ملة الإسلام

السورة 78 · 40 آية · Abdussalam Puthige

سورة النبأ باللغة الكانادية

السورة بالعربية مع التفسير استمع إلى سورة النبأ (1,427 قارئاً)
مكيةسورة النبأ٤٠ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

عَمَّ يَتَسَآءَلُونَ ١ಆ ಮಹಾ ವಾರ್ತೆಯ ಕುರಿತೇ عَنِ ٱلنَّبَإِ ٱلۡعَظِيمِ ٢ಆ ವಿಷಯದಲ್ಲಿ ಅವರ ನಿಲುವುಗಳು ತೀರಾ ಭಿನ್ನವಾಗಿವೆ ٱلَّذِي هُمۡ فِيهِ مُخۡتَلِفُونَ ٣ಹಾಗಲ್ಲ, ಅವರಿಗೆ ಬೇಗನೆ ತಿಳಿಯಲಿದೆ كـَلَّا سَيَعۡلَمُونَ ٤ಮತ್ತೆ, ಹಾಗಲ್ಲ, ಅವರಿಗೆ ಬೇಗನೆ ತಿಳಿಯಲಿದೆ ثُمَّ كـَلَّا سَيَعۡلَمُونَ ٥ಭೂಮಿಯನ್ನು ನಾವು ಹಾಸಿಗೆಯಾಗಿಸಿಲ್ಲವೇ أَلَمۡ نَجۡعَلِ ٱلۡأَرۡضَ مِهَٰدًا ٦ಮತ್ತು ಪರ್ವತಗಳನ್ನು ಮೊಳೆಗಳಾಗಿಸಿಲ್ಲವೇ وَٱلۡجِبَالَ أَوۡتَادًا ٧ಮತ್ತು ನಾವು ನಿಮ್ಮನ್ನು ಜೋಡಿಗಳಾಗಿ ಸೃಷ್ಟಿಸಿರುವೆವು وَخَلَقۡنَٰكُمۡ أَزۡوَٰجًا ٨ಮತ್ತು ನಾವು ನಿಮ್ಮ ನಿದ್ರೆಯನ್ನು (ನಿಮ್ಮ ಪಾಲಿಗೆ) ವಿಶ್ರಾಂತಿಯಾಗಿಸಿರುವೆವು وَجَعَلۡنَا نَوۡمَكُمۡ سُبَاتًا ٩ಮತ್ತು ನಾವು ರಾತ್ರಿಯನ್ನು ಮರೆಯಾಗಿಸಿರುವೆವು وَجَعَلۡنَا ٱلَّيۡلَ لِبَاسًا ١٠ಮತ್ತು ನಾವು ಹಗಲನ್ನು ಸಂಪಾದನೆಯ ಸಮಯವಾಗಿಸಿರುವೆವು وَجَعَلۡنَا ٱلنَّهَارَ مَعَاشًا ١١ಮತ್ತು ನಿಮ್ಮ ಮೇಲೆ ಬಲಿಷ್ಠವಾದ ಏಳು ವಸ್ತು (ಆಕಾಶ)ಗಳನ್ನು ನಿರ್ಮಿಸಿರುವೆವು وَبَنَيۡنَا فَوۡقَكُمۡ سَبۡعًا شِدَادًا ١٢ಮತ್ತು ನಾವು ಸೂರ್ಯನನ್ನು ಒಂದು ಉಜ್ವಲ ಜ್ಯೋತಿಯಾಗಿಸಿರುವೆವು وَجَعَلۡنَا سِرَاجًا وَهَّاجًا ١٣ಮತ್ತು ನಾವು ಮೋಡಗಳಿಂದ ಧಾರಾಕಾರ ನೀರನ್ನು ಸುರಿಸಿರುವೆವು وَأَنزَلۡنَا مِنَ ٱلۡمُعۡصِرَٰتِ مَآءً ثَجَّاجًا ١٤ಆ ಮೂಲಕ ವಿವಿಧ ಬೆಳೆ ಹಾಗೂ ತರಕಾರಿಗಳನ್ನು ಬೆಳೆಸಲಿಕ್ಕಾಗಿ لِّنُخۡرِجَ بِهِۦ حَبًّا وَنَبَاتًا ١٥ಮತ್ತು ದಟ್ಟವಾದ ತೋಟಗಳನ್ನು ಬೆಳೆಸಲಿಕ್ಕಾಗಿ وَجَنَّٰتٍ أَلۡفَافًا ١٦ತೀರ್ಪಿನ ದಿನವು ಈಗಾಗಲೇ ನಿಶ್ಚಿತವಾಗಿದೆ إِنَّ يَوۡمَ ٱلۡفَصۡلِ كَانَ مِيقَٰتًا ١٧ಕಹಳೆಯನ್ನು ಊದುವ ದಿನ ನೀವು ದಂಡು ದಂಡುಗಳಾಗಿ ಬರುವಿರಿ يَوۡمَ يُنفَخُ فِي ٱلصُّورِ فَتَأۡتُونَ أَفۡوَاجًا ١٨ಆಕಾಶವನ್ನು ತೆರೆದು ಬಿಡಲಾಗುವುದು ಮತ್ತು ಅದರಲ್ಲಿ (ಎಲ್ಲೆಲ್ಲೂ) ಬಾಗಿಲುಗಳೇ ಇರುವವು وَفُتِحَتِ ٱلسَّمَآءُ فَكَانَتۡ أَبۡوَٰبًا ١٩ಮತ್ತು ಪರ್ವತಗಳನ್ನು ನಡೆಸಲಾಗುವುದು, ಅವು ಮರಳಿನಂತಾಗಿ ಬಿಡುವವು وَسُيِّرَتِ ٱلۡجِبَالُ فَكَانَتۡ سَرَابًا ٢٠ಖಂಡಿತವಾಗಿಯೂ ನರಕವು ಹೊಂಚು ಹಾಕುತ್ತಿದೆ إِنَّ جَهَنَّمَ كَانَتۡ مِرۡصَادًا ٢١ಅದುವೇ ವಿದ್ರೋಹಿಗಳ ನೆಲೆಯಾಗುವುದು لِّلطَّٰغِينَ مَـَٔابًا ٢٢ಯುಗ ಯುಗಾಂತರ ಕಾಲ ಅವರು ಅದರಲ್ಲಿ ಬಿದ್ದು ಕೊಂಡಿರುವರು لَّٰبِثِينَ فِيهَآ أَحۡقَابًا ٢٣ಅಲ್ಲಿ ಅವರು ಯಾವುದೇ ತಂಪು ವಸ್ತುವಿನ ಅಥವಾ ಯಾವುದೇ ಪಾನೀಯದ ರುಚಿ ಕಾಣಲಾರರು لَّا يَذُوقُونَ فِيهَا بَرۡدًا وَلَا شَرَابًا ٢٤ಅಲ್ಲಿ ಅವರಿಗೆ ಸಿಗುವುದು, ಕುದಿಯುವ ನೀರು ಮತ್ತು ಹರಿಯುವ ಕೀವು ಮಾತ್ರ إِلَّا حَمِيمًا وَغَسَّاقًا ٢٥ಇದು ಸೂಕ್ತ ಪ್ರತಿಫಲವಾಗಿದೆ جَزَآءً وِفَاقًا ٢٦ಅವರು (ಪರಲೋಕದ) ವಿಚಾರಣೆಯನ್ನು ನಿರೀಕ್ಷಿಸಿಯೇ ಇರಲಿಲ್ಲ إِنَّهُمۡ كَانُواْ لَا يَرۡجُونَ حِسَابًا ٢٧ಅವರು ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸುತ್ತಿದ್ದರು وَكَذَّبُواْ بِـَٔايَٰتِنَا كِذَّابًا ٢٨ನಾವು ಎಲ್ಲವನ್ನೂ ಬರೆದು ಭದ್ರವಾಗಿಟ್ಟಿರುವೆವು وَكُلَّ شَيۡءٍ أَحۡصَيۡنَٰهُ كِتَٰبًا ٢٩ಇದೀಗ ಸವಿಯಿರಿ. ಇನ್ನು ನಿಮ್ಮ ಪಾಲಿಗೆ ಶಿಕ್ಷೆಯ ಹೊರತು ಬೇರೇನೂ ಹೆಚ್ಚದು فَذُوقُواْ فَلَن نَّزِيدَكُمۡ إِلَّا عَذَابًا ٣٠ಧರ್ಮ ನಿಷ್ಠರಿಗೆ ಖಂಡಿತ ವಿಜಯ ಸಿಗಲಿದೆ إِنَّ لِلۡمُتَّقِينَ مَفَازًا ٣١ತೋಟಗಳು ಮತ್ತು ದ್ರಾಕ್ಷಿಗಳು حَدَآئِقَ وَأَعۡنَٰبًا ٣٢ಮತ್ತು ಸಹ ವಯಸ್ಕ ಯುವತಿಯರು وَكَوَاعِبَ أَتۡرَابًا ٣٣ತುಂಬಿ ತುಳುಕುವ ಪಾನ ಪಾತ್ರೆಗಳು (ಅವರಿಗಾಗಿ ಕಾದಿವೆ) وَكَأۡسًا دِهَاقًا ٣٤ಅಲ್ಲಿ ಅವರು ಯಾವುದೇ ಅಸಭ್ಯ ಮಾತನ್ನಾಗಲೀ ಸುಳ್ಳನ್ನಾಗಲೀ ಕೇಳಲಾರರು لَّا يَسۡمَعُونَ فِيهَا لَغۡوًا وَلَا كِذَّٰبًا ٣٥ಇದು ಸತ್ಫಲವಾಗಿದೆ, ನಿಮ್ಮ ಒಡೆಯನ ಕಡೆಯಿಂದ. (ಅಲ್ಲದೆ ನಿಮಗಾಗಿ) ಧಾರಾಳ ಉಡುಗೊರೆಗಳಿವೆ جَزَآءً مِّن رَّبِّكَ عَطَآءً حِسَابًا ٣٦ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು, ಅವನು ಪರಮ ದಯಾಮಯನು. ಅವನೊಡನೆ ಮಾತನಾಡುವ ಅಧಿಕಾರ ಯಾರಿಗೂ ಇಲ್ಲ رَّبِّ ٱلسَّمَٰوَٰتِ وَٱلۡأَرۡضِ وَمَا بَيۡنَهُمَا ٱلرَّحۡمَٰنِۖ لَا يَمۡلِكُونَ مِنۡهُ خِطَابًا ٣٧ರೂಹ್ (ಜಿಬ್‌ರೀಲ್) ಮತ್ತು ಇತರ ಮಲಕ್‌ಗಳು ಸಾಲಾಗಿ ನಿಲ್ಲುವ ಆ ದಿನ, ಆ ಪರಮ ದಯಾಮಯನ ಅಪ್ಪಣೆ ಪಡೆದವರು ಹಾಗೂ ಸರಿಯಾದುದನ್ನು ಹೇಳುವವರ ಹೊರತು ಯಾರಿಗೂ ಮಾತನಾಡಲು ಸಾಧ್ಯವಾಗದು يَوۡمَ يَقُومُ ٱلرُّوحُ وَٱلۡمَلَٰٓئِكَةُ صَفًّاۖ لَّا يَتَكَلَّمُونَ إِلَّا مَنۡ أَذِنَ لَهُ ٱلرَّحۡمَٰنُ وَقَالَ صَوَابًا ٣٨ಆ ದಿನವು ನಿಜಕ್ಕೂ ಬರಲಿದೆ. ಇಷ್ಟ ಉಳ್ಳವನು ತನ್ನ ಒಡೆಯನ ಬಳಿ ಆಶ್ರಯವನ್ನು ಪಡೆದು ಕೊಳ್ಳಲಿ ذَٰلِكَ ٱلۡيَوۡمُ ٱلۡحَقُّۖ فَمَن شَآءَ ٱتَّخَذَ إِلَىٰ رَبِّهِۦ مَـَٔابًا ٣٩ನಾನಂತೂ ನಿಮ್ಮನ್ನು, ಶೀಘ್ರವೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಸುತ್ತಿರುವೆನು. ಅಂದು ಪ್ರತಿಯೊಬ್ಬನೂ ತನ್ನ ಕೈಗಳು ಮುಂದೆ ಕಳಿಸಿರುವುದನ್ನು (ಕರ್ಮವನ್ನು) ಕಾಣುವನು ಮತ್ತು ಧಿಕ್ಕಾರಿಯು, ‘‘ಅಯ್ಯೋ, ನಾನು ಮಣ್ಣಾಗಿದ್ದರೆ ಚೆನ್ನಾಗಿತ್ತು’’ ಎನ್ನುವನು إِنَّآ أَنذَرۡنَٰكُمۡ عَذَابًا قَرِيبًا يَوۡمَ يَنظُرُ ٱلۡمَرۡءُ مَا قَدَّمَتۡ يَدَاهُ وَيَقُولُ ٱلۡكَافِرُ يَٰلَيۡتَنِي كُنتُ تُرَٰبَۢا ٤٠ಮುಳುಗಿ ಏಳುವವರ ಆಣೆ

الترجمة: Abdussalam Puthige.