بِسۡمِ ٱللَّهِ ٱلرَّحۡمَٰنِ ٱلرَّحِيمِ
لَآ أُقۡسِمُ بِيَوۡمِ ٱلۡقِيَٰمَةِ ١ಅಲ್ಲ, ನಾನು ಪುನರುತ್ಥಾನ ದಿನದ ಆಣೆ ಹಾಕುತ್ತೇನೆ وَلَآ أُقۡسِمُ بِٱلنَّفۡسِ ٱللَّوَّامَةِ ٢ಅಲ್ಲ, ನಾನು ದೂಷಿಸುವ ಚಿತ್ತದ ಆಣೆ ಹಾಕುತ್ತೇನೆ أَيَحۡسَبُ ٱلۡإِنسَٰنُ أَلَّن نَّجۡمَعَ عِظَامَهُۥ ٣ಮನುಷ್ಯನೇನು, ಅವನ ಎಲುಬುಗಳನ್ನು ನಾವು (ಮತ್ತೆ) ಸಂಘಟಿಸಲಾರೆವೆಂದು ಭಾವಿಸಿದ್ದಾನೆಯೇ بَلَىٰ قَٰدِرِينَ عَلَىٰٓ أَن نُّسَوِّيَ بَنَانَهُۥ ٤ಯಾಕಿಲ್ಲ? ನಾವಂತೂ ಅವನ ಬೆರಳ ತುದಿಗಳನ್ನೂ ಮತ್ತೆ ರಚಿಸಲು ಸಮರ್ಥರಾಗಿದ್ದೇವೆ بَلۡ يُرِيدُ ٱلۡإِنسَٰنُ لِيَفۡجُرَ أَمَامَهُۥ ٥ನಿಜವಾಗಿ, ಮನುಷ್ಯನು ತನ್ನ ಪಾಪಕೃತ್ಯಗಳಲ್ಲೇ ಮುಂದುವರಿಯ ಬಯಸುತ್ತಾನೆ يَسۡـَٔلُ أَيَّانَ يَوۡمُ ٱلۡقِيَٰمَةِ ٦‘‘ಪುನರುತ್ಥಾನ ದಿನವು ಅದೆಂದು ಬಂದೀತು?’’ ಎಂದು ಅವನು (ವ್ಯಂಗ್ಯವಾಗಿ) ಪ್ರಶ್ನಿಸುತ್ತಾನೆ فَإِذَا بَرِقَ ٱلۡبَصَرُ ٧ಕಣ್ಣುಗಳು ಕೋರೈಸುವಾಗ وَخَسَفَ ٱلۡقَمَرُ ٨ಚಂದ್ರಕ್ಕೆ ಗ್ರಹಣವಾದಾಗ وَجُمِعَ ٱلشَّمۡسُ وَٱلۡقَمَرُ ٩ಮತ್ತು ಸೂರ್ಯ ಹಾಗೂ ಚಂದ್ರರನ್ನು ಒಂದು ಗೂಡಿಸಲಾದಾಗ يَقُولُ ٱلۡإِنسَٰنُ يَوۡمَئِذٍ أَيۡنَ ٱلۡمَفَرُّ ١٠ಆ ದಿನ ಮನುಷ್ಯನು ‘‘ಪಲಾಯನಕ್ಕೆ ದಾರಿ ಎಲ್ಲಿದೆ?’’ ಎಂದು ಕೇಳುವನು كـَلَّا لَا وَزَرَ ١١ಖಂಡಿತ ಇಲ್ಲ, ಎಲ್ಲೂ ಆಶ್ರಯವಿಲ್ಲ إِلَىٰ رَبِّكَ يَوۡمَئِذٍ ٱلۡمُسۡتَقَرُّ ١٢ಅಂದು ಆಶ್ರಯವಿರುವುದು ನಿಮ್ಮೊಡೆಯನ ಬಳಿಯಲ್ಲಿ ಮಾತ್ರ يُنَبَّؤُاْ ٱلۡإِنسَٰنُ يَوۡمَئِذِۭ بِمَا قَدَّمَ وَأَخَّرَ ١٣ಅಂದು ಅವನು ಮನುಷ್ಯನಿಗೆ ತಿಳಿಸುವನು, ಆತನು ಮುಂದೆ ಕಳಿಸಿದ್ದ ಮತ್ತು ಹಿಂದೆ ಬಿಟ್ಟು ಬಂದಿದ್ದ ಕರ್ಮಗಳ ಕುರಿತು بَلِ ٱلۡإِنسَٰنُ عَلَىٰ نَفۡسِهِۦ بَصِيرَةٌ ١٤ನಿಜವಾಗಿ ಮನುಷ್ಯನು ತನ್ನ ಕುರಿತು ತಾನೇ ಸಾಕ್ಷಿಯಾಗಿದ್ದಾನೆ وَلَوۡ أَلۡقَىٰ مَعَاذِيرَهُۥ ١٥ಅವನು ಅದೆಷ್ಟೇ ನೆಪಗಳನ್ನೊಡ್ಡಿದರೂ ಸರಿಯೇ لَا تُحَرِّكۡ بِهِۦ لِسَانَكَ لِتَعۡجَلَ بِهِۦٓ ١٦(ದೂತರೇ,) ನೀವು ಇದಕ್ಕಾಗಿ (ದಿವ್ಯವಾಣಿಯನ್ನು ನೆನಪಿಟ್ಟುಕೊಳ್ಳಲಿಕ್ಕಾಗಿ) ಆತುರವಾಗಿ ನಿಮ್ಮ ನಾಲಿಗೆಯನ್ನು ಚಲಿಸಬೇಡಿ إِنَّ عَلَيۡنَا جَمۡعَهُۥ وَقُرۡءَانَهُۥ ١٧ಇದನ್ನು ಸಂಗ್ರಹಿಸುವ ಹಾಗೂ ಓದಿಸುವ ಹೊಣೆ ಖಂಡಿತ ನಮ್ಮ ಮೇಲಿದೆ فَإِذَا قَرَأۡنَٰهُ فَٱتَّبِعۡ قُرۡءَانَهُۥ ١٨ಆದ್ದರಿಂದ ನಾವು ಇದನ್ನು ಓದುವಾಗ, ನೀವು ಇದರ ಪಠಣವನ್ನು ಅನುಸರಿಸಿರಿ ثُمَّ إِنَّ عَلَيۡنَا بَيَانَهُۥ ١٩ಆ ಬಳಿಕ ಇದನ್ನು ವಿವರಿಸುವ ಹೊಣೆಯೂ ನಮ್ಮ ಮೇಲಿದೆ كـَلَّا بَلۡ تُحِبُّونَ ٱلۡعَاجِلَةَ ٢٠ಹಾಗೇನೂ ಅಲ್ಲ. (ಜನರೇ,) ನೀವು ತುರ್ತಾಗಿ ಸಿಗುವುದನ್ನು (ಇಹ ಲೋಕವನ್ನು) ಮಾತ್ರ ಪ್ರೀತಿಸುತ್ತೀರಿ وَتَذَرُونَ ٱلۡأٓخِرَةَ ٢١ಮತ್ತು ಅನಂತರದ್ದನ್ನು (ಪರಲೋಕವನ್ನು) ಬಿಟ್ಟು ಬಿಡುತ್ತೀರಿ وُجُوهٌ يَوۡمَئِذٍ نَّاضِرَةٌ ٢٢ಅಂದು ಹಲವು ಮುಖಗಳು ಅರಳಿರುವವು إِلَىٰ رَبِّهَا نَاظِرَةٌ ٢٣ಅವು ತಮ್ಮ ಒಡೆಯನೆಡೆಗೆ ನೋಡುತ್ತಿರುವವು وَوُجُوهٌ يَوۡمَئِذِۭ بَاسِرَةٌ ٢٤ಮತ್ತೆ ಕೆಲವು ಮುಖಗಳು ಅಂದು ಬಾಡಿರುವವು تَظُنُّ أَن يُفۡعَلَ بِهَا فَاقِرَةٌ ٢٥ತಮ್ಮ ಜೊತೆ ಸೊಂಟ ಮುರಿಯುವಂತಹ ವ್ಯವಹಾರ ನಡೆಯುವುದನ್ನ್ನು ಅವು ನಿರೀಕ್ಷಿಸುತ್ತಿರುವವು كـَلَّآ إِذَا بَلَغَتِ ٱلتَّرَاقِيَ ٢٦ಹಾಗಲ್ಲ. ಜೀವವು ಕೊರಳನ್ನು ತಲುಪಿದಾಗ وَقِيلَ مَنۡۜ رَاقٍ ٢٧ಜನರು, ‘‘ಮಾಂತ್ರಿಕನೆಲ್ಲಿದ್ದಾನೆ?’’ ಎನ್ನುವರು وَظَنَّ أَنَّهُ ٱلۡفِرَاقُ ٢٨ಅದು (ತನ್ನ) ವಿದಾಯದ ಸಮಯ ಎಂದು (ಸಾಯುತ್ತಿರುವವನಿಗೆ) ಅನಿಸುವುದು وَٱلۡتَفَّتِ ٱلسَّاقُ بِٱلسَّاقِ ٢٩(ಸತ್ತವನ) ಮೊಣ ಕಾಲುಗಳನ್ನು ಸೇರಿಸಿ ಕಟ್ಟಲಾಗುವುದು إِلَىٰ رَبِّكَ يَوۡمَئِذٍ ٱلۡمَسَاقُ ٣٠ಅಂದು ನೀನು ನಿನ್ನ ಒಡೆಯನೆಡೆಗೆ ಹೊರಡ ಬೇಕಾಗುವುದು فَلَا صَدَّقَ وَلَا صَلَّىٰ ٣١ಅವನು ಸತ್ಯವನ್ನು ಸಮರ್ಥಿಸಲಿಲ್ಲ ಮತ್ತು ನಮಾಝನ್ನು ಸಲ್ಲಿಸಲಿಲ್ಲ وَلَٰكِن كَذَّبَ وَتَوَلَّىٰ ٣٢ಅವನು (ಸತ್ಯವನ್ನು) ತಿರಸ್ಕರಿಸಿದನು ಹಾಗೂ ಕಡೆಗಣಿಸಿದನು ثُمَّ ذَهَبَ إِلَىٰٓ أَهۡلِهِۦ يَتَمَطَّىٰٓ ٣٣ಮತ್ತು ಹೆಮ್ಮೆಯಿಂದ ಬೀಗುತ್ತಾ ತನ್ನ ಮನೆಯವರ ಬಳಿಗೆ ಹೊರಟನು أَوۡلَىٰ لَكَ فَأَوۡلَىٰ ٣٤ಅಯ್ಯೋ ನಿನ್ನ ದುಸ್ಥಿತಿಯೇ ثُمَّ أَوۡلَىٰ لَكَ فَأَوۡلَىٰٓ ٣٥ಅಯ್ಯೋ ನಿನ್ನ ದುಸ್ಥಿತಿಯೇ أَيَحۡسَبُ ٱلۡإِنسَٰنُ أَن يُتۡرَكَ سُدًى ٣٦ಮನುಷ್ಯನೇನು, ತನ್ನನ್ನು ಹೀಗೆಯೇ ಬಿಟ್ಟು ಬಿಡಲಾಗುವುದೆಂದು ಕೊಂಡಿದ್ದಾನೆಯೇ أَلَمۡ يَكُ نُطۡفَةً مِّن مَّنِيٍّ يُمۡنَىٰ ٣٧ಅವನೇನು, ಕೇವಲ ಹರಿಸಿ ಬಿಡಲಾದ ಒಂದು ಹನಿ ವೀರ್ಯವಾಗಿರಲಿಲ್ಲವೇ ثُمَّ كَانَ عَلَقَةً فَخَلَقَ فَسَوَّىٰ ٣٨ತರುವಾಯ ಅವನು ರಕ್ತ ಪಿಂಡವಾದನು. ಆ ಬಳಿಕ ಅವನು (ಅಲ್ಲಾಹನು) ಅವನನ್ನು ಸೃಷ್ಟಿಸಿದನು ಮತ್ತು ರೂಪಿಸಿದನು فَجَعَلَ مِنۡهُ ٱلزَّوۡجَيۡنِ ٱلذَّكَرَ وَٱلۡأُنثَىٰٓ ٣٩ಮುಂದೆ ಅದರಿಂದಲೇ ಪುರುಷ ಮತ್ತು ಸ್ತ್ರೀ ಎಂಬ ಇಬ್ಬರ ಜೋಡಿಯನ್ನುಂಟು ಮಾಡಿದನು أَلَيۡسَ ذَٰلِكَ بِقَٰدِرٍ عَلَىٰٓ أَن يُحۡـِۧيَ ٱلۡمَوۡتَىٰ ٤٠ಅಂಥವನು (ಇಷ್ಟೆಲ್ಲಾ ಮಾಡಿದವನು) ಸತ್ತವರನ್ನು ಜೀವಂತಗೊಳಿಸಲು ಅಸಮರ್ಥನೇ