ಮತ್ತು ಕುಡಿಯಿರಿ – ನೀವು ಖಂಡಿತ ಅಪರಾಧಿಗಳಾಗಿರುವಿರಿ وَيۡلٌ يَوۡمَئِذٍ لِّلۡمُكَذِّبِينَ ٤٧ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ وَإِذَا قِيلَ لَهُمُ ٱرۡكَعُواْ لَا يَرۡكَعُونَ ٤٨‘‘(ಅಲ್ಲಾಹನ ಮುಂದೆ) ಬಾಗಿರಿ’’ ಎಂದು ಅವರೊಡನೆ ಹೇಳಿದಾಗ ಅವರು ಬಾಗುವುದಿಲ್ಲ وَيۡلٌ يَوۡمَئِذٍ لِّلۡمُكَذِّبِينَ ٤٩ಅಂದು ವಿನಾಶವಿದೆ, (ಸತ್ಯವನ್ನು) ತಿರಸ್ಕರಿಸಿದವರಿಗೆ. 50. ಇದರ (ಕುರ್ಆನಿನ) ಬಳಿಕ, ಅವರಿನ್ನು ಯಾವ ಮಾತನ್ನು ತಾನೇ ನಂಬುವರು فَبِأَيِّ حَدِيثِۭ بَعۡدَهُۥ يُؤۡمِنُونَ ٥٠ಅವರು ಯಾವುದರ ಕುರಿತು ವಿಚಾರಿಸುತ್ತಿದ್ದಾರೆ