ملة الإسلام

السورة 36 · 83 آية · Abdussalam Puthige

سورة يس باللغة الكانادية

السورة بالعربية مع التفسير استمع إلى سورة يس (1,367 قارئاً)
مكيةسورة يس٨٣ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

يسٓ ١ಯುಕ್ತಿಪೂರ್ಣವಾಗಿರುವ ಕುರ್‌ಆನಿನಾಣೆ وَٱلۡقُرۡءَانِ ٱلۡحَكِيمِ ٢(ದೂತರೇ,) ನೀವು ಖಂಡಿತ ಒಬ್ಬ ದೇವದೂತರಾಗಿರುವಿರಿ إِنَّكَ لَمِنَ ٱلۡمُرۡسَلِينَ ٣ನೀವು ನೇರ ಮಾರ್ಗದಲ್ಲಿರುವಿರಿ عَلَىٰ صِرَٰطٍ مُّسۡتَقِيمٍ ٤ಪ್ರಬಲನೂ ಕರುಣಾಮಯಿಯೂ ಆಗಿರುವವನು ಇದನ್ನು ಇಳಿಸಿಕೊಟ್ಟಿರುವನು – تَنزِيلَ ٱلۡعَزِيزِ ٱلرَّحِيمِ ٥– ಯಾರ ಗತ ಪೀಳಿಗೆಯನ್ನು ಎಚ್ಚರಿಸಲಾಗಿರಲಿಲ್ಲವೋ ಅವರನ್ನು ಎಚ್ಚರಿಸಲಿಕ್ಕಾಗಿ. ಅವರು ಅರಿವಿಲ್ಲದವರು لِتُنذِرَ قَوۡمًا مَّآ أُنذِرَ ءَابَآؤُهُمۡ فَهُمۡ غَٰفِلُونَ ٦ಅವರಲ್ಲಿ ಹೆಚ್ಚಿನವರ ಕುರಿತು (ಅಲ್ಲಾಹನ) ಮಾತು ಈಗಾಗಲೇ ಸತ್ಯವಾಗಿದೆ. ಅವರಿನ್ನು ವಿಶ್ವಾಸಿಗಳಾಗುವುದಿಲ್ಲ لَقَدۡ حَقَّ ٱلۡقَوۡلُ عَلَىٰٓ أَكۡثَرِهِمۡ فَهُمۡ لَا يُؤۡمِنُونَ ٧ನಾವು ಅವರ ಕೊರಳುಗಳಿಗೆ, ಗಲ್ಲದವರೆಗೂ ಬಿಗಿದಿಡುವ ನೊಗಗಳನ್ನು ಹಾಕಿರುವೆವು. ಇದರಿಂದಾಗಿ ಅವರ ತಲೆಗಳು ಸೆಟೆದುಕೊಂಡಿವೆ إِنَّا جَعَلۡنَا فِيٓ أَعۡنَٰقِهِمۡ أَغۡلَٰلًا فَهِيَ إِلَى ٱلۡأَذۡقَانِ فَهُم مُّقۡمَحُونَ ٨ನಾವು ಅವರ ಮುಂದೆ ಒಂದು ಗೋಡೆಯನ್ನು ಹಾಗೂ ಅವರ ಹಿಂದೆ ಒಂದು ಗೋಡೆಯನ್ನು ನಿರ್ಮಿಸಿರುವೆವು ಮತ್ತು ಅವರನ್ನು ಮುಚ್ಚಿ ಬಿಟ್ಟಿರುವೆವು. ಆದ್ದರಿಂದ ಅವರಿಗೆ ಏನೂ ಕಾಣಿಸುತ್ತಿಲ್ಲ وَجَعَلۡنَا مِنۢ بَيۡنِ أَيۡدِيهِمۡ سَدًّا وَمِنۡ خَلۡفِهِمۡ سَدًّا فَأَغۡشَيۡنَٰهُمۡ فَهُمۡ لَا يُبۡصِرُونَ ٩ನೀವು ಅವರನ್ನು ಎಚ್ಚರಿಸಿದರೂ ಒಂದೇ, ಎಚ್ಚರಿಸದೆ ಬಿಟ್ಟರೂ ಒಂದೇ. ಅವರಂತು ನಂಬುವವರಲ್ಲ وَسَوَآءٌ عَلَيۡهِمۡ ءَأَنذَرۡتَهُمۡ أَمۡ لَمۡ تُنذِرۡهُمۡ لَا يُؤۡمِنُونَ ١٠ಉಪದೇಶವನ್ನು ಅನುಸರಿಸುವ ಹಾಗೂ ಕಣ್ಣಾರೆ ಕಾಣದೆಯೇ ಆ ಅಪಾರ ದಯಾಳುವಿಗೆ (ಅಲ್ಲಾಹನಿಗೆ) ಅಂಜುತ್ತಿರುವ ವ್ಯಕ್ತಿಯನ್ನು ಮಾತ್ರ ನೀವು ಎಚ್ಚರಿಸಬಲ್ಲಿರಿ. ಅಂಥವನಿಗೆ ನೀವು ಕ್ಷಮೆ ಹಾಗೂ ಉದಾರ ಪ್ರತಿಫಲದ ಶುಭವಾರ್ತೆ ನೀಡಿರಿ إِنَّمَا تُنذِرُ مَنِ ٱتَّبَعَ ٱلذِّكۡرَ وَخَشِيَ ٱلرَّحۡمَٰنَ بِٱلۡغَيۡبِۖ فَبَشِّرۡهُ بِمَغۡفِرَةٍ وَأَجۡرٍ كَرِيمٍ ١١ಖಂಡಿತವಾಗಿಯೂ ನಾವೇ ಸತ್ತವರನ್ನು ಜೀವಂತಗೊಳಿಸುತ್ತೇವೆ ಮತ್ತು ಅವರು ಮುಂದಕ್ಕೆ ಕಳಿಸಿರುವ ಹಾಗೂ ತಮ್ಮ ಹಿಂದೆ ಬಿಟ್ಟು ಹೋಗಿರುವ ಎಲ್ಲವನ್ನೂ ನಾವು ಒಂದು ಸ್ಪಷ್ಟ ಗ್ರಂಥದಲ್ಲಿ ಎಣಿಸಿಟ್ಟಿರುವೆವು إِنَّا نَحۡنُ نُحۡيِ ٱلۡمَوۡتَىٰ وَنَكۡتُبُ مَا قَدَّمُواْ وَءَاثَٰرَهُمۡۚ وَكُلَّ شَيۡءٍ أَحۡصَيۡنَٰهُ فِيٓ إِمَامٍ مُّبِينٍ ١٢ನೀವು ಅವರಿಗೆ ಆ ನಾಡಿನವರ ಸಮಾಚಾರವನ್ನು ತಿಳಿಸಿರಿ; ಅವರ ಬಳಿಗೆ ದೂತರು ಬಂದಿದ್ದರು وَٱضۡرِبۡ لَهُم مَّثَلًا أَصۡحَٰبَ ٱلۡقَرۡيَةِ إِذۡ جَآءَهَا ٱلۡمُرۡسَلُونَ ١٣ನಾವು ಅವರ ಬಳಿಗೆ ಇಬ್ಬರು ದೂತರನ್ನು ಕಳಿಸಿದಾಗ ಅವರಿಬ್ಬರನ್ನೂ ಅವರು ತಿರಸ್ಕರಿಸಿದರು. ಕೊನೆಗೆ ನಾವು ಮೂರನೆಯ ದೂತನ ಮೂಲಕ ಅವರಿಗೆ ಬಲ ಒದಗಿಸಿದೆವು. ‘‘ನಮ್ಮನ್ನು ಖಚಿತವಾಗಿ ನಿಮ್ಮೆಡೆಗೇ ರವಾನಿಸಲಾಗಿದೆ’’ ಎಂದು ಅವರು ಹೇಳಿದರು إِذۡ أَرۡسَلۡنَآ إِلَيۡهِمُ ٱثۡنَيۡنِ فَكَذَّبُوهُمَا فَعَزَّزۡنَا بِثَالِثٍ فَقَالُوٓاْ إِنَّآ إِلَيۡكُم مُّرۡسَلُونَ ١٤ಆಗ ಅವರು (ನಾಡಿನವರು) ಹೇಳಿದರು; ನೀವು ನಮ್ಮಂತಹ ಮಾನವರು ಮಾತ್ರ. ಆ ಪರಮ ದಯಾಮಯನು (ಅಲ್ಲಾಹನು) ಏನನ್ನೂ ಇಳಿಸಿಕೊಟ್ಟಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿರುವಿರಿ قَالُواْ مَآ أَنتُمۡ إِلَّا بَشَرٌ مِّثۡلُنَا وَمَآ أَنزَلَ ٱلرَّحۡمَٰنُ مِن شَيۡءٍ إِنۡ أَنتُمۡ إِلَّا تَكۡذِبُونَ ١٥ಅವರು (ದೂತರು) ಹೇಳಿದರು; ನಾವು ನಿಮ್ಮೆಡೆಗೆ ಕಳಿಸಲ್ಪಟ್ಟವರು ಎಂಬುದನ್ನು ನಮ್ಮೊಡೆಯನು ಖಚಿತವಾಗಿ ಬಲ್ಲನು قَالُواْ رَبُّنَا يَعۡلَمُ إِنَّآ إِلَيۡكُمۡ لَمُرۡسَلُونَ ١٦ನಮ್ಮ ಮೇಲಿರುವುದು ಸ್ಪಷ್ಟವಾಗಿ ಸಂದೇಶ ತಲುಪಿಸಿ ಬಿಡುವ ಹೊಣೆ ಮಾತ್ರ وَمَا عَلَيۡنَآ إِلَّا ٱلۡبَلَٰغُ ٱلۡمُبِينُ ١٧ಅವರು (ನಾಡಿನವರು) ಹೇಳಿದರು; ನಾವು ನಿಮ್ಮನ್ನು ಕೇವಲ ಅಪಶಕುನಗಳಾಗಿ ಕಂಡಿರುವೆವು. ನೀವು ದೂರ ನಿಲ್ಲದಿದ್ದರೆ (ಸತ್ಯಪ್ರಚಾರವನ್ನು ನಿಲ್ಲಿಸದಿದ್ದರೆ) ನಾವು ನಿಮ್ಮನ್ನು ಕಲ್ಲೆಸೆದು ಕೊಲ್ಲುವೆವು ಮತ್ತು ಖಂಡಿತವಾಗಿಯೂ ನಮ್ಮ ಕಡೆಯಿಂದ ನಿಮಗೆ ಕಠಿಣ ಶಿಕ್ಷೆ ಸಿಗುವುದು قَالُوٓاْ إِنَّا تَطَيَّرۡنَا بِكُمۡۖ لَئِن لَّمۡ تَنتَهُواْ لَنَرۡجُمَنَّكُمۡ وَلَيَمَسَّنَّكُم مِّنَّا عَذَابٌ أَلِيمٌ ١٨ಆಗ ಅವರು (ದೂತರು) ಹೇಳಿದರು; ನಿಮ್ಮ ಅಪಶಕುನವೆಲ್ಲಾ ನಿಮ್ಮ ಜೊತೆಗೇ ಇದೆ. ನಿಮಗೆ ಬೋಧನೆ ತಲುಪಿದೆಯಲ್ಲವೇ? ನಿಜವಾಗಿ ನೀವು ಎಲ್ಲೆ ಮೀರುವವರಾಗಿದ್ದೀರಿ قَالُواْ طَٰٓئِرُكُم مَّعَكُمۡ أَئِن ذُكِّرۡتُمۚ بَلۡ أَنتُمۡ قَوۡمٌ مُّسۡرِفُونَ ١٩ನಗರದ ಮೂಲೆಯಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದನು; ನನ್ನ ಜನಾಂಗದವರೇ, ದೇವದೂತರನ್ನು ಅನುಸರಿಸಿರಿ وَجَآءَ مِنۡ أَقۡصَا ٱلۡمَدِينَةِ رَجُلٌ يَسۡعَىٰ قَالَ يَٰقَوۡمِ ٱتَّبِعُواْ ٱلۡمُرۡسَلِينَ ٢٠ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸದ ಹಾಗೂ ಮಾರ್ಗದರ್ಶನ ಪಡೆದಿರುವ, ಅವರನ್ನು ಅನುಸರಿಸಿರಿ ٱتَّبِعُواْ مَن لَّا يَسۡـَٔلُكُمۡ أَجۡرًا وَهُم مُّهۡتَدُونَ ٢١ನನ್ನನ್ನು ರೂಪಿಸಿದಾತನನ್ನು ನಾನೇಕೆ ಪೂಜಿಸಬಾರದು? ಕೊನೆಗಂತು, ನಿಮ್ಮೆಲ್ಲರನ್ನೂ ಅವನ ಕಡೆಗೇ ಮರಳಿಸಲಾಗುವುದು وَمَالِيَ لَآ أَعۡبُدُ ٱلَّذِي فَطَرَنِي وَإِلَيۡهِ تُرۡجَعُونَ ٢٢ನಾನೇನು, ಅವನ ಹೊರತು ಇತರ ಯಾರನ್ನಾದರೂ ದೇವರಾಗಿಸಿಕೊಳ್ಳಬೇಕೆ? ನಿಜವಾಗಿ, ಆ ಪರಮ ದಯಾಳು ನನಗೇನಾದರೂ ಹಾನಿಯನ್ನುಂಟು ಮಾಡ ಬಯಸಿದರೆ, ಅವರ (ಅನ್ಯರ) ಶಿಫಾರಸ್ಸು ನನ್ನ ಯಾವ ಕೆಲಸಕ್ಕೂ ಬಾರದು ಮತ್ತು ನನ್ನನ್ನು ರಕ್ಷಿಸಲು ಅವರಿಗೆ ಸಾಧ್ಯವಾಗದು ءَأَتَّخِذُ مِن دُونِهِۦٓ ءَالِهَةً إِن يُرِدۡنِ ٱلرَّحۡمَٰنُ بِضُرٍّ لَّا تُغۡنِ عَنِّي شَفَٰعَتُهُمۡ شَيۡـًٔا وَلَا يُنقِذُونِ ٢٣ಹಾಗೆ ಮಾಡಿದರೆ (ಅನ್ಯರನ್ನು ಪೂಜಿಸಿದರೆ), ನಾನು ಸ್ಪಷ್ಟ ದಾರಿಗೇಡಿತನದಲ್ಲಿ ಇದ್ದಂತಾಗುವುದು إِنِّيٓ إِذًا لَّفِي ضَلَٰلٍ مُّبِينٍ ٢٤ನೀವು ನನ್ನ ಮಾತನ್ನು ಕೇಳಿರಿ ನಾನು ನಿಮ್ಮ ನೈಜ ಒಡೆಯನನ್ನು ನಂಬಿದ್ದೇನೆ إِنِّيٓ ءَامَنتُ بِرَبِّكُمۡ فَٱسۡمَعُونِ ٢٥(ಅವರು ಆತನನ್ನು ಕೊಂದಾಗ) ‘ಸ್ವರ್ಗವನ್ನು ಪ್ರವೇಶಿಸು’ ಎಂದು ಅವನೊಡನೆ ಹೇಳಲಾಯಿತು. ಅವನು ಹೇಳಿದನು; ‘‘ಅಯ್ಯೋ, ನನ್ನ ಜನಾಂಗದವರಿಗೆ (ಇದು) ತಿಳಿದಿದ್ದರೆ ಎಷ್ಟು ಚೆನ್ನಾಗಿತ್ತು!’’ قِيلَ ٱدۡخُلِ ٱلۡجَنَّةَۖ قَالَ يَٰلَيۡتَ قَوۡمِي يَعۡلَمُونَ ٢٦‘‘ನನ್ನ ಒಡೆಯನು ನನ್ನನ್ನು ಕ್ಷಮಿಸಿರುವನು ಮತ್ತು ನನ್ನನ್ನು ಗೌರವಾನ್ವಿತರ ಸಾಲಿಗೆ ಸೇರಿಸಿರುವನೆಂಬುದು (ಅವರಿಗೆ ತಿಳಿದಿರಬೇಕಿತ್ತು)’’ بِمَا غَفَرَ لِي رَبِّي وَجَعَلَنِي مِنَ ٱلۡمُكۡرَمِينَ ٢٧ಆತನ (ಮರಣದ ಬಳಿಕ) ನಾವೇನೂ ಅವನ ಜನಾಂಗದ ವಿರುದ್ಧ ಆಕಾಶದಿಂದ ಯಾವುದೇ ಪಡೆಯನ್ನು ಇಳಿಸಲಿಲ್ಲ. ಇಳಿಸುವ ಅಗತ್ಯವೂ ನಮಗಿರಲಿಲ್ಲ

الجزء الثالث والعشرون

۞ وَمَآ أَنزَلۡنَا عَلَىٰ قَوۡمِهِۦ مِنۢ بَعۡدِهِۦ مِن جُندٍ مِّنَ ٱلسَّمَآءِ وَمَا كُنَّا مُنزِلِينَ ٢٨ಅದು (ಅವರ ಶಿಕ್ಷೆ) ಕೇವಲ ಒಂದು ಭೀಕರ ಬಿರುಗಾಳಿಯಾಗಿತ್ತು. ಅಷ್ಟಕ್ಕೇ ಅವರು ಆರಿ ಹೋದರು إِن كَانَتۡ إِلَّا صَيۡحَةً وَٰحِدَةً فَإِذَا هُمۡ خَٰمِدُونَ ٢٩ಎಷ್ಟೊಂದು ಶೋಚನೀಯವಾಗಿದೆ, ದಾಸರ ಸ್ಥಿತಿ! ಅವರ ಬಳಿಗೆ ಬಂದ ಯಾವ ದೂತನನ್ನೂ ಅವರು ಗೇಲಿ ಮಾಡದೆ ಬಿಟ್ಟದ್ದಿಲ್ಲ يَٰحَسۡرَةً عَلَى ٱلۡعِبَادِۚ مَا يَأۡتِيهِم مِّن رَّسُولٍ إِلَّا كَانُواْ بِهِۦ يَسۡتَهۡزِءُونَ ٣٠ಅವರೇನು ನೋಡಿಲ್ಲವೇ, ಅವರಿಗಿಂತ ಹಿಂದೆ ಅದೆಷ್ಟು ನಾಡುಗಳನ್ನು ನಾವು ನಾಶಗೊಳಿಸಿ ಬಿಟ್ಟಿದ್ದೇವೆಂದು? ಅವರೆಂದೂ ಅವರ ಬಳಿಗೆ ಮರಳಿ ಬರಲಾರರು أَلَمۡ يَرَوۡاْ كَمۡ أَهۡلَكۡنَا قَبۡلَهُم مِّنَ ٱلۡقُرُونِ أَنَّهُمۡ إِلَيۡهِمۡ لَا يَرۡجِعُونَ ٣١ಅವರಲ್ಲಿನ ಪ್ರತಿಯೊಬ್ಬರನ್ನೂ ನಮ್ಮ ಬಳಿ ಒಟ್ಟಾಗಿ ಹಾಜರುಪಡಿಸಲಾಗುವುದು وَإِن كُلٌّ لَّمَّا جَمِيعٌ لَّدَيۡنَا مُحۡضَرُونَ ٣٢ನಿರ್ಜೀವ ಭೂಮಿಯು ಅವರ ಪಾಲಿಗೆ ಪುರಾವೆಯಾಗಿದೆ. ನಾವು ಅದನ್ನು ಜೀವಂತಗೊಳಿಸಿದೆವು ಹಾಗೂ ಅದರಿಂದ ಧಾನ್ಯಗಳನ್ನು ಉತ್ಪಾದಿಸಿದೆವು. ಅವುಗಳನ್ನೇ ಅವರು ತಿನ್ನುತ್ತಾರೆ وَءَايَةٌ لَّهُمُ ٱلۡأَرۡضُ ٱلۡمَيۡتَةُ أَحۡيَيۡنَٰهَا وَأَخۡرَجۡنَا مِنۡهَا حَبًّا فَمِنۡهُ يَأۡكُلُونَ ٣٣ಮತ್ತು ನಾವು ಅದರಲ್ಲಿ ಖರ್ಜೂರದ ಹಾಗೂ ದ್ರಾಕ್ಷಿಯ ತೋಟಗಳನ್ನು ಬೆಳೆಸಿದೆವು ಮತ್ತು ಅದರಲ್ಲಿ ನದಿಗಳನ್ನು ಹರಿಸಿದೆವು وَجَعَلۡنَا فِيهَا جَنَّٰتٍ مِّن نَّخِيلٍ وَأَعۡنَٰبٍ وَفَجَّرۡنَا فِيهَا مِنَ ٱلۡعُيُونِ ٣٤ಅವರು ಅದರ ಫಲಗಳನ್ನು ಉಣ್ಣಲೆಂದು (ನಾವು ಇದನ್ನೆಲ್ಲಾ ಮಾಡಿರುವೆವು). ಇದಾವುದನ್ನೂ ಅವರ ಕೈಗಳು ನಿರ್ಮಿಸಿಲ್ಲ. ಇಷ್ಟಾಗಿಯೂ ಅವರೇನು ಕೃತಜ್ಞತೆ ಸಲ್ಲಿಸುವುದಿಲ್ಲವೇ لِيَأۡكُلُواْ مِن ثَمَرِهِۦ وَمَا عَمِلَتۡهُ أَيۡدِيهِمۡۚ أَفَلَا يَشۡكُرُونَ ٣٥ಭೂಮಿಯು ಬೆಳೆಯುವ ಎಲ್ಲ ವಸ್ತುಗಳನ್ನೂ, ಸ್ವತಃ ಅವರನ್ನೂ, ಅವರಿಗೆ ತಿಳಿದಿಲ್ಲದ (ಹಲವು) ಜೀವಿಗಳನ್ನೂ – ಎಲ್ಲವನ್ನೂ ಜೋಡಿಗಳಾಗಿ ಸೃಷ್ಟಿಸಿದವನು (ಅಲ್ಲಾಹನು), ಪಾವನನು سُبۡحَٰنَ ٱلَّذِي خَلَقَ ٱلۡأَزۡوَٰجَ كُلَّهَا مِمَّا تُنۢبِتُ ٱلۡأَرۡضُ وَمِنۡ أَنفُسِهِمۡ وَمِمَّا لَا يَعۡلَمُونَ ٣٦ರಾತ್ರಿಯು ಅವರ ಪಾಲಿಗೆ ಪುರಾವೆಯಾಗಿದೆ. ನಾವು ಅದರಿಂದ ಹಗಲನ್ನು ಇಳಿಸಿಬಿಟ್ಟಾಗ, ಅವರು ಕತ್ತಲನ್ನು ಪಡೆಯುತ್ತಾರೆ وَءَايَةٌ لَّهُمُ ٱلَّيۡلُ نَسۡلَخُ مِنۡهُ ٱلنَّهَارَ فَإِذَا هُم مُّظۡلِمُونَ ٣٧ಮತ್ತು ಸೂರ್ಯನು, ತನಗೆ ನಿಗದಿ ಪಡಿಸಲಾಗಿರುವ ದಾರಿಯಲ್ಲಿ ಚಲಿಸುತ್ತಿರುತ್ತಾನೆ. ಇದು ಆ ಪ್ರಚಂಡ, ಸರ್ವಜ್ಞನು (ಅಲ್ಲಾಹನು) ಸ್ಥಾಪಿಸಿರುವ ವ್ಯವಸ್ಥೆ وَٱلشَّمۡسُ تَجۡرِي لِمُسۡتَقَرٍّ لَّهَاۚ ذَٰلِكَ تَقۡدِيرُ ٱلۡعَزِيزِ ٱلۡعَلِيمِ ٣٨ಇನ್ನು ಚಂದ್ರನಿಗೆ ನಾವು ಕೆಲವು ಹಂತಗಳನ್ನು ನಿಗದಿ ಪಡಿಸಿರುವೆವು. ಎಷ್ಟೆಂದರೆ ಅದು (ಬಾಲಚಂದ್ರ) ಖರ್ಜೂರದ ಹಳೆಯ ಗೆಲ್ಲಿನಂತಾಗಿ ಬಿಡುತ್ತದೆ وَٱلۡقَمَرَ قَدَّرۡنَٰهُ مَنَازِلَ حَتَّىٰ عَادَ كَٱلۡعُرۡجُونِ ٱلۡقَدِيمِ ٣٩ಚಂದ್ರನನ್ನು ಹಿಡಿಯಲು ಸೂರ್ಯನಿಗೆ ಸಾಧ್ಯವಿಲ್ಲ, ಹಗಲನ್ನು ಮೀರಿ ಬರಲು ರಾತ್ರಿಗೂ ಸಾಧ್ಯವಿಲ್ಲ. ಎಲ್ಲವೂ ಒಂದು ವೃತ್ತದಲ್ಲಿ ಚಲಿಸುತ್ತಿವೆ لَا ٱلشَّمۡسُ يَنۢبَغِي لَهَآ أَن تُدۡرِكَ ٱلۡقَمَرَ وَلَا ٱلَّيۡلُ سَابِقُ ٱلنَّهَارِۚ وَكُلٌّ فِي فَلَكٍ يَسۡبَحُونَ ٤٠ನಾವು ಅವರ ಸಂತತಿಯನ್ನು ತುಂಬಿದ ಹಡಗಿಗೆ ಹತ್ತಿಸಿದ್ದು, ಅವರ ಪಾಲಿಗೆ ಪುರಾವೆಯಾಗಿದೆ وَءَايَةٌ لَّهُمۡ أَنَّا حَمَلۡنَا ذُرِّيَّتَهُمۡ فِي ٱلۡفُلۡكِ ٱلۡمَشۡحُونِ ٤١ಮತ್ತು ನಾವು ಅವರಿಗಾಗಿ, ಅವರು ಸವಾರಿ ಮಾಡುವ ಇನ್ನೂ ಹಲವು ವಸ್ತುಗಳನ್ನು ಸೃಷ್ಟಿಸಿರುವುದು (ಪುರಾವೆಯಾಗಿದೆ) وَخَلَقۡنَا لَهُم مِّن مِّثۡلِهِۦ مَا يَرۡكَبُونَ ٤٢ನಾವು ಬಯಸಿದ್ದರೆ ಅವರನ್ನು ಮುಳುಗಿಸಿ ಬಿಡಬಹುದು. ಆಗ ಅವರ ಮೊರೆ ಕೇಳುವವರು ಯಾರೂ ಇರಲಾರರು ಮತ್ತು ಅವರು ರಕ್ಷಣೆ ಪಡೆಯಲಾರರು وَإِن نَّشَأۡ نُغۡرِقۡهُمۡ فَلَا صَرِيخَ لَهُمۡ وَلَا هُمۡ يُنقَذُونَ ٤٣ಆದರೆ, ಕೇವಲ ಒಂದು ನಿರ್ದಿಷ್ಟ ಕಾಲದವರೆಗೆ ಅವರು ನಮ್ಮ ಅನುಗ್ರಹದ ಫಲಾನುಭವಿಗಳಾಗಿರುತ್ತಾರೆ إِلَّا رَحۡمَةً مِّنَّا وَمَتَٰعًا إِلَىٰ حِينٍ ٤٤ನೀವು (ಅಲ್ಲಾಹನ) ಕೃಪೆಗೆ ಪಾತ್ರರಾಗಲು, ನಿಮ್ಮ ಮುಂದಿನ ಹಾಗೂ ನಿಮ್ಮ ಹಿಂದಿನ (ಕರ್ಮಗಳ) ಕುರಿತು ಎಚ್ಚರವಾಗಿರಿ ಎಂದು ಅವರೊಡನೆ ಹೇಳಿದಾಗಲೆಲ್ಲಾ وَإِذَا قِيلَ لَهُمُ ٱتَّقُواْ مَا بَيۡنَ أَيۡدِيكُمۡ وَمَا خَلۡفَكُمۡ لَعَلَّكُمۡ تُرۡحَمُونَ ٤٥ಮತ್ತು ತಮ್ಮ ಒಡೆಯನ ಪುರಾವೆಗಳ ಪೈಕಿ ಯಾವುದೇ ಪುರಾವೆ ಅವರ ಬಳಿಗೆ ಬಂದಾಗಲೆಲ್ಲಾ, ಅವರು ಅದನ್ನು ಕಡೆಗಣಿಸಿದ್ದಾರೆ وَمَا تَأۡتِيهِم مِّنۡ ءَايَةٍ مِّنۡ ءَايَٰتِ رَبِّهِمۡ إِلَّا كَانُواْ عَنۡهَا مُعۡرِضِينَ ٤٦ಅಲ್ಲಾಹನು ನಿಮಗೇನನ್ನು ನೀಡಿರುವನೋ ಅದರಿಂದ, (ಸತ್ಕಾರ್ಯಕ್ಕೆ) ಖರ್ಚು ಮಾಡಿರಿ ಎಂದು ತಮ್ಮೊಡನೆ ಹೇಳಿದಾಗಲೆಲ್ಲಾ (ಅವರು ಕಡೆಗಣಿಸಿದ್ದಾರೆ). ಧಿಕ್ಕಾರಿಗಳು, ವಿಶ್ವಾಸಿಗಳೊಡನೆ ಹೇಳುತ್ತಾರೆ: ಅಲ್ಲಾಹನು ಇಚ್ಛಿಸಿದ್ದರೆ ಸ್ವತಃ ಅವನೇ ಯಾರಿಗೆ ಉಣಿಸಿ ಬಿಡುತ್ತಿದ್ದನೋ, ಅಂಥವನಿಗೇನು ನಾವು ಉಣಿಸಬೇಕೇ? ನೀವಂತು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದೀರಿ وَإِذَا قِيلَ لَهُمۡ أَنفِقُواْ مِمَّا رَزَقَكُمُ ٱللَّهُ قَالَ ٱلَّذِينَ كَفَرُواْ لِلَّذِينَ ءَامَنُوٓاْ أَنُطۡعِمُ مَن لَّوۡ يَشَآءُ ٱللَّهُ أَطۡعَمَهُۥٓ إِنۡ أَنتُمۡ إِلَّا فِي ضَلَٰلٍ مُّبِينٍ ٤٧ಮತ್ತು ಅವರು, ನೀವು ಸತ್ಯವಂತರಾಗಿದ್ದರೆ, ಆ ವಾಗ್ದಾನ (ಪುನರುತ್ಥಾನ) ಈಡೇರುವುದು ಯಾವಾಗ (ಎಂಬುದನ್ನು ತಿಳಿಸಿ)? ಎಂದು ಕೇಳುತ್ತಾರೆ وَيَقُولُونَ مَتَىٰ هَٰذَا ٱلۡوَعۡدُ إِن كُنتُمۡ صَٰدِقِينَ ٤٨ನಿಜವಾಗಿ ಅವರು ಯಾವುದಕ್ಕಾಗಿ ಕಾಯುತ್ತಿರುವರೋ ಅದು ಹಠಾತ್ತನೆ ಬಂದೆರಗುವ ಒಂದು ಸಿಡಿಲು ಮಾತ್ರವಾಗಿರುವುದು – ಅವರು ಜಗಳಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳುವುದು مَا يَنظُرُونَ إِلَّا صَيۡحَةً وَٰحِدَةً تَأۡخُذُهُمۡ وَهُمۡ يَخِصِّمُونَ ٤٩ಉಯಿಲನ್ನು ಉಪದೇಶಿಸಲಿಕ್ಕಾಗಲಿ, ತಮ್ಮ ಮನೆಯವರ ಬಳಿಗೆ ಮರಳಿ ಹೋಗಲಿಕ್ಕಾಗಲಿ ಅವರಿಗೆ ಸಾಧ್ಯವಾಗದು فَلَا يَسۡتَطِيعُونَ تَوۡصِيَةً وَلَآ إِلَىٰٓ أَهۡلِهِمۡ يَرۡجِعُونَ ٥٠ಮತ್ತು (ಇನ್ನೊಮ್ಮೆ) ಕಹಳೆಯನ್ನು ಊದಲಾದಾಗ ಅವರೆಲ್ಲರೂ ಗೋರಿಗಳಿಂದ ಹಠಾತ್ತನೆ ಎದ್ದು ತಮ್ಮ ಒಡೆಯನೆಡೆಗೆ ಧಾವಿಸುವರು وَنُفِخَ فِي ٱلصُّورِ فَإِذَا هُم مِّنَ ٱلۡأَجۡدَاثِ إِلَىٰ رَبِّهِمۡ يَنسِلُونَ ٥١ಅವರು ಹೇಳುವರು: ಅಯ್ಯೋ ನಮ್ಮ ದುಸ್ಥಿತಿ! ನಮ್ಮನ್ನು ನಮ್ಮ ಗೋರಿಗಳಿಂದ ಎಬ್ಬಿಸಿದವರು ಯಾರು? ನಿಜವಾಗಿ, ಆ ಪರಮ ದಯಾಮಯನು ವಾಗ್ದಾನ ಮಾಡಿದ್ದು ಇದನ್ನೇ. ದೇವದೂತರು ಸತ್ಯವನ್ನೆ ಹೇಳಿದ್ದರು قَالُواْ يَٰوَيۡلَنَا مَنۢ بَعَثَنَا مِن مَّرۡقَدِنَاۜۗ هَٰذَا مَا وَعَدَ ٱلرَّحۡمَٰنُ وَصَدَقَ ٱلۡمُرۡسَلُونَ ٥٢ಅದು ಕೇವಲ ಒಂದು ಸಿಡಿಲಾಗಿರುವುದು. ಅಷ್ಟರಲ್ಲೇ ಅವರೆಲ್ಲರನ್ನೂ ನಮ್ಮ ಮುಂದೆ ಹಾಜರು ಪಡಿಸಲಾಗುವುದು إِن كَانَتۡ إِلَّا صَيۡحَةً وَٰحِدَةً فَإِذَا هُمۡ جَمِيعٌ لَّدَيۡنَا مُحۡضَرُونَ ٥٣ಇಂದು ಯಾರ ಮೇಲೂ ಕಿಂಚಿತ್ತೂ ಅನ್ಯಾಯವಾಗದು ಮತ್ತು ನಿಮಗೆ, ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲದ ಹೊರತು ಬೇರೇನೂ ಸಿಗದು فَٱلۡيَوۡمَ لَا تُظۡلَمُ نَفۡسٌ شَيۡـًٔا وَلَا تُجۡزَوۡنَ إِلَّا مَا كُنتُمۡ تَعۡمَلُونَ ٥٤ಸ್ವರ್ಗವಾಸಿಗಳು ಅಂದು ಖಂಡಿತ ಮೋಜಿನಲ್ಲಿ ನಿರತರಾಗಿರುವರು إِنَّ أَصۡحَٰبَ ٱلۡجَنَّةِ ٱلۡيَوۡمَ فِي شُغُلٍ فَٰكِهُونَ ٥٥ಅವರು ಮತ್ತವರ ಜೀವನ ಸಂಗಾತಿಗಳು ನೆರಳುಗಳಲ್ಲಿ ಸುಖವಾಗಿ ಒರಗಿ ಕೊಂಡಿರುವರು هُمۡ وَأَزۡوَٰجُهُمۡ فِي ظِلَٰلٍ عَلَى ٱلۡأَرَآئِكِ مُتَّكِـُٔونَ ٥٦ಅಲ್ಲಿ ಅವರಿಗಾಗಿ ವಿವಿಧ ಬಗೆಯ ಹಣ್ಣು ಹಂಪಲುಗಳಿರುವವು ಮತ್ತು ಅವರು ಅಪೇಕ್ಷಿಸಿದ್ದೆಲ್ಲವೂ ಅವರಿಗೆ ಸಿಗುವುದು لَهُمۡ فِيهَا فَٰكِهَةٌ وَلَهُم مَّا يَدَّعُونَ ٥٧ಸಲಾಮ್ (ಶಾಂತಿ) ಎಂಬ, ಕರುಣಾಳು ಒಡೆಯನ ಮಾತು (ಅಲ್ಲಿ ಮೊಳಗುತ್ತಿರುವುದು) سَلَٰمٌ قَوۡلًا مِّن رَّبٍّ رَّحِيمٍ ٥٨ಅಪರಾಧಿಗಳೇ, ಇಂದು ನೀವು ಪ್ರತ್ಯೇಕವಾಗಿರಿ وَٱمۡتَٰزُواْ ٱلۡيَوۡمَ أَيُّهَا ٱلۡمُجۡرِمُونَ ٥٩ಆದಮರ ಸಂತತಿಗಳೇ, ನಾನು ನಿಮಗೆ ಆದೇಶಿಸಿರಲಿಲ್ಲವೇ, ನೀವು ಶೈತಾನನ ಆರಾಧಕರಾಗಬೇಡಿ, ಅವನು ಖಂಡಿತ ನಿಮ್ಮ ಸ್ಪಷ್ಟ ಶತ್ರುವಾಗಿದ್ದಾನೆಂದು ۞ أَلَمۡ أَعۡهَدۡ إِلَيۡكُمۡ يَٰبَنِيٓ ءَادَمَ أَن لَّا تَعۡبُدُواْ ٱلشَّيۡطَٰنَۖ إِنَّهُۥ لَكُمۡ عَدُوٌّ مُّبِينٌ ٦٠ಮತ್ತು ನೀವು ನನ್ನೊಬ್ಬನನ್ನೇ ಆರಾಧಿಸಬೇಕು, ಅದುವೇ ನೇರ ಮಾರ್ಗವೆಂದು وَأَنِ ٱعۡبُدُونِيۚ هَٰذَا صِرَٰطٌ مُّسۡتَقِيمٌ ٦١ಅವನು ನಿಮ್ಮಲ್ಲಿ ಬಹು ಮಂದಿಯನ್ನು ದಾರಿಗೆಡಿಸಿದ್ದಾನೆ. ನೀವೇನು ಬುದ್ಧಿಯನ್ನು ಬಳಸಿರಲಿಲ್ಲವೇ وَلَقَدۡ أَضَلَّ مِنكُمۡ جِبِلًّا كَثِيرًاۖ أَفَلَمۡ تَكُونُواْ تَعۡقِلُونَ ٦٢ಇದುವೇ ನಿಮಗೆ ವಾಗ್ದಾನ ಮಾಡಲಾಗಿದ್ದ ನರಕ هَٰذِهِۦ جَهَنَّمُ ٱلَّتِي كُنتُمۡ تُوعَدُونَ ٦٣ನೀವು (ಸತ್ಯವನ್ನು) ಧಿಕ್ಕರಿಸಿದ್ದರ ಪ್ರತಿಫಲವಾಗಿ ಇಂದು ಇದರೊಳಗೆ ಪ್ರವೇಶಿಸಿರಿ ٱصۡلَوۡهَا ٱلۡيَوۡمَ بِمَا كُنتُمۡ تَكۡفُرُونَ ٦٤ಇಂದು ನಾವು ಅವರ (ಧಿಕ್ಕಾರಿಗಳ) ಬಾಯಿಗಳಿಗೆ ಮುದ್ರೆ ಜಡಿದಿರುವೆವು. ನಮ್ಮೊಡನೆ ಅವರ ಕೈಗಳು ಮಾತನಾಡುವವು ಮತ್ತು ಅವರು ಏನೆಲ್ಲಾ ಮಾಡಿದ್ದರೆಂದು ಅವರ ಕಾಲುಗಳು ಸಾಕ್ಷಿ ಹೇಳುವವು ٱلۡيَوۡمَ نَخۡتِمُ عَلَىٰٓ أَفۡوَٰهِهِمۡ وَتُكَلِّمُنَآ أَيۡدِيهِمۡ وَتَشۡهَدُ أَرۡجُلُهُم بِمَا كَانُواْ يَكۡسِبُونَ ٦٥ನಾವು ಬಯಸಿದರೆ ಅವರ ಕಣ್ಣುಗಳನ್ನು ನುಚ್ಚು ನೂರುಗೊಳಿಸಿ ಬಿಡಬಲ್ಲೆವು. ಆ ಬಳಿಕ ಅವರು ದಾರಿಯೆಡೆಗೆ ಧಾವಿಸಲಿ. ಅವರು ಏನನ್ನು ತಾನೇ ಕಾಣಬಲ್ಲರು وَلَوۡ نَشَآءُ لَطَمَسۡنَا عَلَىٰٓ أَعۡيُنِهِمۡ فَٱسۡتَبَقُواْ ٱلصِّرَٰطَ فَأَنَّىٰ يُبۡصِرُونَ ٦٦ನಾವು ಬಯಸಿದರೆ, ಅವರು ಇರುವಲ್ಲೇ ಅವರ ರೂಪಗಳನ್ನು ವಿಕೃತಗೊಳಿಸಿ ಬಿಡಬಲ್ಲೆವು – ಆ ಬಳಿಕ ಅವರಿಗೆ ಮುಂದೆ ಹೋಗಲಿಕ್ಕೂ ಸಾಧ್ಯವಾಗದು, ಮರಳಲಿಕ್ಕೂ ಆಗದು وَلَوۡ نَشَآءُ لَمَسَخۡنَٰهُمۡ عَلَىٰ مَكَانَتِهِمۡ فَمَا ٱسۡتَطَٰعُواْ مُضِيًّا وَلَا يَرۡجِعُونَ ٦٧ನಾವು ಯಾರಿಗೆ ಧೀರ್ಘ ಆಯುಷ್ಯವನ್ನು ಕೊಡುತ್ತೇವೋ, ಅವರನ್ನು ರಚನೆಯಲ್ಲಿ (ದುರ್ಬಲ ಸ್ಥಿತಿಗೆ) ಮರಳಿಸಿ ಬಿಡುತ್ತೇವೆ. ಅವರೇನು ಬುದ್ದಿಯನ್ನು ಬಳಸುವುದಿಲ್ಲವೇ وَمَن نُّعَمِّرۡهُ نُنَكِّسۡهُ فِي ٱلۡخَلۡقِۚ أَفَلَا يَعۡقِلُونَ ٦٨ನಾವು ಅವರಿಗೆ (ದೂತರಿಗೆ) ಕಾವ್ಯವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶವಾಗಿದೆ ಮತ್ತು ಸ್ಪಷ್ಟವಾದ ಕುರ್‌ಆನ್ ಆಗಿದೆ وَمَا عَلَّمۡنَٰهُ ٱلشِّعۡرَ وَمَا يَنۢبَغِي لَهُۥٓۚ إِنۡ هُوَ إِلَّا ذِكۡرٌ وَقُرۡءَانٌ مُّبِينٌ ٦٩ಜೀವಂತವಿರುವ ಎಲ್ಲರನ್ನೂ ಅವರು (ದೂತರು) ಎಚ್ಚರಿಸಬೇಕೆಂದು ಹಾಗೂ ಧಿಕ್ಕಾರಿಗಳ ವಿರುದ್ಧ ಸಾಕ್ಷವು ಪೂರ್ತಿಯಾಗಲೆಂದು (ನಾವು ಇದನ್ನು ಕಳಿಸಿರುವೆವು) لِّيُنذِرَ مَن كَانَ حَيًّا وَيَحِقَّ ٱلۡقَوۡلُ عَلَى ٱلۡكَٰفِرِينَ ٧٠ಅವರು ನೋಡುತ್ತಿಲ್ಲವೇ, ಅವರು ಮಾಲಕರಾಗಿರುವ ಜಾನುವಾರುಗಳನ್ನು ನಾವು ಅವರಿಗಾಗಿ ನಮ್ಮ ಕೈಯಾರೆ ಸೃಷ್ಟಿಸಿರುವೆವು أَوَلَمۡ يَرَوۡاْ أَنَّا خَلَقۡنَا لَهُم مِّمَّا عَمِلَتۡ أَيۡدِينَآ أَنۡعَٰمًا فَهُمۡ لَهَا مَٰلِكُونَ ٧١ನಾವು ಅವುಗಳನ್ನು ಅವರಿಗೆ ವಿಧೇಯಗೊಳಿಸಿರುವೆವು. ಅವರು ಆ ಪೈಕಿ ಕೆಲವನ್ನು ಸವಾರಿಗಾಗಿ ಬಳಸಿದರೆ, ಕೆಲವನ್ನು ಆಹಾರವಾಗಿ ಬಳಸುತ್ತಾರೆ وَذَلَّلۡنَٰهَا لَهُمۡ فَمِنۡهَا رَكُوبُهُمۡ وَمِنۡهَا يَأۡكُلُونَ ٧٢ಅವುಗಳಲ್ಲಿ ಅವರಿಗೆ ಹಲವು ಲಾಭಗಳಿವೆ, ಕುಡಿಯುವ ವಸ್ತುಗಳೂ ಇವೆ. ಇಷ್ಟಿದ್ದೂ ಅವರು ಕೃತಜ್ಞತೆ ತೋರುವುದಿಲ್ಲವೇ وَلَهُمۡ فِيهَا مَنَٰفِعُ وَمَشَارِبُۚ أَفَلَا يَشۡكُرُونَ ٧٣ಅವರು ಅಲ್ಲಾಹನ ಹೊರತು ಇತರರಿಂದ ತಮಗೆ ನೆರವು ದೊರಕೀತೆಂದು ಅವರನ್ನು ತಮ್ಮ ದೇವರಾಗಿಸಿಕೊಂಡಿದ್ದಾರೆ وَٱتَّخَذُواْ مِن دُونِ ٱللَّهِ ءَالِهَةً لَّعَلَّهُمۡ يُنصَرُونَ ٧٤ಅವರು ಇವರಿಗೆ ನೆರವಾಗಲು ಶಕ್ತರಲ್ಲ. ಆದರೂ, ಇವರು ಅವರ ಮುಂದೆ ದಂಡುಗಳಂತೆ ಹಾಜರಾಗುತ್ತಾರೆ لَا يَسۡتَطِيعُونَ نَصۡرَهُمۡ وَهُمۡ لَهُمۡ جُندٌ مُّحۡضَرُونَ ٧٥(ದೂತರೇ,) ಅವರ ಮಾತುಗಳಿಂದ ನೀವು ದುಃಖಿತರಾಗಬೇಡಿ. ಅವರು ಬಚ್ಚಿಡುವ ಹಾಗೂ ಪ್ರಕಟ ಪಡಿಸುವ ಎಲ್ಲವನ್ನೂ ನಾವು ಬಲ್ಲೆವು فَلَا يَحۡزُنكَ قَوۡلُهُمۡۘ إِنَّا نَعۡلَمُ مَا يُسِرُّونَ وَمَا يُعۡلِنُونَ ٧٦ಮನುಷ್ಯನು ಕಂಡಿಲ್ಲವೇ, ನಾವು ಅವನನ್ನು ವೀರ್ಯದಿಂದ ಸೃಷ್ಟಿಸಿರುವುದನ್ನು? ಇಷ್ಟಾಗಿಯೂ ಅವನು ಸ್ಪಷ್ಟ ಜಗಳಗಂಟನಾಗಿ ಬಿಟ್ಟಿರುವನು أَوَلَمۡ يَرَ ٱلۡإِنسَٰنُ أَنَّا خَلَقۡنَٰهُ مِن نُّطۡفَةٍ فَإِذَا هُوَ خَصِيمٌ مُّبِينٌ ٧٧ಅವನು ನಮ್ಮ ಕುರಿತು (ಏನೇನೋ) ಹೋಲಿಕೆಗಳನ್ನು ಕಟ್ಟುತ್ತಾನೆ. ನಿಜವಾಗಿ ಅವನು ತನ್ನ ಜನನವನ್ನು ಮರೆತಿದ್ದಾನೆ. ಎಲುಬುಗಳು ಕರಗಿ ಹೋದ ಬಳಿಕ ಅವುಗಳನ್ನು ಯಾರು ತಾನೆ ಜೀವಂತಗೊಳಿಸಬಲ್ಲರು? ಎಂದು ಅವನು ಪ್ರಶ್ನಿಸುತ್ತಾನೆ وَضَرَبَ لَنَا مَثَلًا وَنَسِيَ خَلۡقَهُۥۖ قَالَ مَن يُحۡيِ ٱلۡعِظَٰمَ وَهِيَ رَمِيمٌ ٧٨ಹೇಳಿರಿ; ಅವುಗಳನ್ನು ಮೊದಲ ಬಾರಿ ಸೃಷ್ಟಿಸಿದವನೇ ಅವುಗಳನ್ನು ಮತ್ತೆ ಸೃಷ್ಟಿಸುವನು. ಅವನು ಎಲ್ಲ ಬಗೆಯ ಸೃಷ್ಟಿ ಕಾರ್ಯವನ್ನು ಬಲ್ಲವನಾಗಿದ್ದಾನೆ قُلۡ يُحۡيِيهَا ٱلَّذِيٓ أَنشَأَهَآ أَوَّلَ مَرَّةٍۖ وَهُوَ بِكُلِّ خَلۡقٍ عَلِيمٌ ٧٩ಅವನೇ, ನಿಮಗಾಗಿ ಹಸಿರು ಮರದಿಂದ ಬೆಂಕಿಯನ್ನು ಉತ್ಪಾದಿಸಿದವನು, ನೀವೀಗ ಅದರಿಂದಲೇ ಬೆಂಕಿಯನ್ನು ಉರಿಸುತ್ತೀರಿ ٱلَّذِي جَعَلَ لَكُم مِّنَ ٱلشَّجَرِ ٱلۡأَخۡضَرِ نَارًا فَإِذَآ أَنتُم مِّنۡهُ تُوقِدُونَ ٨٠ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದವನು ಇವರಂಥವರನ್ನು ಸೃಷ್ಟಿಸಲು ಅಸಮರ್ಥನೇ? ಖಂಡಿತ ಅಲ್ಲ. ಅವನಂತು, ಎಲ್ಲವನ್ನೂ ಬಲ್ಲ, ತಜ್ಞ ಸೃಷ್ಟಿಕರ್ತನಾಗಿದ್ದಾನೆ أَوَلَيۡسَ ٱلَّذِي خَلَقَ ٱلسَّمَٰوَٰتِ وَٱلۡأَرۡضَ بِقَٰدِرٍ عَلَىٰٓ أَن يَخۡلُقَ مِثۡلَهُمۚ بَلَىٰ وَهُوَ ٱلۡخَلَّٰقُ ٱلۡعَلِيمُ ٨١ಅವನು ಏನನ್ನಾದರೂ ಮಾಡಲು ಇಚ್ಛಿಸಿದಾಗ, ಅದಕ್ಕೆ ‘ಆಗು’ ಎಂದಷ್ಟೆ ಹೇಳುತ್ತಾನೆ ಮತ್ತು ಅಷ್ಟರಲ್ಲೇ ಅದು ಆಗಿ ಬಿಟ್ಟಿರುತ್ತದೆ إِنَّمَآ أَمۡرُهُۥٓ إِذَآ أَرَادَ شَيۡـًٔا أَن يَقُولَ لَهُۥ كُن فَيَكُونُ ٨٢ಅವನು ಪಾವನನು, ಎಲ್ಲ ವಸ್ತುಗಳ ಪರಮಾಧಿಕಾರವು ಅವನ ಕೈಯಲ್ಲಿದೆ. (ಕೊನೆಗೆ) ನಿಮ್ಮೆಲ್ಲರನ್ನೂ ಅವನೆಡೆಗೇ ಮರಳಿಸಲಾಗುವುದು فَسُبۡحَٰنَ ٱلَّذِي بِيَدِهِۦ مَلَكُوتُ كُلِّ شَيۡءٍ وَإِلَيۡهِ تُرۡجَعُونَ ٨٣ಶಿಸ್ತು ಬದ್ಧವಾಗಿ ಸಾಲುಗಟ್ಟಿರುವವರ (ಮಲಕ್‌ಗಳ) ಆಣೆ

الترجمة: Abdussalam Puthige.