ملة الإسلام

السورة 56 · 96 آية · Abdussalam Puthige

سورة الواقعة باللغة الكانادية

السورة بالعربية مع التفسير استمع إلى سورة الواقعة (1,362 قارئاً)
مكيةسورة الواقعة٩٦ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

إِذَا وَقَعَتِ ٱلۡوَاقِعَةُ ١ವೈಭವಪೂರ್ಣ ಹಾಗೂ ಗೌರವಾನ್ವಿತನಾದ ನಿಮ್ಮ ಒಡೆಯನ ಹೆಸರು ಸಮೃದ್ಧಿದಾಯಕವಾಗಿದೆ لَيۡسَ لِوَقۡعَتِهَا كَاذِبَةٌ ٢ಸಂಭವಿಸಬೇಕಾದುದು ಸಂಭವಿಸಿ ಬಿಟ್ಟಾಗ خَافِضَةٌ رَّافِعَةٌ ٣ಅದರ ಸಂಭವ ಸುಳ್ಳಾಗಿರದು إِذَا رُجَّتِ ٱلۡأَرۡضُ رَجًّا ٤ಅದು (ಕೆಲವರನ್ನು) ಕೀಳಾಗಿಸುವುದು ಮತ್ತು (ಕೆಲವರನ್ನು) ಮೇಲಾಗಿಸುವುದು وَبُسَّتِ ٱلۡجِبَالُ بَسًّا ٥ಭೂಮಿಯು ತೀವ್ರ ಕಂಪನದಿಂದ ತತ್ತರಿಸಿ ಬಿಡುವುದು فَكَانَتۡ هَبَآءً مُّنۢبَثًّا ٦ಮತ್ತು ಪರ್ವತಗಳು ನುಚ್ಚು ನೂರಾಗಿ ಬಿಡುವವು وَكُنتُمۡ أَزۡوَٰجًا ثَلَٰثَةً ٧ಮತ್ತು ಅವು ಧೂಳಾಗಿ ಹಾರಾಡ ತೊಡಗುವವು فَأَصۡحَٰبُ ٱلۡمَيۡمَنَةِ مَآ أَصۡحَٰبُ ٱلۡمَيۡمَنَةِ ٨ಮತ್ತು ನೀವು ಮೂರು ವರ್ಗಗಳಾಗುವಿರಿ وَأَصۡحَٰبُ ٱلۡمَشۡـَٔمَةِ مَآ أَصۡحَٰبُ ٱلۡمَشۡـَٔمَةِ ٩ಬಲ ಭಾಗದವರು. ಎಂತಹ (ಭಾಗ್ಯವಂತರು) ಆ ಬಲಭಾಗದವರು وَٱلسَّٰبِقُونَ ٱلسَّٰبِقُونَ ١٠ಮತ್ತು ಎಡ ಭಾಗದವರು. ಎಂತಹ (ಭಾಗ್ಯಹೀನರು) ಆ ಎಡ ಭಾಗದವರು أُوْلَٰٓئِكَ ٱلۡمُقَرَّبُونَ ١١ಮತ್ತು ಮುಂದೆ ಹೋದವರು ಮುಂದೆಯೇ ಇರುವರು فِي جَنَّٰتِ ٱلنَّعِيمِ ١٢ಅವರು (ಅಲ್ಲಾಹನ) ಸಮೀಪ ವರ್ತಿಗಳಾಗಿರುವರು ثُلَّةٌ مِّنَ ٱلۡأَوَّلِينَ ١٣(ಅವರು) ಅನುಗ್ರಹಗಳು ತುಂಬಿದ ಉದ್ಯಾನಗಳಲ್ಲಿರುವರು وَقَلِيلٌ مِّنَ ٱلۡأٓخِرِينَ ١٤(ಅವರಲ್ಲಿ) ಹೆಚ್ಚಿನವರು ಹಿಂದಿನ ಕಾಲದವರಾಗಿರುವರು عَلَىٰ سُرُرٍ مَّوۡضُونَةٍ ١٥ಮತ್ತು ಕಡಿಮೆ ಮಂದಿ ಅನಂತರದವರಾಗಿರುವರು مُّتَّكِـِٔينَ عَلَيۡهَا مُتَقَٰبِلِينَ ١٦ಅವರು ಸ್ವರ್ಣಾಲಂಕೃತ ಪೀಠಗಳಲ್ಲಿರುವರು يَطُوفُ عَلَيۡهِمۡ وِلۡدَٰنٌ مُّخَلَّدُونَ ١٧ಅವುಗಳಲ್ಲಿ ದಿಂಬುಗಳಿಗೊರಗಿ ಎದುರು ಬದುರಾಗಿರುವರು بِأَكۡوَابٍ وَأَبَارِيقَ وَكَأۡسٍ مِّن مَّعِينٍ ١٨ಶಾಶ್ವತ ಬಾಲಕರು ಅವರ ಸುತ್ತ ಚಲಿಸುತ್ತಿರುವರು – لَّا يُصَدَّعُونَ عَنۡهَا وَلَا يُنزِفُونَ ١٩– ಲೋಟೆ ಹಾಗೂ ಹೂಜಿಗಳಲ್ಲಿ ಶುದ್ಧವಾದ ಪಾನೀಯಗಳನ್ನು ಹೊತ್ತು وَفَٰكِهَةٍ مِّمَّا يَتَخَيَّرُونَ ٢٠ಅದರಿಂದ ಅವರಿಗೆ ತಲೆ ನೋವಾಗದು ಮತ್ತು ಬುದ್ಧಿಯೂ ಮಂದವಾಗದು وَلَحۡمِ طَيۡرٍ مِّمَّا يَشۡتَهُونَ ٢١(ಅಲ್ಲಿ) ಅವರ ಆಯ್ಕೆಯ ಹಣ್ಣು ಹಂಪಲುಗಳಿರುವವು وَحُورٌ عِينٌ ٢٢ಅವರು ಅಪೇಕ್ಷಿಸುವ ಪಕ್ಷಿಯ ಮಾಂಸವಿರುವುದು كَأَمۡثَٰلِ ٱللُّؤۡلُوِٕ ٱلۡمَكۡنُونِ ٢٣ಮತ್ತು ವಿಶಾಲ ಕಣ್ಣಿನ ಸ್ವರ್ಗ ಕನ್ಯೆಯರಿರುವರು جَزَآءَۢ بِمَا كَانُواْ يَعۡمَلُونَ ٢٤ಅವರು ಜೋಪಾನವಾಗಿ ಮುಚ್ಚಿಟ್ಟ ಮುತ್ತಿನಂತಿರುವರು لَا يَسۡمَعُونَ فِيهَا لَغۡوًا وَلَا تَأۡثِيمًا ٢٥(ಇದು) ಅವರು ಮಾಡಿದ ಕರ್ಮಗಳ ಪ್ರತಿಫಲ إِلَّا قِيلًا سَلَٰمًا سَلَٰمًا ٢٦ಅಲ್ಲಿ ಅವರು ಯಾವುದೇ ಅನಗತ್ಯ ಮಾತನ್ನಾಗಲಿ ಕೆಟ್ಟ ಸಂಭಾಷಣೆಯನ್ನಾಗಲಿ ಕೇಳಲಾರರು وَأَصۡحَٰبُ ٱلۡيَمِينِ مَآ أَصۡحَٰبُ ٱلۡيَمِينِ ٢٧‘ಸಲಾಮ್, ಸಲಾಮ್’ (ಶಾಂತಿ, ಶಾಂತಿ) ಎಂಬ ಹಾರೈಕೆಯ ಹೊರತು فِي سِدۡرٍ مَّخۡضُودٍ ٢٨ಮತ್ತು ಬಲ ಭಾಗದವರು, (ಎಂತಹ ಭಾಗ್ಯವಂತರು) ಆ ಬಲ ಭಾಗದವರು وَطَلۡحٍ مَّنضُودٍ ٢٩(ಅವರಿರುವಲ್ಲಿ ಲಭ್ಯವಿರುವವು;) ಮುಳ್ಳಿಲ್ಲದ ಬುಗರಿಗಳು وَظِلٍّ مَّمۡدُودٍ ٣٠ಗೊನೆ ಗೊನೆಯಾಗಿರುವ ಬಾಳೆ ಹಣ್ಣುಗಳು وَمَآءٍ مَّسۡكُوبٍ ٣١ವ್ಯಾಪಕ ನೆರಳು وَفَٰكِهَةٍ كَثِيرَةٍ ٣٢ಹರಿಯುವ ನೀರು لَّا مَقۡطُوعَةٍ وَلَا مَمۡنُوعَةٍ ٣٣ಮತ್ತು ಧಾರಾಳ ಹಣ್ಣು ಹಂಪಲುಗಳು وَفُرُشٍ مَّرۡفُوعَةٍ ٣٤ಅವು ಎಂದೂ ಮುಗಿದು ಹೋಗಲಾರವು ಮತ್ತು (ಅವುಗಳ ಬಳಕೆಗೆ) ಯಾವುದೇ ಅಡೆತಡೆಯೂ ಇರಲಾರದು إِنَّآ أَنشَأۡنَٰهُنَّ إِنشَآءً ٣٥(ಅವರು) ಎತ್ತರದ ಆಸನಗಳಲ್ಲಿರುವರು فَجَعَلۡنَٰهُنَّ أَبۡكَارًا ٣٦ನಾವೇ ಅವರನ್ನು (ಸ್ವರ್ಗ ಕನ್ಯೆಯರನ್ನು ) ಸೃಷ್ಟಿಸಿರುವೆವು عُرُبًا أَتۡرَابًا ٣٧ನಾವು ಅವರನ್ನು ಕನ್ಯೆಯರಾಗಿಸಿರುವೆವು لِّأَصۡحَٰبِ ٱلۡيَمِينِ ٣٨ಪ್ರೀತಿಪಾತ್ರರಾಗಿ, ಸಹವಯಸ್ಕರಾಗಿ ಮಾಡಿರುವೆವು – ثُلَّةٌ مِّنَ ٱلۡأَوَّلِينَ ٣٩– ಬಲಭಾಗದವರಿಗಾಗಿ وَثُلَّةٌ مِّنَ ٱلۡأٓخِرِينَ ٤٠(ಅವರಲ್ಲಿ) ಹಿಂದಿನವರೂ ಹೆಚ್ಚಿನ ಸಂಖ್ಯೆಯಲ್ಲಿರುವರು وَأَصۡحَٰبُ ٱلشِّمَالِ مَآ أَصۡحَٰبُ ٱلشِّمَالِ ٤١ಮತ್ತು ಮುಂದಿನವರೂ ಹೆಚ್ಚಿನ ಸಂಖ್ಯೆಯಲ್ಲಿರುವರು فِي سَمُومٍ وَحَمِيمٍ ٤٢ಇನ್ನು ಎಡಭಾಗದವರು. (ಎಂತಹ ಭಾಗ್ಯಹೀನರು) ಆ ಎಡಭಾಗದವರು وَظِلٍّ مِّن يَحۡمُومٍ ٤٣ಅವರು ಉರಿಯುವ ಗಾಳಿ ಹಾಗೂ ಕುದಿಯುವ ನೀರಿನಲ್ಲಿರುವರು لَّا بَارِدٍ وَلَا كَرِيمٍ ٤٤ಕರಾಳ ಹೊಗೆಯ ನೆರಳಲ್ಲಿರುವರು إِنَّهُمۡ كَانُواْ قَبۡلَ ذَٰلِكَ مُتۡرَفِينَ ٤٥ಅದರಲ್ಲಿ ತಂಪೂ ಇರದು, ಹಿತವೂ ಇರದು وَكَانُواْ يُصِرُّونَ عَلَى ٱلۡحِنثِ ٱلۡعَظِيمِ ٤٦ಈ ಹಿಂದೆ ಅವರು ಭಾರೀ ಸುಖ ಭೋಗದಲ್ಲಿದ್ದರು وَكَانُواْ يَقُولُونَ أَئِذَا مِتۡنَا وَكُنَّا تُرَابًا وَعِظَٰمًا أَءِنَّا لَمَبۡعُوثُونَ ٤٧ಮಹಾ ಪಾಪ ಕೃತ್ಯಗಳಲ್ಲಿ ತಲ್ಲೀನರಾಗಿ ಉದ್ಧಟರಾಗಿದ್ದರು أَوَءَابَآؤُنَا ٱلۡأَوَّلُونَ ٤٨ಮತ್ತು ಅವರು ಹೇಳುತ್ತಿದ್ದರು; ನಾವು ಸತ್ತು ಮಣ್ಣಾಗಿ ಹಾಗೂ ಎಲುಬುಗಳಾಗಿ ಮಾರ್ಪಟ್ಟ ಬಳಿಕ, ನಮ್ಮನ್ನೇನು ಮತ್ತೆ ಜೀವಂತ ಗೊಳಿಸಲಾಗುವುದೇ قُلۡ إِنَّ ٱلۡأَوَّلِينَ وَٱلۡأٓخِرِينَ ٤٩ನಮ್ಮ ತಾತ ಮುತ್ತಾತಂದಿರನ್ನೂ (ಜೀವಂತಗೊಳಿಸಲಾಗುವುದೇ) لَمَجۡمُوعُونَ إِلَىٰ مِيقَٰتِ يَوۡمٍ مَّعۡلُومٍ ٥٠ಹೇಳಿರಿ; ಖಂಡಿತವಾಗಿಯೂ ಹಿಂದಿನವರನ್ನೂ ಮುಂದಿನವರನ್ನೂ ثُمَّ إِنَّكُمۡ أَيُّهَا ٱلضَّآلُّونَ ٱلۡمُكَذِّبُونَ ٥١ಒಂದು ನಿರ್ದಿಷ್ಟ ದಿನದ ವೇಳೆ ಒಟ್ಟು ಸೇರಿಸಲಾಗುವುದು لَأٓكِلُونَ مِن شَجَرٍ مِّن زَقُّومٍ ٥٢ಆ ಬಳಿಕ ಓ ದಾರಿಗೆಟ್ಟ ಧಿಕ್ಕಾರಿಗಳೇ, ನೀವು فَمَالِـُٔونَ مِنۡهَا ٱلۡبُطُونَ ٥٣‘ಝಕ್ಕೂಮ್’ ಮರದ ಭಾಗವನ್ನು ತಿನ್ನಬೇಕಾಗುವುದು فَشَٰرِبُونَ عَلَيۡهِ مِنَ ٱلۡحَمِيمِ ٥٤ಅದರಿಂದಲೇ ಹೊಟ್ಟೆ ತುಂಬಿಸಿಕೊಳ್ಳಬೇಕಾಗುವುದು فَشَٰرِبُونَ شُرۡبَ ٱلۡهِيمِ ٥٥ಅದರ ಜೊತೆಗೆ ಕುದಿಯುವ ನೀರನ್ನೂ ಕುಡಿಯಬೇಕಾಗುವುದು هَٰذَا نُزُلُهُمۡ يَوۡمَ ٱلدِّينِ ٥٦ಬಾಯಾರಿದ ಒಂಟೆಯಂತೆ ಅದನ್ನು ನೀವು ಕುಡಿಯುವಿರಿ نَحۡنُ خَلَقۡنَٰكُمۡ فَلَوۡلَا تُصَدِّقُونَ ٥٧ಇದುವೇ, ಪ್ರತಿಫಲದ ದಿನ ಅವರಿಗೆ ಸಿಗಲಿರುವ ಆತಿಥ್ಯ أَفَرَءَيۡتُم مَّا تُمۡنُونَ ٥٨ನಾವು ನಿಮ್ಮನ್ನು ಸೃಷ್ಟಿಸಿರುವೆವು. ಇಷ್ಟಾಗಿಯೂ ನೀವೇಕೆ (ಅದನ್ನು) ಅಂಗೀಕರಿಸುವುದಿಲ್ಲ ءَأَنتُمۡ تَخۡلُقُونَهُۥٓ أَمۡ نَحۡنُ ٱلۡخَٰلِقُونَ ٥٩ನೀವು (ಗರ್ಭದೊಳಕ್ಕೆ) ಹರಿಸಿ ಬಿಡುವ ವಸ್ತುವನ್ನು (ವೀರ್ಯವನ್ನು) ನೀವು ನೋಡಿದಿರಾ نَحۡنُ قَدَّرۡنَا بَيۡنَكُمُ ٱلۡمَوۡتَ وَمَا نَحۡنُ بِمَسۡبُوقِينَ ٦٠ಅದನ್ನು (ಶಿಶುವಾಗಿ) ಸೃಷ್ಟಿಸುವವರು ನೀವೋ, ಅಥವಾ ನಾವು ಅದರ ಸೃಷ್ಟಿಕರ್ತರೋ عَلَىٰٓ أَن نُّبَدِّلَ أَمۡثَٰلَكُمۡ وَنُنشِئَكُمۡ فِي مَا لَا تَعۡلَمُونَ ٦١ನಾವು ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿ ಬಿಟ್ಟಿರುವೆವು. ಮತ್ತು ನಾವು ಖಂಡಿತ ಅಶಕ್ತರಲ್ಲ وَلَقَدۡ عَلِمۡتُمُ ٱلنَّشۡأَةَ ٱلۡأُولَىٰ فَلَوۡلَا تَذَكَّرُونَ ٦٢– ನಿಮ್ಮ ಬದಲಿಗೆ ನಿಮ್ಮಂತಹ ಇತರರನ್ನು ತರುವುದಕ್ಕೆ. ಮತ್ತು ನಿಮಗೆ ಅರಿವೇ ಇಲ್ಲದ ಸ್ಥಳದಲ್ಲಿ ನಿಮ್ಮನ್ನು ಜೀವಂತಗೊಳಿಸುವುದಕ್ಕೆ أَفَرَءَيۡتُم مَّا تَحۡرُثُونَ ٦٣(ನಿಮ್ಮ) ಪ್ರಥಮ ಜನನದ ಕುರಿತು ನಿಮಗೆ ಖಂಡಿತ ತಿಳಿದಿದೆ. ಹೀಗಿರುತ್ತಾ ನೀವೇಕೆ ಚಿಂತನೆ ನಡೆಸುವುದಿಲ್ಲ ءَأَنتُمۡ تَزۡرَعُونَهُۥٓ أَمۡ نَحۡنُ ٱلزَّٰرِعُونَ ٦٤ನೀವು ಬಿತ್ತುವ ವಸ್ತುವನ್ನು ನೀವು ನೋಡಿದಿರಾ لَوۡ نَشَآءُ لَجَعَلۡنَٰهُ حُطَٰمًا فَظَلۡتُمۡ تَفَكَّهُونَ ٦٥ಅದನ್ನು (ಆ ಬೀಜವನ್ನು, ಬೆಳೆಯಾಗಿ) ಬೆಳೆಸುವವರು ನೀವೋ ಅಥವಾ ನಾವು ಅದರ ಬೆಳೆಗಾರರೋ إِنَّا لَمُغۡرَمُونَ ٦٦ನಾವು ಬಯಸಿದರೆ ಅದನ್ನು ಕೇವಲ ಹೊಟ್ಟಾಗಿಸಿ ಬಿಡಬಲ್ಲೆವು ಮತ್ತು ನೀವು ಏನೇನೋ ಹತಾಶ ಮಾತುಗಳನ್ನಾಡುತ್ತಾ ಉಳಿಯ ಬೇಕಾಗುವುದು – بَلۡ نَحۡنُ مَحۡرُومُونَ ٦٧– ನಾವು ಸಂಪೂರ್ಣವಾಗಿ ದಂಡನೆಗೆ ತುತ್ತಾದೆವೆಂದು أَفَرَءَيۡتُمُ ٱلۡمَآءَ ٱلَّذِي تَشۡرَبُونَ ٦٨ಮತ್ತು ನಾವು ಸಂಪೂರ್ಣ ವಂಚಿತರಾಗಿ ಬಿಟ್ಟೆವೆಂದು ءَأَنتُمۡ أَنزَلۡتُمُوهُ مِنَ ٱلۡمُزۡنِ أَمۡ نَحۡنُ ٱلۡمُنزِلُونَ ٦٩ನೀವು ಕುಡಿಯುವ ನೀರನ್ನು ನೀವು ನೋಡಿದಿರಾ لَوۡ نَشَآءُ جَعَلۡنَٰهُ أُجَاجًا فَلَوۡلَا تَشۡكُرُونَ ٧٠ಅದನ್ನು ಮೋಡಗಳ ಮೂಲಕ ಸುರಿಸುವವರು ನೀವೋ ಅಥವಾ ಸುರಿಸುವವರು ನಾವೋ أَفَرَءَيۡتُمُ ٱلنَّارَ ٱلَّتِي تُورُونَ ٧١ನಾವು ಬಯಸಿದರೆ ಅದನ್ನು ಉಪ್ಪು ನೀರಾಗಿಸ ಬಲ್ಲೆವು. ಇಷ್ಟಾಗಿಯೂ ನೀವೇಕೆ ಕೃತಜ್ಞರಾಗುವುದಿಲ್ಲ ءَأَنتُمۡ أَنشَأۡتُمۡ شَجَرَتَهَآ أَمۡ نَحۡنُ ٱلۡمُنشِـُٔونَ ٧٢ನೀವು ಉರಿಸುವ ಬೆಂಕಿಯನ್ನು ನೀವು ನೋಡಿದಿರಾ نَحۡنُ جَعَلۡنَٰهَا تَذۡكِرَةً وَمَتَٰعًا لِّلۡمُقۡوِينَ ٧٣ಅದರ ಮರವನ್ನು ಹುಟ್ಟಿಸುವವರು ನೀವೋ ಅಥವಾ ಹುಟ್ಟಿಸುವವರು ನಾವೋ فَسَبِّحۡ بِٱسۡمِ رَبِّكَ ٱلۡعَظِيمِ ٧٤ಅದನ್ನು ನಾವು, (ನರಕವನ್ನು) ನೆನಪಿಸುವ ಸಾಧನವಾಗಿಸಿರುವೆವು ಮತ್ತು ಪ್ರಯಾಣಿಕರ ಪಾಲಿಗೆ ಲಾಭದಾಯಕವಾಗಿಸಿರುವೆವು ۞ فَلَآ أُقۡسِمُ بِمَوَٰقِعِ ٱلنُّجُومِ ٧٥ನೀವೀಗ ನಿಮ್ಮ ಮಹಾನ್ ಒಡೆಯನ ಹೆಸರಿನ ಪಾವಿತ್ರವನ್ನು ಜಪಿಸಿರಿ وَإِنَّهُۥ لَقَسَمٌ لَّوۡ تَعۡلَمُونَ عَظِيمٌ ٧٦ನಾನಿದೋ, ನಕ್ಷತ್ರಗಳು ಪತನವಾಗುವ ನೆಲೆಯ ಆಣೆ ಹಾಕುತ್ತೇನೆ إِنَّهُۥ لَقُرۡءَانٌ كَرِيمٌ ٧٧ನೀವು ಅರ್ಥ ಮಾಡಿಕೊಳ್ಳುವುದಾದರೆ ಇದು ನಿಜಕ್ಕೂ ಒಂದು ಮಹಾನ್ ಪ್ರಮಾಣವಾಗಿದೆ فِي كِتَٰبٍ مَّكۡنُونٍ ٧٨ಈ ಕುರ್‌ಆನ್, ಖಂಡಿತ ಗೌರವಾನ್ವಿತವಾಗಿದೆ لَّا يَمَسُّهُۥٓ إِلَّا ٱلۡمُطَهَّرُونَ ٧٩ಇದೊಂದು ಸುರಕ್ಷಿತ ಗ್ರಂಥದಲ್ಲಿದೆ تَنزِيلٌ مِّن رَّبِّ ٱلۡعَٰلَمِينَ ٨٠ಪಾವನರಲ್ಲದವರು ಅದನ್ನು ಮುಟ್ಟುವುದಿಲ್ಲ أَفَبِهَٰذَا ٱلۡحَدِيثِ أَنتُم مُّدۡهِنُونَ ٨١ಸಕಲ ಲೋಕಗಳ ಒಡೆಯನು ಇದನ್ನು ಇಳಿಸಿ ಕೊಟ್ಟಿರುವನು وَتَجۡعَلُونَ رِزۡقَكُمۡ أَنَّكُمۡ تُكَذِّبُونَ ٨٢ನೀವೇನು ಈ ಸಂದೇಶವನ್ನು ಕಡೆಗಣಿಸುತ್ತಿರುವಿರಾ فَلَوۡلَآ إِذَا بَلَغَتِ ٱلۡحُلۡقُومَ ٨٣ಮತ್ತು ನಿಮಗೆ ನೀಡಲಾಗಿರುವ ಕೊಡುಗೆಯನ್ನು ಅಲ್ಲಗಳೆಯುತ್ತಿರುವಿರಾ وَأَنتُمۡ حِينَئِذٍ تَنظُرُونَ ٨٤ಹಾಗಾದರೆ, (ನಿಮ್ಮ ಆಪ್ತನ) ಜೀವವು ಕೊರಳಿಗೆ ಮುಟ್ಟಿದಾಗ وَنَحۡنُ أَقۡرَبُ إِلَيۡهِ مِنكُمۡ وَلَٰكِن لَّا تُبۡصِرُونَ ٨٥ಆಗ ನೀವು ಕೇವಲ ನೋಡುತ್ತಿರುತ್ತೀರಿ فَلَوۡلَآ إِن كُنتُمۡ غَيۡرَ مَدِينِينَ ٨٦ಮತ್ತು ಆಗ ನಾವು ಆತನಿಗೆ, ನಿಮಗಿಂತ ಸಮೀಪವಿರುತ್ತೇವೆ – ಆದರೆ ನಿಮಗೆ ಕಾಣಿಸುವುದಿಲ್ಲ تَرۡجِعُونَهَآ إِن كُنتُمۡ صَٰدِقِينَ ٨٧ನೀವು ಸ್ವತಂತ್ರರಾಗಿದ್ದರೆ, ಹೀಗೇಕೆ فَأَمَّآ إِن كَانَ مِنَ ٱلۡمُقَرَّبِينَ ٨٨ನೀವು ಸತ್ಯವಂತರಾಗಿದ್ದರೆ, ಅದನ್ನು (ಆತನ ಆತ್ಮವನ್ನು) ಮರಳಿಸಿರಿ – فَرَوۡحٌ وَرَيۡحَانٌ وَجَنَّتُ نَعِيمٍ ٨٩ಅವನು (ಅಲ್ಲಾಹನ) ಆಪ್ತನಾಗಿದ್ದರೆ – وَأَمَّآ إِن كَانَ مِنۡ أَصۡحَٰبِ ٱلۡيَمِينِ ٩٠(ಅವನಿಗಾಗಿ) ಕಂಪು ತುಂಬಿದ ಪುಷ್ಪಗಳು ಹಾಗೂ ಅನುಗ್ರಹ ತುಂಬಿದ ಸ್ವರ್ಗೋದ್ಯಾನಗಳಿವೆ فَسَلَٰمٌ لَّكَ مِنۡ أَصۡحَٰبِ ٱلۡيَمِينِ ٩١ಇನ್ನು ಅವನು, ಬಲಭಾಗದವನಾಗಿದ್ದರೆ, – وَأَمَّآ إِن كَانَ مِنَ ٱلۡمُكَذِّبِينَ ٱلضَّآلِّينَ ٩٢’’ಬಲಭಾಗದವರ ಕಡೆಯಿಂದ ನಿನಗೆ ಸಲಾಮ್ (ಶಾಂತಿ)’’ (ಎಂದು ಹಾರೈಸಲಾಗುವುದು) فَنُزُلٌ مِّنۡ حَمِيمٍ ٩٣ಅವನು ಸತ್ಯವನ್ನು ತಿರಸ್ಕರಿಸಿ, ದಾರಿಗೆಟ್ಟವನಾಗಿದ್ದರೆ – وَتَصۡلِيَةُ جَحِيمٍ ٩٤ಅವನ ಆತಿಥ್ಯಕ್ಕೆ ಕುದಿಯುವ ನೀರು ಇರುವುದು إِنَّ هَٰذَا لَهُوَ حَقُّ ٱلۡيَقِينِ ٩٥ಮತ್ತು ಅವನನ್ನು ನರಕಾಗ್ನಿಗೆ ಎಸೆಯಲಾಗುವುದು فَسَبِّحۡ بِٱسۡمِ رَبِّكَ ٱلۡعَظِيمِ ٩٦ಇದು ಖಚಿತ ಸಂಭವವಾಗಿದೆ

الترجمة: Abdussalam Puthige.