بِسۡمِ ٱللَّهِ ٱلرَّحۡمَٰنِ ٱلرَّحِيمِ
وَيۡلٌ لِّلۡمُطَفِّفِينَ ١ವಿನಾಶವಿದೆ ತೂಕದಲ್ಲಿ ಕೊರತೆ ಮಾಡುವವರಿಗೆ ٱلَّذِينَ إِذَا ٱكۡتَالُواْ عَلَى ٱلنَّاسِ يَسۡتَوۡفُونَ ٢ಅವರು ಜನರಿಂದ ಅಳೆದು ಪಡೆಯುವಾಗ ಪೂರ್ಣವಾಗಿ ಪಡೆಯುತ್ತಾರೆ وَإِذَا كَالُوهُمۡ أَو وَّزَنُوهُمۡ يُخۡسِرُونَ ٣ಆದರೆ ಇತರರಿಗೆ ಅಳೆದು ಅಥವಾ ತೂಗಿ ಕೊಡುವಾಗ ಕಡಿಮೆಗೊಳಿಸಿ ಕೊಡುತ್ತಾರೆ أَلَا يَظُنُّ أُوْلَٰٓئِكَ أَنَّهُم مَّبۡعُوثُونَ ٤ಅವರನ್ನು ಮತ್ತೆ ಜೀವಂತ ಗೊಳಿಸಲಾಗುವುದೆಂದು ಅವರಿಗೇನು ತಿಳಿಯದೇ لِيَوۡمٍ عَظِيمٍ ٥ಒಂದು ಮಹಾದಿನ ಅದು ಸಂಭವಿಸುವುದು يَوۡمَ يَقُومُ ٱلنَّاسُ لِرَبِّ ٱلۡعَٰلَمِينَ ٦ಅಂದು ಮಾನವರೆಲ್ಲಾ ವಿಶ್ವದೊಡೆಯನ ಮುಂದೆ ನಿಲ್ಲುವರು كـَلَّآ إِنَّ كِتَٰبَ ٱلۡفُجَّارِ لَفِي سِجِّينٍ ٧ನಿಮಗೆ ತಿಳಿದಿರಲಿ, ದುಷ್ಟರ ಕರ್ಮಗಳು ‘ಸಿಜ್ಜೀನ್’ನಲ್ಲಿವೆ وَمَآ أَدۡرَىٰكَ مَا سِجِّينٌ ٨ಸಿಜ್ಜೀನ್ ಅಂದರೆ ಏನೆಂದು ನಿಮಗೇನು ಗೊತ್ತು كِتَٰبٌ مَّرۡقُومٌ ٩ಅದೊಂದು ಲಿಖಿತ ಗ್ರಂಥ وَيۡلٌ يَوۡمَئِذٍ لِّلۡمُكَذِّبِينَ ١٠ಅಂದು ವಿನಾಶವಿದೆ – ಧಿಕ್ಕಾರಿಗಳಿಗೆ ٱلَّذِينَ يُكَذِّبُونَ بِيَوۡمِ ٱلدِّينِ ١١ಅವರು ಪ್ರತಿಫಲದ ದಿನವನ್ನು ತಿರಸ್ಕರಿಸುತ್ತಾರೆ وَمَا يُكَذِّبُ بِهِۦٓ إِلَّا كُلُّ مُعۡتَدٍ أَثِيمٍ ١٢ನಿಜವಾಗಿ, ಎಲ್ಲೆ ಮೀರಿದ ಪಾಪಿ ಮಾತ್ರ ಅದನ್ನು ಧಿಕ್ಕರಿಸುತ್ತಾನೆ إِذَا تُتۡلَىٰ عَلَيۡهِ ءَايَٰتُنَا قَالَ أَسَٰطِيرُ ٱلۡأَوَّلِينَ ١٣ಅವನಿಗೆ ನಮ್ಮ ವಚನಗಳನ್ನು ಓದಿ ಕೇಳಿಸಲಾದಾಗ ಅವನು, ಇವೆಲ್ಲ ಗತಕಾಲದ ಕಥೆಗಳು ಎನ್ನುತ್ತಾನೆ كـَلَّاۖ بَلۡۜ رَانَ عَلَىٰ قُلُوبِهِم مَّا كَانُواْ يَكۡسِبُونَ ١٤ಹಾಗಲ್ಲ – ನಿಜವಾಗಿ ಅವರು ಮಾಡಿದ್ದ ಕರ್ಮಗಳು ಅವರ ಮನಸ್ಸುಗಳಿಗೆ ತುಕ್ಕು ಹಿಡಿಸಿವೆ كـَلَّآ إِنَّهُمۡ عَن رَّبِّهِمۡ يَوۡمَئِذٍ لَّمَحۡجُوبُونَ ١٥ಹಾಗಲ್ಲ – ಅಂದು ಅವರು ತನ್ನ ಒಡೆಯನಿಂದ ಮರೆಯಲ್ಲಿರುವರು ثُمَّ إِنَّهُمۡ لَصَالُواْ ٱلۡجَحِيمِ ١٦ತರುವಾಯ ಅವರು ನರಕವನ್ನು ಸೇರುವರು ثُمَّ يُقَالُ هَٰذَا ٱلَّذِي كُنتُم بِهِۦ تُكَذِّبُونَ ١٧ನೀವು ತಿರಸ್ಕರಿಸುತ್ತಿದ್ದುದು ಇದನ್ನೇ ಎಂದು ಅವರೊಡನೆ ಹೇಳಲಾಗುವುದು كـَلَّآ إِنَّ كِتَٰبَ ٱلۡأَبۡرَارِ لَفِي عِلِّيِّينَ ١٨ನಿಮಗೆ ತಿಳಿದಿರಲಿ ಸಜ್ಜನರ ಕರ್ಮ ಪತ್ರವು ‘ಇಲ್ಲಿಯ್ಯೀನ್’ನಲ್ಲಿರುವುದು وَمَآ أَدۡرَىٰكَ مَا عِلِّيُّونَ ١٩ಇಲ್ಲಿಯ್ಯೀನ್ ಅಂದರೇನೆಂದು ನಿಮಗೇನು ಗೊತ್ತು كِتَٰبٌ مَّرۡقُومٌ ٢٠ಅದೊಂದು (ಕರ್ಮಗಳ) ಲಿಖಿತ ಗ್ರಂಥ يَشۡهَدُهُ ٱلۡمُقَرَّبُونَ ٢١(ಅಲ್ಲಾಹನಿಗೆ) ನಿಕಟರಾಗಿರುವವರು ಅದರ ಬಳಿ ಹಾಜರಿರುವರು إِنَّ ٱلۡأَبۡرَارَ لَفِي نَعِيمٍ ٢٢ಸಜ್ಜನರು ಖಂಡಿತ ಐಶಾರಾಮದಲ್ಲಿರುವರು عَلَى ٱلۡأَرَآئِكِ يَنظُرُونَ ٢٣ವೈಭವದ ಆಸನಗಳಲ್ಲಿದ್ದು ದೃಶ್ಯಗಳನ್ನು ಆಸ್ವದಿಸುವರು تَعۡرِفُ فِي وُجُوهِهِمۡ نَضۡرَةَ ٱلنَّعِيمِ ٢٤ನೀವು ಅವರ ಮುಖಗಳಲ್ಲಿ ಸುಖದ ಉಲ್ಲಾಸವನ್ನು ಕಾಣುವಿರಿ يُسۡقَوۡنَ مِن رَّحِيقٍ مَّخۡتُومٍ ٢٥ಅವರಿಗೆ ಮುದ್ರೆ ಹಾಕಿ ಮುಚ್ಚಿಟ್ಟಿದ್ದ ಶುದ್ಧ ಮದಿರೆಯನ್ನು ಕುಡಿಸಲಾಗುವುದು خِتَٰمُهُۥ مِسۡكٌۚ وَفِي ذَٰلِكَ فَلۡيَتَنَافَسِ ٱلۡمُتَنَٰفِسُونَ ٢٦ಅದರ ಮುದ್ರೆ ಕಸ್ತೂರಿಯದ್ದಾಗಿರುವುದು, ಸ್ಪರ್ಧಿಸುವವರು ಇದನ್ನು ಪಡೆಯಲು ಸ್ಪರ್ಧಿಸಲಿ وَمِزَاجُهُۥ مِن تَسۡنِيمٍ ٢٧ಅದರಲ್ಲಿ ತಸ್ನೀಮ್ನ ಮಿಶ್ರಣವಿರುವುದು عَيۡنًا يَشۡرَبُ بِهَا ٱلۡمُقَرَّبُونَ ٢٨ಅದೊಂದು ಚಿಲುಮೆ. ಅಲ್ಲಾಹನ ಆಪ್ತರಾಗಿರುವವರು (ಸ್ವರ್ಗವಾಸಿಗಳು) ಅದನ್ನು ಸೇವಿಸುವರು إِنَّ ٱلَّذِينَ أَجۡرَمُواْ كَانُواْ مِنَ ٱلَّذِينَ ءَامَنُواْ يَضۡحَكُونَ ٢٩ಅಪರಾಧಿಗಳು (ಇಹಲೋಕದಲ್ಲಿ) ವಿಶ್ವಾಸಿಗಳನ್ನು ಕಂಡು (ಗೇಲಿ ಮಾಡಿ) ನಗುತ್ತಿದ್ದರು وَإِذَا مَرُّواْ بِهِمۡ يَتَغَامَزُونَ ٣٠ಅವರ ಬಳಿಯಿಂದ ಹಾದು ಹೋಗುವಾಗ ತಾತ್ಸಾರದಿಂದ ಕೈ ಸನ್ನೆಗಳನ್ನು ಮಾಡುತ್ತಿದ್ದರು وَإِذَا ٱنقَلَبُوٓاْ إِلَىٰٓ أَهۡلِهِمُ ٱنقَلَبُواْ فَكِهِينَ ٣١ಅವರು ತಮ್ಮ ಮನೆಯವರ ಬಳಿಗೆ ಮರಳುವಾಗ ಹೆಮ್ಮೆಯಿಂದ ಬೀಗುತ್ತಾ ಮರಳುತ್ತಿದ್ದರು وَإِذَا رَأَوۡهُمۡ قَالُوٓاْ إِنَّ هَٰٓؤُلَآءِ لَضَآلُّونَ ٣٢ಅವರು ಇವರನ್ನು (ವಿಶ್ವಾಸಿಗಳನ್ನು) ಕಂಡಾಗ, ಇವರು ದಾರಿಗೆಟ್ಟವರು ಎನ್ನುತ್ತಿದ್ದರು وَمَآ أُرۡسِلُواْ عَلَيۡهِمۡ حَٰفِظِينَ ٣٣ನಿಜವಾಗಿ ಅವರನ್ನು ಇವರ ಮೇಲ್ವಿಚಾರಣೆಗೇನೂ ಕಳಿಸಲಾಗಿರಲಿಲ್ಲ فَٱلۡيَوۡمَ ٱلَّذِينَ ءَامَنُواْ مِنَ ٱلۡكُفَّارِ يَضۡحَكُونَ ٣٤ಆದರೆ ಇಂದು ವಿಶ್ವಾಸಿಗಳು ಧಿಕ್ಕಾರಿಗಳನ್ನು ಕಂಡು ನಗುವರು عَلَى ٱلۡأَرَآئِكِ يَنظُرُونَ ٣٥ವೈಭವದ ಆಸನದಲ್ಲಿದ್ದು (ಧಿಕ್ಕಾರಿಗಳ ಗತಿಯನ್ನು) ಕಾಣುತ್ತಿರುವರು هَلۡ ثُوِّبَ ٱلۡكُفَّارُ مَا كَانُواْ يَفۡعَلُونَ ٣٦ಧಿಕ್ಕಾರಿಗಳಿಗೆ ಸಿಕ್ಕಿ ಬಿಟ್ಟಿತೇ, ಅವರು ಮಾಡುತ್ತಿದ್ದ ಕೃತ್ಯಗಳ ಪ್ರತಿಫಲ